ಬಿಜೆಪಿಗೆ ಬನ್ನಿ: ಕಾಂಗ್ರೆಸ್‌ನಲ್ಲಿರುವ ಬೆಂಬಲಿಗರನ್ನು ಆಹ್ವಾನಿಸಿದ ಎಸ್‌ ಎಂ ಕೃಷ್ಣ

ಮಂಡ್ಯ, ಫೆಬ್ರವರಿ 9: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ತಮ್ಮ ಜತೆಗಾರರು, ಬೆಂಬಲಿಗರನ್ನು ಬಿಜೆಪಿ ಸೇರಿಕೊಳ್ಳುವಂತೆ ಆಹ್ವಾನಿಸಿದ್ದಾರೆ.

ನನ್ನ ಜತೆ ಕಾಂಗ್ರೆಸ್‌ನಲ್ಲಿದ್ದವರು ಎಲ್ಲರೂ ಬಿಜೆಪಿಗೆ ಬನ್ನಿ ಎಂದು ಅವರು ಮಂಡ್ಯದ ಮದ್ದೂರಿನಲ್ಲಿ ಹೇಳಿದ್ದಾರೆ.

ಈ ಹಿಂದೆ ನಾನು ಕಾಂಗ್ರೆಸ್‌ನಲ್ಲಿ ಇದ್ದಾಗ ಜತೆಗಿದ್ದವರೆಲ್ಲರೂ ಬಿಜೆಪಿಗೆ ಬರಬೇಕು ಎನ್ನುವುದು ನನ್ನ ಆಸೆ. ಈ ಬಗ್ಗೆ ನಾನು ಬೆಂಬಲಿಗರ ಜತೆ ನಿರಂತರವಾಗಿ ಮಾತನಾಡುತ್ತಿದ್ದೇನೆ ಎಂದು ಎಸ್.ಎಂ. ಕೃಷ್ಣ ಅವರು ಹೇಳಿದ್ದಾರೆ.

sm krishna invited his congress followers and supporters to bjp

ಮಂಡ್ಯದಲ್ಲಿ ಬಿಜೆಪಿಯನ್ನು ಬಲಗೊಳಿಸಲು ಎಸ್‌ಎಂ ಕೃಷ್ಣ ಅವರ ಮೂಲಕ ಬಿಜೆಪಿ ಪ್ರಯತ್ನ ನಡೆಸಿದೆ. ಅದಕ್ಕಾಗಿ ಶನಿವಾರ ಬಿಜಿಎಸ್ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ.

2017ರ ಜನವರಿಯಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ತೊರೆದಿದ್ದ ಎಸ್.ಎಂ. ಕೃಷ್ಣ, ಮಾರ್ಚ್‌ನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

ಚುನಾವಣಾ ರಾಜಕೀಯದಿಂದ ದೂರ ಉಳಿದಿರುವ ಅವರು ಬಿಜೆಪಿಯ ಪ್ರಮುಖ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಂಡಿದ್ದು ತೀರಾ ಕಡಿಮೆ. 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೂಡ ಅವರು ಅಷ್ಟಾಗಿ ಸಕ್ರಿಯರಾಗಿರಲಿಲ್ಲ. ಆದರೆ, ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸುವ ಸಾಧ್ಯತೆ ಇದೆ.

ಈ ಹಿಂದೆ ಭಾರತವು ದುರ್ಬಲ, ಅಂಜುಬುರುಕ ಮತ್ತು ಕೈಗೊಂಬೆಯ ನಾಯಕರನ್ನು ನೋಡಿತ್ತು. ಮೊದಲ ಬಾರಿಗೆ ದೃಢ ನಿರ್ಧಾರ ತೆಗೆದುಕೊಳ್ಳುವ ನಾಯಕನನ್ನು ನೋಡುತ್ತಿದ್ದೇವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಜನತೆ ಬಯಸುತ್ತಿದ್ದಾರೆ ಎಂಬುದಾಗಿ ಕೃಷ್ಣ ಸಂದರ್ಶನವೊಂದರಲ್ಲಿ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+