ಮಹದೇವಪ್ಪ ನಿಂಗೂ ಫ್ರೀ, ನಂಗೂ ಫ್ರೀ, ಯಾರೂ ಕರಂಟ್ ಬಿಲ್ ಕಟ್ಟಬೇಕಾಗಿಲ್ಲ: ಟಿಕ್‌ಟಾಕ್ ವಿಡಿಯೋ ವೈರಲ್
ಮಂಡ್ಯ, ಮೇ, 26: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ವ್ಯಕ್ತಿಯೊಬ್ಬ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸದ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಟಿಕ್‌ಟಾಕ್ ಮೂಲಕ ಅಣಕಿಸಿ ವಿಡಿಯೋ ಮಾಡಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಪ್ರಚಾರ ಸಭೆಗಳಲ್ಲಿ ಮಾತನಾಡಿದ ಮಾದರಿಯಂತೆ ಉಚಿತ ವಿದ್ಯುತ್ ಬಗ್ಗೆ ತಾಲೂಕಿನ ಕೆರಗೋಡು ಗ್ರಾಮದ ವ್ಯಕ್ತಿಯೊಬ್ಬರು ಮಾಡಿರುವ ಟಿಕ್‌ಟಾಕ್ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.

ಕರೆಂಟ್ ಬಿಲ್ ಕಟ್ಟಿ ಎಂದು ಸೆಸ್ಕಾಂ ಸಿಬ್ಬಂದಿ ಹೋದ ಸಮಯದಲ್ಲಿ ವ್ಯಕ್ತಿಯೊಬ್ಬ ಸಿದ್ದರಾಮಯ್ಯ ರೀತಿಯಲ್ಲೇ ಡೈಲಾಗ್ ಹೇಳಲಾರಂಭಿಸಿದ್ದು, ಮಹದೇವಪ್ಪ ಕರಂಟ್ ನಿಂಗೂ ಫ್ರೀ, ನಂಗೂ ಫ್ರೀ ಎನ್ನುತ್ತಲೇ ಟಿಕ್‌ಟಾಕ್ ಮಾಡುವ ಮೂಲಕ ಗಮನ ಸೆಳೆದಿದ್ದಾನೆ.
ಇದರಿಂದ ವಿದ್ಯುತ್ ಬಿಲ್ ವಸೂಲಿಗೆ ಹೋದ ಸೆಸ್ಕ್ ಸಿಬ್ಬಂದಿ ಸಿದ್ದರಾಮಯ್ಯ ರೀತಿ ಡೈಲಾಗ್ ಹೊಡೆಯುವ ವ್ಯಕ್ತಿಯನ್ನು ಕಂಡು ಪೇಚಿಗೆ ಸಿಲುಕಿದ್ದಾರೆ. ಕರಂಟ್ ಬಿಲ್ ಕಟ್ಟಣ್ಣ ಎಂದು ಸೆಸ್ಕಾಂ ಸಿಬ್ಬಂದಿ ಕೇಳಿದರೆ, ಕರಂಟ್ ಬಿಲ್ ಕೇಳಿದರೆ ನಿಮ್ಮನ್ನೇ ಕಟ್ಟಿ ಹಾಕುತ್ತೇನೆ ಎಂದು ವ್ಯಕ್ತಿ ಬೆದರಿಕೆ ಹಾಕಿದ ಘಟನೆಯೂ ನಡೆದಿದೆ.
ಹಾಗೆಯೆ ಕರಂಟ್ ಬಿಲ್ ಕಟ್ಟುವಂತೆ ಗ್ರಾಮದಲ್ಲಿ ಸೆಸ್ಕ್ ಸಿಬ್ಬಂದಿ ಹೋದರೆ, ಟಿಕ್‌ಟಾಕ್ ಮಾಡಿರುವ ವೀಡಿಯೋವನ್ನು ಗ್ರಾಮಸ್ಥರು ತೋರಿಸಿ ನಾವೂ ಬಿಲ್ ಕಟ್ಟಲ್ಲ ಎಂದು ಸಿಬ್ಬಂದಿಯನ್ನೇ ತರಾಟೆಗೆ ತೆಗೆದುಕೊಂಡು ವಾಪಸ್ಸು ಕಳುಹಿಸುತ್ತಿರುವ ಘಟನೆಗಳೂ ಹಲವೆಡೆ ನಡೆದಿರುವ ಉದಾಹರಣೆಗಳು ಇವೆ.
ಕರೆಂಟ್ ಬಿಲ್ ಕಟ್ಟಬೇಡಿ
ಹಾಗೆಯೆ ಜನತೆ ಕಾಂಗ್ರೆಸ್‌ನ ಆಶ್ವಾಸನೆಯನ್ನು ನಂಬಿ ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದು ಇಂದಿಗೆ 20 ದಿನ ಕಳೆದರೂ ಯಾವುದೇ ಯೋಜನೆಗಳ ಬಗ್ಗೆ ಮಾತುಗಳಿಲ್ಲ. ಕರೆಂಟ್ ಬಿಲ್ ನೀಡಲು ಬರುವ ಸಿಬ್ಬಂದಿ ಮೇಲೆ ಹಲ್ಲೆಗಳಾಗುತ್ತಿದೆ. ರಾಜ್ಯದ ಜನತೆ ಸರಿ ಇದ್ದಾರೆ. ಹಾಗಾಗಿ ಬಿಲ್ ಕಟ್ಟಬಾರದೆಂದು ನಾನು ಕರೆ ಕೊಡುತ್ತೇನೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಚುನಾವಣೆ ಪೂರ್ವದಲ್ಲಿ ಐದು ಉಚಿತ ಭರವಸೆ ನೀಡುತ್ತೇವೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸರ್ಕಾರ ಬಂದ 24 ಗಂಟೆಯಲ್ಲಿ ಗ್ಯಾರಂಟಿ ಭರವಸೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಅಂದಿದ್ದರು. ಸುಳ್ಳು ಆಶ್ವಾಸನೆ ಕೊಟ್ಟು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೇರಿದೆ. ಯಾವುದೇ ಮಾನದಂಡಗಳಿಲ್ಲದೆ ಭಾಗ್ಯಗಳು ಸಿಗುತ್ತದೆಂದು ಹೇಳಿದ್ದರು. ಆದರೆ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಎಲ್ಲಾದರೂ ಜನರಿಗೆ ತೊಂದರೆಯಾದಲ್ಲಿ ನಾವು ಸಮ್ಮುನಿರುವುದಿಲ್ಲ ಎಂದು ಹೇಳಿದರು.
ಆರ್.ಎಸ್.ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದಾರೆ. ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.
ಹಾಗೆಯೆ ನಿಷೇಧದ ಕೆಲಸ ಮಾಡಿದಾಗಲೆಲ್ಲಾ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಸಿದ್ದರಾಮಯ್ಯ ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಅವರ ರಾಜಕೀಯ ಮುಗಿಯುತ್ತದೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಬಂಧಿಸಲಿ ಎಂದು ಸವಾಲೆಸಿದರು.
ಇವತ್ತು ಕಾಂಗ್ರೆಸ್‌ನ ರಾಜನೀತಿಯಿಂದ ರಾಜ್ಯದಲ್ಲಿ ಅರಾಜಕತೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಪ್ರಾರಂಭ ಮಾಡಿದೆ. ಅಶ್ವತ್ಥ್ ನಾರಾಯಣ್ ಯಾವುದೋ ಸಂದರ್ಭದಲ್ಲಿ ತಪ್ಪಾಗಿ ಮಾತನಾಡಿದ್ದಾರೆ. ಅದಕ್ಕೆ ಕ್ಷಮೆ ಕೂಡ ಕೇಳಿದ್ದಾರೆ. ಈಗ ಅವರ ಮೇಲೆ ಎಫ್ಐಆರ್ ಹಾಕಿದ್ದಾರೆ. ಹಾಗೆಯೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ಇಟ್ಟುಕೊಂಡು ಕೇಸ್ ಮಾಡಿದ್ದಾರೆ. ಬಂಟ್ವಾಳದ ಮಾಣಿಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ ಮಾಡಿದವರ ಬದಲು ಹಲ್ಲೆಗೊಳಗಾದವರ ಮೇಲೆ ಕೇಸ್ ಹಾಕಿದ್ದಾರೆಂದು ಗುಡುಗಿದರು.
ಕಾಂಗ್ರೆಸ್ ಗೂಂಡಾಗಿರಿ ಹಾಗೂ ದ್ವೇಷದ ರಾಜಕಾರಣದ ಮೂಲಕ ವಿರೋಧ ಪಕ್ಷವನ್ನು ಮೆಟ್ಟಿ ನಿಲ್ಲಬಹುದು ಅಂದುಕೊಂಡಿದೆ. ಸಿದ್ದರಾಮಯ್ಯರ ತಾತಾ, ಮುತ್ತಾತನೂ ಈ ಕೆಲಸ ಮಾಡಿ ಯಶಸ್ವಿ ಆಗಿಲ್ಲ. ಸಂವಿಧಾನಿಕ ಸರ್ಕಾರ ಕೆಲಸ ಮಾಡಬೇಕು, ಅದು ಬಿಟ್ಟು ದ್ವೇಷ ರಾಜಕಾರಣ ಬೇಡ. ಈ ಸರ್ಕಾರ ಹೆಚ್ಚು ದಿನ ಬಾಳಲ್ಲ, ಉಳಿಯೋದಿಲ್ಲ. ಅಧಿಕಾರಿಗಳಿಗೆ ಒತ್ತಡ ಮತ್ತು ಭಯದ ವಾತಾವರಣದ ಮೂಲಕ ನಿಯಂತ್ರಣ ಹೇರುತ್ತಾ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Videlo: ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ










Click it and Unblock the Notifications