ಸೆ. 28ರಿಂದ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ; ಭರದಿಂದ ಸಾಗಿದೆ ಸಿದ್ಧತೆ
ಮಂಡ್ಯ, ಸೆಪ್ಟೆಂಬರ್ 26 : ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಉತ್ಸವ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದ್ದು , ಸಿದ್ಧತಾ ಕಾರ್ಯಕ್ರಮಗಳು ಭರದಿಂದ ಸಾಗಿವೆ. ಸೆಪ್ಟೆಂಬರ್ 28 ರಂದು ಮಧ್ಯಾಹ್ನ 2.15 ಗಂಟೆಗೆ ಕಿರಂಗೂರು ಬನ್ನಿ ಮಂಟಪದಲ್ಲಿ ನಂದಿ ಧ್ವಜ ಪೂಜೆ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದೆ.
ಕಾರ್ಯಕ್ರಮವನ್ನು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಟದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮಧ್ಯಾಹ್ನ : 3.00 ಗಂಟೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಉದ್ಘಾಟಿಸಲಿದ್ದಾರೆ. ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ , ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ, ಮಾನ್ಯ ಸಹಕಾರ ಸಚಿವರು ಎಸ್.ಐ ಸೋಮಶೇಖರ್, ಮುಜರಾಯಿ ಹಾಗೂ ಹಜ್ ಮತ್ತು ವಕ್ಸ್ ಸಚಿವೆ ಶಶಿಕಲಾ ಜೊಲ್ಲೆ ರವರು ಉಪಸ್ಥಿತಿ ವಹಿಸಲಿದ್ದಾರೆ. ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಸೆಪ್ಟೆಂಬರ್ 29 ರಂದು ಸಂಜೆ 6-30ಕ್ಕೆ ಶ್ರೀ ರಂಗನಾಥ ವೇದಿಕೆಯಲ್ಲಿ ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯಾ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಕಂದಾಯ ಸಚಿವ ಆರ್. ಆಶೋಕ್ ಉದ್ಘಾಟಿಸಲಿದ್ದಾರೆ. ಅಬಕಾರಿ ಸಚಿವ ಗೋಪಾಲಯ್ಯ ಮಾತನಾಡುವರು.

ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರು ಡಾ. ಕೆ.ಸಿ. ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಶ್ರೀರಂಗ ವೇದಿಕೆಯಲ್ಲಿ ಪ್ರತಿದಿನ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನ ಹಾಗೂ ಸಂಗೀತ ರಸ ಸಂಜೆಯಲ್ಲಿ ಖ್ಯಾತ ನಟ, ನಟಿಯರು, ಗಾಯಕ, ಗಾಯಕಿಯರಿಂದ ಆಕರ್ಷಕ ಹಾಗೂ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 2 ರಂದು ನಾಡಹಬ್ಬ ಶ್ರೀರಂಗಪಟ್ಟಣ ದಸರಾ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಆವರಣದ ಶ್ರೀರಂಗ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಮಂಡ್ಯ ಜಿಲ್ಲೆಯ ಶಾಸಕು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.












Click it and Unblock the Notifications