ಮಂಡ್ಯದ ಕಲ್ಲಹಳ್ಳಿಗೆಯ ಭೂವರಹನಾಥನಿಗೆ ವಿಶೇಷ ಪೂಜೆ: ಯಾಕೆ?
ಮಂಡ್ಯ, ಏಪ್ರಿಲ್ 29: ರೇವತಿ ನಕ್ಷತ್ರ ಹಾಗೂ ವರಹಾ ಜಯಂತಿಯು ಒಂದೇ ದಿನದ ಏಕಕಾಲದಲ್ಲಿ ಬಂದಿರುವ ಹಿನ್ನಲೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವರಹನಾಥ ಕಲ್ಲಹಳ್ಳಿಯ ಆರಾಧ್ಯದೈವ ಭೂದೇವಿ ಸಮೇತ ಶ್ರೀಲಕ್ಷ್ಮೀವರಹನಾಥಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಲಾಗಿದ್ದು, ಈ ವೇಳೆ ಭಕ್ತ ಸಾಗರವೇ ಹರಿದು ಬಂದಿತು.
ಈ ವೇಳೆ ಭೂದೇವಿ ಸಮೇತ ಶ್ರೀಲಕ್ಷ್ಮೀವರಹನಾಥಸ್ವಾಮಿಗೆ ಪವಿತ್ರ ಗಂಗಾಜಲ, ಒಂದು ಸಾವಿರ ಲೀಟರ್ ಹಾಲು, ಐನೂರು ಲೀಟರ್ ಕಬ್ಬಿನ ಹಾಲು, ಐನೂರು ಲೀಟರ್ ಎಳನೀರು, ಹಸುವಿನ ತುಪ್ಪ, ಜೇನುತುಪ್ಪ, ಶ್ರೀಗಂಧ, ಅರಿಶಿನ, ಸುಗಂಧ ದ್ರವ್ಯಗಳಿಂದ ಅಭಿಷೇಕ ಮಾಡಿ ಮಲ್ಲಿಗೆ, ಜಾಜಿ, ಸಂಪಿಗೆ, ಸೇವಂತಿಗೆ, ಧವನ, ಪವಿತ್ರ ಪತ್ರೆಗಳು, ತುಳಸಿ, ಗುಲಾಬಿ, ಕಮಲ ಸೇರಿದಂತೆ 58 ಬಗೆಯ ವಿಶೇಷ ಹೂವುಗಳಿಂದ ಪುಪ್ಪಾಭಿಷೇಕ ನಡೆಸಿ, ಪಟ್ಟಾಭಿಷೇಕ ಮಾಡಿ ದೇವಾಲಯದ ಸುತ್ತಲೂ ಅಡ್ಡ ಪಲ್ಲಕಿ ಉತ್ಸವ ನಡೆಸಿ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಇದೇ ವೇಳೆ ಹೋಳಿಗೆ, ಪುಳಿಯೋಗರೆ, ಸಿಹಿಪೊಂಗಲ್, ಮೊಸರನ್ನ ಹಾಗೂ ಬಿಸಿಬೇಳೆ ಬಾತ್ ಪ್ರಸಾದ ಸವಿದ 25ಸಾವಿರಕ್ಕೂ ಹೆಚ್ಚಿನ ಭಕ್ತರು ಭೂದೇವಿ ಸಮೇತ ಶ್ರೀ ಲಕ್ಷ್ಮೀವರಹನಾಥ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ದೇವಾಲಯ ವ್ಯವಸ್ಥಾಪನಾ ಸಮಿತಿಯ ಸಂಚಾಲಕರಾದ ಡಾ.ಶ್ರೀನಿವಾಸರಾಘವನ್ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿ ಮಾತನಾಡಿ 'ರೇವತಿ ನಕ್ಷತ್ರ ಹಾಗೂ ವರಹಾ ಜಯಂತಿಯು ಒಂದೇ ದಿನದ ಏಕಕಾಲದಲ್ಲಿ ಬಂದಿರುವ ಈ ಶುಭ ದಿನದಲ್ಲಿ ಭೂ ವ್ಯಾಜ್ಯಗಳ ಪರಿಹಾರಕ ಹಾಗೂ ಲೋಕರಕ್ಷಕನಾದ ವರಹಾ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಹೋಮ ಹವನದ ಮೂಲಕ ಲೋಕದ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಗಿದೆ' ಎಂದರು.
'150 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಭೂ ವರಾಹನಾಥ ಸ್ವಾಮಿಗೆ ತಿರುಮಲ ತಿರುಪತಿಯ ಮಾದರಿಯಲ್ಲಿ ಮೂರು ಪ್ರಾಕಾರಗಳ ದೇವಾಲಯವನ್ನು ಸಂಪೂರ್ಣವಾಗಿ ಗ್ರಾನೈಟ್ ಕಲ್ಲಿನಿಂದ ಹೊಯ್ಸಳ ವಾಸ್ತು ವೈಭವದ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಇನ್ನು ಮೂರು ವಾರಗಳಲ್ಲಿ ದೇವಾಲಯದ ಕೆಲಸವನ್ನು ಸಂಪೂರ್ಣಗೊಳಿಸಲು ಸಂಕಲ್ಪ ಮಾಡಿರುವ ಪರಕಾಲ ಸ್ವಾಮಿಗಳು, ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಎಲ್ಲಾ ರೀತಿಯ ಅನುಕೂಲಗಳನ್ನು ಒದಗಿಸಿಕೊಡಲು ಕಾರ್ಯಕ್ರಮ ರೂಪಿಸಿದ್ದಾರೆ' ಎಂದು ಹೇಳಿದರು.
ಇನ್ನೊಂದೆಡೆ ಕೃಷ್ಣರಾಜಪೇಟೆ ಗ್ರಾಮದೇವತೆ ಶ್ರೀ ದೊಡ್ಡಕೇರಮ್ಮನವರ ವೈಭವದ ಬ್ರಹ್ಮರಥೋತ್ಸವವು ಅದ್ದೂರಿಯಾಗಿ ನಡೆಯಿತು. ಐದು ವರ್ಷಗಳ ನಂತರ ನಡೆದ ರಥೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿ ಸಂಭ್ರಮಿಸಿದ್ದಾರೆ. ಶ್ರೀ ರಥದ ಕಳಸಕ್ಕೆ ಭಕ್ತರು ಹಣ್ಣು ಜವನ ಎಸೆದು ಭಕ್ತಿ ಮೆರೆದಿದ್ದಾರೆ. ಶ್ರೀರಥವು ಯಾವುದೇ ಅಡ್ಡಯಿಲ್ಲದೇ ನಗರ ಪ್ರದಕ್ಷಿಣೆ ಹಾಕಿ ಸ್ವಸ್ಥಾನವನ್ನು ಸೇರಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications