• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀರಂಗಪಟ್ಟಣ ಜಂಬೂ ಸವಾರಿ ಮೆರವಣಿಗೆ; ಮಹೇಂದ್ರ ಆನೆಯ ಗಾಂಭೀರ್ಯ ನಡೆ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಶ್ರೀರಂಗಪಟ್ಟಣ, ಸೆಪ್ಟೆಂಬರ್‌, 28: ಶ್ರೀರಂಗಪಟ್ಟಣಲ್ಲಿ ಜಂಬೂ ಸವಾರಿ ಮೆರವಣಿಗೆಯೂ ಅದ್ದೂರಿಯಾಗಿ ನೆರವೇರಿದೆ. ಶ್ರೀಚಾಮುಂಡೇಶ್ವರಿ ವಿಗ್ರಹದ ಅಂಬಾರಿ ಹೊತ್ತ ಮಹೇಂದ್ರ ಆನೆ ಗಾಂಭೀರ್ಯದ ನಡಿಗೆ ಮೂಲಕ ಜಂಬೂ ಸವಾರಿಯ ಕೇಂದ್ರ ಬಿಂದುವೆನಿಸಿತ್ತು. ಮಹೇಂದ್ರನಿಗೆ ವಿಜಯ ಹಾಗೂ ಕಾವೇರಿ ಆನೆಗಳು ಸಾಥ್ ನೀಡಿ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ವೈಭವಕ್ಕೆ ಮೆರಗು ನೀಡಿದವು.

ಕಿರಂಗೂರು ಬನ್ನಿಮಂಟಪದ ಬಳಿ ಮದ್ಯಾಹ್ನ 4 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಪುಷ್ಪಾರ್ಚನೆ ಮಾಡುವ ಮೂಲಕ ಅಂಬಾರಿ ಮೆರವಣಿಗೆಗೆ ಚಾಲನೆ ನೀಡಿದರು. ಇದಕ್ಕೂ ಮುನ್ನ ವಿಶೇಷ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿದ್ದ ಬನ್ನಿಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ದೇಶಿಕೇಂದ್ರ ಮಹಾಸ್ವಾಮೀಜಿಗೆ ಆಹ್ವಾನಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ದೇಶಿಕೇಂದ್ರ ಮಹಾಸ್ವಾಮೀಜಿಗೆ ಆಹ್ವಾನ

ವೇದಬ್ರಹ್ಮ ಡಾ.ಭಾನುಪ್ರಕಾಶ್‌ ಶರ್ಮಾ ನೇತೃತ್ವದಲ್ಲಿ ಮೊದಲಿಗೆ ಸ್ಥಳ ಶುದ್ಧಿ, ಗಣಪತಿ ಹೋಮ, ದುರ್ಗಾಶಪ್ತಸತಿ ಪಾರಾಯಣ, ಬನ್ನಿಪೂಜೆ, ಶತವೃದ್ರ ಪಾರಾಯಣ, ಕೂಷ್ಮಾಂಡ ಛೇದನ, ಮಹಾಮಂಗಳಾರತಿ ಸೇರಿದಂತೆ ಹಲವು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಶಾಸಕ ರವೀಂದ್ರ ಶ್ರೀಕಂಠಯ್ಯ ದಂಪತಿಗಳ ಸಮೇತ ಪೂಜೆಯಲ್ಲಿ ಪಾಲ್ಗೊಂಡಿದ್ದರು.

 ಅಂಬಾರಿ ಮೆರವಣಿಗೆ ಹೊರಟ ಮಾರ್ಗ

ಅಂಬಾರಿ ಮೆರವಣಿಗೆ ಹೊರಟ ಮಾರ್ಗ

ಬನ್ನಿಮಂಟಪದಿಂದ ಹೊರಟ ಅಂಬಾರಿ ಮೆರವಣಿಗೆಯು ಕಿರಂಗೂರು, ಬಾಬುರಾಯನ ಕೊಪ್ಪಲು ಮಾರ್ಗವಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಶ್ರೀರಂಗಪಟ್ಟಣ ಮುಖ್ಯ ದ್ವಾರವನ್ನು ಪ್ರವೇಶಿಸಿತು. ಪಟ್ಟಣದ ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ಸೇರಿದ್ದ ಅಪಾರ ಜನಸ್ತೋಮವು ಅಂಬಾರಿ ಮೆರವಣಿಗೆ ಹಾಗೂ ಕಲಾತಂಡಗಳ ಸೊಬಗನ್ನು ಕಣ್ತುಂಬಿಕೊಂಡರು. ಶ್ರೀ ರಂಗನಾಥಸ್ವಾಮಿ ದೇವಾಲಯದ ಹತ್ತಿರ ನಿರ್ಮಾಣಗೊಂಡಿರುವ ವೇದಿಕೆ ಬಳಿ ಮೆರವಣಿಗೆಯನ್ನು ಅಂತ್ಯಗೊಳಿಸಲಾಯಿತು.

 ಹಬ್ಬಕ್ಕೆ ಮತ್ತಷ್ಟು ರಂಗು ತುಂಬಿದ ವಿದೇಶಿಗರು

ಹಬ್ಬಕ್ಕೆ ಮತ್ತಷ್ಟು ರಂಗು ತುಂಬಿದ ವಿದೇಶಿಗರು

ಮೆರವಣಿಗೆಯಲ್ಲಿ ಪೂಜಾ ಕುಣಿತ, ಡೊಳ್ಳು ಕುಣಿತ, ಪೊಲೀಸ್ ಬ್ಯಾಂಡ್, ಅಶ್ವದಳ, ವೀರಗಾಸೆ, ಗೊಂಬೆ ಕುಣಿತ, ಕಂಸಾಳೆ, ಕೊಂಬು ಕಹಳೆ, ಚಿಲಿಪಿಲಿ ಗೊಂಬೆ, ನಂದಿದ್ವಜ, ನಾದಸ್ವರ, ಕೋಲಾಟ, ನಾಸಿಕ್ ಬ್ಯಾಂಡ್, ಯಕ್ಷಗಾನ, ದೊಣ್ಣೆವರಸೆ, ಹೆನ್ ಆಕ್ಟ್, ಕೇಳರ ಥೈಯಂ, ಲೋಟಸ್ ಡ್ಯಾನ್ಸ್‌ ಹ್ಯಾಂಟ್, ವೈಲಿಂಗ್ ಗರ್ಸ್‌, ಪಿಕಾಕ್ ಡ್ಯಾನ್ಸ್‌, ಲಂಬಾಣಿ ನೃತ್ಯ, ಕತಕ್‌ಕಳಿ, ಮೋಹಿನಿ ಆಟ್ಟಂ, ದಾಂಡ್ಯ ನೃತ್ಯ, ಮಣಿಪುರ್ ನೃತ್ಯ, ವಿದೇಶಿ ಕಲಾವಿದರಿಂದ ಗೋವಾ ಕಾರ್ನಿಂಗ್ ವಾಲ್ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಇನ್ನು ಮಿರರ್ ಮ್ಯಾನ್, ಚೈನಿಸ್ ಲಯನ್, ಹ್ಯಾಲೋ ಮ್ಯಾನ್, ಕೇರಳ ದಂಡೆ ವಾದ್ಯ ಸೇರಿದಂತೆ ಹಲವು ಜಾನಪದ ಕಲಾತಂಡಗಳು ಗಮನ ಸೆಳೆದವು. ವಿವಿಧ ಇಲಾಖೆಗಳಿಂದ ಸಾಮಾಜಿಕ ಕಾಳಜಿಯುಳ್ಳ ಹತ್ತಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು. ಪೊಲೀಸ್ ಇಲಾಖೆ ಏರ್ಪಡಿಸಿದ್ದ ಹೆಲ್ಮೆಟ್ ಕಡ್ಡಾಯ ಇಲ್ಲದಿದ್ದರೆ ಯಮಲೋಕಕ್ಕೆ ಪಯಣ ಖಚಿತ ಎಂಬ ಸ್ತಬ್ದ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

 ಮೆರವಣಿಗೆಯಲ್ಲಿ ನೆರೆದಿದ್ದ ಜನಸಾಗರ

ಮೆರವಣಿಗೆಯಲ್ಲಿ ನೆರೆದಿದ್ದ ಜನಸಾಗರ

ಬನ್ನಿಮಂಟಪದ ಬಳಿ ವಿಶೇಷ ಪೂಜೆ ಹಾಗೂ ಅಂಬಾರಿ ಮೆರವಣಿಗೆ ಚಾಲನೆ ನೀಡುವ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರು-ಮೈಸೂರು ಹೆದ್ದಾರಿ, ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣ, ಪುರಸಭೆ ವೃತ್ತ ಹಾಗೂ ತಾಲೂಕು ಕಚೇರಿ ಮುಂಭಾಗ ಆಸನದ ವ್ಯವಸ್ಥೆ ಮಾಡಲಾಗಿತ್ತು.

 ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗಿಯಾದ್ದರು?

ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗಿಯಾದ್ದರು?

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ ಯುವ ಸಬಲೀಕರಣ ಹಾಗೂ ಕ್ರೀಡೆ ಸಚಿವ ಕೆ.ಸಿ.ನಾರಾಯಣಗೌಡ, ಶಾಸಕರ ರವೀಂದ್ರ ಶ್ರೀಕಂಠಯ್ಯ, ಜಿಲ್ಲಾಧಿಕಾರಿ ಎಸ್.ಅಶ್ವಥಿ, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಪುರಸಭೆ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

English summary
Srirangapatna grand Dasara celebrations launched, Mahendra elephant movement attracted attention, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X