ಮಂಡ್ಯ; ಆತ್ಮಹತ್ಯೆಗೆ ಯತ್ನಿಸಿದ ಶ್ರೀರಂಗಪಟ್ಟಣ ಡಿವೈಎಸ್ಪಿ

ಮಂಡ್ಯ, ಅಕ್ಟೋಬರ್ 13 : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಡಿವೈಎಸ್ಪಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶ್ರೀರಂಗಪಟ್ಟಣದ ಡಿವೈಎಸ್ಪಿ ಯೋಗಾನಂದ್ ಭಾನುವಾರ ಬೆಳಗ್ಗೆ ಕೈ ಮತ್ತು ಕಾಲಿನ ನರಗಳನ್ನು ಕಟ್ ಮಾಡಿಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದಾರೆ. ರಕ್ತದ ಮಡುವಿನಲ್ಲಿ ಬಿದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಬೂರಾಯನಕೊಪ್ಪಲು ಗ್ರಾಮದಲ್ಲಿನ ನಿವಾಸದಲ್ಲಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಿ ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.

Srirangapatna DySP Suicide Attempt At House

ಕೆಲವು ತಿಂಗಳ ಹಿಂದೆ ಯೋಗಾನಂದ್ ಶ್ರೀರಂಗಪಟ್ಟಣದ ಡಿವೈಎಸ್ಪಿಯಾಗಿ ನೇಮಕವಾಗಿದ್ದರು. ಬಾಬೂರಾಯನಕೊಪ್ಪಲು ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕುಟುಂಬದ ಜೊತೆ ವಾಸವಾಗಿದ್ದರು. ಮನೆಯಲ್ಲಿಯೇ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಯೋಗಾನಂದ್ ಅದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೈಸೂರಿನ ಆಸ್ಪತ್ರೆಯಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+