ಶ್ರೀರಂಗಪಟ್ಟಣ ಚುನಾವಣಾ ಫಲಿತಾಂಶ 2023: ಜೆಡಿಎಸ್ ಭದ್ರಕೋಟೆ ಛಿದ್ರಗೊಳಿಸಿದ ಎ.ಬಿ. ರಮೇಶ ಬಂಡಿಸಿದ್ದೇಗೌಡ
ಮಂಡ್ಯ, ಮೇ 13: ಸದ್ಯ ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನ ಎ.ಬಿ. ರಮೇಶ ಬಂಡಿಸಿದ್ದೇಗೌಡ 68,871 ಮತಗಳನ್ನು ಪಡೆದು ಗೆಲವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ 57,875 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ರವೀಂದ್ರ ಶ್ರೀಕಂಠಯ್ಯ ಅವರು ಕಳೆದ ಮೂರು ಬಾರಿಯಿಂದಲೂ ಶಾಸಕರಾಗಿದ್ದಾರೆ. ಅವರಿಗೆ ಪ್ರತಿಸ್ಪರ್ಧಿಯಾಗಿ ಮಾಜಿ ಸಿಎಂ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಮತ್ತು ಬಿಜೆಪಿಯಿಂದ ಇಂಡುವಾಳು ಸಚ್ಚಿದಾನಂದ ಅವರು ಸ್ಪರ್ಧೆಗೆ ಇಳಿದಿದ್ದರು.
2018ರ ವಿಧಾನಸಭಾ ಚುನಾವಣೆಯಲ್ಲಿ ರವೀಂದ್ರ ಶ್ರೀಕಂಠಯ್ಯ ಅವರು 101,307 ಮತಗಳನ್ನು ಪಡೆದು 43,688 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇಕಡ 57.35ರಷ್ಟು ಮತಗಳು ಲಭಿಸಿದ್ದವು. ಅವರು ಪ್ರತಿಸ್ಫರ್ಧಿಯಾಗಿರುವ ಎಬಿ ರಮೇಶ್ ಬಂಡಿಸಿದ್ದೇಗೌಡ ಅವರು 57,619 ಮತಗಳನ್ನು ಪಡೆದಿದ್ದರು.

ಶ್ರೀರಂಗಪಟ್ಟಣ ಅಖಾಡದಲ್ಲಿ ಜೆಡಿಎಸ್ ನಿಂದ ಹಾಲಿ ಶಾಸಕ ಡಾ.ರವೀಂದ್ರ ಶ್ರೀಕಂಠಯ್ಯ, ಕಾಂಗ್ರೆಸ್‌ನಿಂದ ಮಾಜಿ ಸಿಎಂ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಮತ್ತು ಬಿಜೆಪಿಯಿಂದ ಇಂಡುವಾಳು ಸಚ್ಚಿದಾನಂದ ಅವರು ಸ್ಪರ್ಧೆಗೆ ಇಳಿದಿದ್ದಾರೆ. ಇಲ್ಲಿ ಒಟ್ಟು ಮೂವರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯುವ ಮೂಲಕ ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಜೆಡಿಎಸ್ ಇಲ್ಲಿ ಕಳೆದ ನಾಲ್ಕು ಬಾರಿಯಿಂದ ಗೆಲುವು ಸಾಧಿಸುತ್ತ ಬಂದಿದೆ. 2004ರಲ್ಲಿ ವಿಜಯಲಕ್ಷ್ಮಮ್ಮ ಬಂಡಿಸಿದ್ದೇಗೌಡ ಜೆಡಿಎಸ್‌ನಿಂದ ಸ್ಫರ್ಧಿಸಿ ಗೆಲವು ಸಾಧಿಸಿದ್ದರು, 2008 ಹಾಗೂ 2013ರಲ್ಲಿ ಎ.ಬಿ.ರಮೇಶ ಬಂಡಿಸಿದ್ದೇಗೌಡ ಎರಡು ಬಾರಿ ಜೆಡಿಎಸ್‌ನಿಂದ ನಿಂತು ಗೆಲುವು ಪಡೆದಿದ್ದರು. 2018ರಲ್ಲಿ ಜೆಡಿಎಸ್‌ನಿಂದ ರವೀಂದ್ರ ಶ್ರೀಕಂಠಯ್ಯ ಸ್ಪರ್ಧೆ ಮಾಡಿ ಗೆದ್ದಿದ್ದಾರೆ.

ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿತ್ತು. ಇಲ್ಲಿ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಕಳೆದ ಬಾರಿ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದವರು ಅವರು. ಮಾಜಿ ಶಾಸಕ ರಮೇಶ್ ಬಾಬು ಸಹ ಜನಮನ್ನಣೆ ಗಳಿಸಿದ್ದು, ಕ್ಷೇತ್ರದಲ್ಲಿ ಅನುಭವಿಸಿದ್ದ ಹಿನ್ನಡೆಗೆ ಪ್ರತಿಕಾರ ತೀರಿಸಿಕೊಳ್ಳಲು ಕ್ಷೇತ್ರದ ತುಂಬೆಲ್ಲ ಓಡಾಟ ಆರಂಭಿಸಿದ್ದರು. ಇನ್ನೂ ಹಳೇ ಮೈಸೂರು ಭಾಗದಲ್ಲಿ ಭಾವುಟ ನೆಡಲು ಕಾಯುತ್ತಿರುವ ಬಿಜೆಪಿ ಇತ್ತೀಚೆಗಷ್ಟೇ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಅವರು ಬಿಜೆಪಿ ಸೇರಿ ಕಣಕ್ಕೆ ಇಳಿದಿದ್ದಾರೆ.
ಇನ್ನು ಕಾಂಗ್ರೆಸ್‌ನ ರಮೇಶ್ ಬಾಬು ಅವರು ಮೊದಲು ಜೆಡಿಎಸ್‌ನಲ್ಲಿದ್ದವು. ಆಗ ಪಕ್ಷೇತರ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯನನ್ನು ಸೋಲಿಸಿದ್ದರು. ಬಳಿಕ ಕಾಂಗ್ರೆಸ್ ಸೇರಿದರು. ಪಕ್ಷೇತರ ರವೀಂದ್ರ ಶ್ರೀಕಂಠಯ್ಯ ಜೆಡಿಎಸ್ ಸೇರ್ಪಡೆಗೊಂಡರು. ಶಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ರಮೇಶ್ ಬಾಬು ಕಾಂಗ್ರೆಸ್ ಗ್ಯಾರಂಟಿ ಭರವಸೆಗಳನ್ನು ಅಸ್ತ್ರವಾಗಿ ಬಳಸಲಿದ್ದಾರೆ.












Click it and Unblock the Notifications