ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಮಲತಾಗೆ ಬೆಂಬಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಉಚ್ಛಾಟನೆ

|
Google Oneindia Kannada News

Recommended Video

Lok Sabha Elections 2019: ಸುಮಲತಾರನ್ನ ಬೆಂಬಲಿಸಲು ಹೊರಟ ಏಳು ಮಂಡ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಉಚ್ಛಾಟನೆ

ಮಂಡ್ಯ, ಏಪ್ರಿಲ್ 10: ಮಂಡ್ಯ ಲೋಸಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲಿಸಿದ ಕಾರಣ ಏಳು ಕಾಂಗ್ರೆಸ್ ಮುಖಂಡರನ್ನು ಉಚ್ಛಾಟನೆ ಮಾಡಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸುಮಲತಾ ಅವರನ್ನು ಬೆಂಬಲಿಸಿದರೆ ಉಚ್ಛಾಟನೆಯ ಶಿಕ್ಷೆ ನೀಡಲಾಗುವುದು ಎಂದು ಮೊದಲಿನಿಂದಲೂ ಎಚ್ಚರಿಕೆ ನೀಡಲಾಗುತ್ತಿತ್ತು, ಇಂದು ಅಂತಿಮವಾಗಿ ಉಚ್ಛಾಟನೆ ಮಾಡಲಾಗಿದೆ.

ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾಗೆ ಗೆಲುವು: ಸಮೀಕ್ಷೆ ವರದಿಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾಗೆ ಗೆಲುವು: ಸಮೀಕ್ಷೆ ವರದಿ

ಹೆಚ್.ಅಪ್ಪಾಜಪ್ಪ, ಮಂಡ್ಯ ಗ್ರಾಮಾಂತರ, ಎ.ಎಸ್.ರಾಜೀವ್, ಭಾರತೀ ನಗರ, ಪುಟ್ಟರಾಮು, ಮಳವಳ್ಳಿ ಗ್ರಾಮಾಂತರ, ಕೆ.ಜೆ.ದೇವರಾಜ್, ಮಳವಳ್ಳಿ ನಗರ, ಎಂ.ಪ್ರಸನ್ನ, ನಾಗಮಂಗಲ ನಗರ, ಕೆ.ಆರ್.ರವೀಂದ್ರ ಬಾಬು, ಕೆ.ಆರ್.ಪೇಟೆ, ಎಸ್.ಬಿ.ಪ್ರಕಾಶ್, ಮೇಲುಕೋಟೆ ಉಚ್ಛಾಟನೆ ಮಾಡಲಾಗಿರುವ ಏಳೂ ಮಂದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.

Seven Mandya block congress presidents has been evicted

ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಇವರೆಲ್ಲರೂ ಪ್ರಚಾರ ಮಾಡುತ್ತಿದ್ದರು ಎನ್ನಲಾಗಿದೆ. ಅದೇ ಆರೋಪದ ಮೇಲೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ವೈ.ಘೋರ್ಪಡೆ ಅವರು ಉಚ್ಛಾಟನೆ ಆದೇಶ ಹೊರಡಿಸಿದ್ದಾರೆ.

ಮಂಡ್ಯದ ಸಾಕ್ಷಾತ್ ಸಮೀಕ್ಷೆ ಸಾಮಾಜಿಕ ಜಾಲತಾಣದಲ್ಲಿ ವೈರಲ್! ಮಂಡ್ಯದ ಸಾಕ್ಷಾತ್ ಸಮೀಕ್ಷೆ ಸಾಮಾಜಿಕ ಜಾಲತಾಣದಲ್ಲಿ ವೈರಲ್!

ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯು ಬೆಂಬಲ ಸೂಚಿಸಿದ್ದು, ಹಲವು ಕಾಂಗ್ರೆಸ್ ಸ್ಥಳೀಯ ಮುಖಂಡರು ಸಹ ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ. ಇದು ಕುಮಾರಸ್ವಾಮಿ ಹಾಗೂ ಕೆಪಿಸಿಸಿಗೆ ಮುಜುಗರ ತಂದಿದೆ.

English summary
Seven Mandya block congress presidents has been evicted from congress party for giving support to independent candidate Sumalatha Ambareesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X