ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ: ಸಿದ್ದರಾಮಯ್ಯ ಹೀಗೆ ಹೇಳಿದ್ಯಾರಿಗೆ?

ಮಂಡ್ಯ , ಏಪ್ರಿಲ್ 22: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಕರೆ ನೀಡಿದರು.

Siddaramaiah Sins Don t Go Away Immediately After You Make A Mistake And Worship God

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದು ಹೇಳಿದರು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದ ಅವರು, ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.

ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ

ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಹೇಳಿದರು.

ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ. ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ.

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+