ಶ್ರೀರಂಗಪಟ್ಟಣ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ; ಅಪ್‌ಡೇಟ್
ಮಂಡ್ಯ, ಫೆಬ್ರವರಿ 07: ಶ್ರೀರಂಗಪಟ್ಟಣ-ಕುಶಾಲನಗರ ನಡುವಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾಗಲು ದಿನಗಣನೆ ಆರಂಭವಾಗಿದೆ. 92 ಕಿ. ಮೀ. ಮಾರ್ಗ ಇದಾಗಿದ್ದು, 4,130 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗುತ್ತದೆ.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಶ್ರೀರಂಗಪಟ್ಟಣ-ಕುಶಾಲನಗರ ನಡುವಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಯೋಜನೆ ಕುರಿತು ಮೈಸೂರಿನಲ್ಲಿ ಸಭೆಯನ್ನು ನಡೆಸಿದರು. ಫೆಬ್ರವರಿ ತಿಂಗಳ ಅಂತ್ಯಕ್ಕೆ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಹೇಳಿದರು.

ಪ್ರತಾಪ್ ಸಿಂಹ ಮಾತನಾಡಿ, "ಶ್ರೀರಂಗಪಟ್ಟಣ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275ರ ಚತುಷ್ಪಥ ರಸ್ತೆ ನಿರ್ಮಾಣ ಸಂಬಂಧ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದೆ" ಎಂದರು.
ಯೋಜನೆ ವಿವರ; "92 ಕಿ. ಮೀ. ಉದ್ದದ ನಾಲ್ಕು ಪಥದ ರಸ್ತೆಯ ಜೊತೆ ಸರ್ವೀಸ್ ರಸ್ತೆಗಳು ಇರಲಿವೆ. 1,351.67 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ 691.89 ಎಕರೆ ಸ್ವಾಧೀನ ಪ್ರಕ್ರಿಯೆ ಮುಗಿದಿದ್ದು, 477 ಕೋಟಿ ಪರಿಹಾರವನ್ನು ನೀಡಲಾಗಿದೆ" ಎಂದು ಪ್ರತಾಪ್ ಸಿಂಹ ತಿಳಿಸಿದರು.
ಒಟ್ಟು ಎರಡು ಪ್ಯಾಕೇಜ್‌ಗಳಲ್ಲಿ ಈ ಕಾಮಗಾರಿ ನಡೆಯುವ ನಿರೀಕ್ಷೆ ಇದೆ. ಶ್ರೀರಂಗಪಟ್ಟಣ-ಹುಣಸೂರು, ಹುಣಸೂರು-ಕುಶಾಲನಗರ ಎಂದು ಕಾಮಗಾರಿಯನ್ನು ಎರಡು ಪ್ಯಾಕೇಜ್ ಮಾಡಲಾಗುತ್ತದೆ. ಮೊದಲ ಹಂತದ ಶ್ರೀರಂಗಪಟ್ಟಣ-ಹುಣಸೂರು ಕಾಮಗಾರಿ ಮೊದಲು ಆರಂಭವಾಗಲಿದೆ.
ಈ ಯೋಜನೆಗಾಗಿ ಶ್ರೀರಂಗಪಟ್ಟಣ, ಮೈಸೂರು, ಪಿರಿಯಾಪಟ್ಟಣ, ಕುಶಾಲನಗರ ತಾಲೂಕಿನ ರೈತರು ಭೂಮಿ ಕಳೆದುಕೊಳ್ಳಲಿದ್ದು, ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬೆಲೆಯನ್ನು ನೀಡಿ, ರೈತರಿಗೆ ಪರಿಹಾರ ನೀಡಲಾಗುತ್ತದೆ.
4 ಪಥದ ರಸ್ತೆ ಯೋಜನೆಗೆ ಭೂಮಿ ನೀಡುವ ರೈತರಿಗೆ ಆಯಾ ಪ್ರದೇಶ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಹಾರ ದೊರೆಯಲಿದೆ. ಈ ರಸ್ತೆ ನಿರ್ಮಾಣದಿಂದ ಪ್ರಯಾಣಿಕರಿಗೆ ಸಮಯ ಮತ್ತು ಸುತ್ತಾಟವೂ ಕಡಿಮೆಯಾಗಲಿದೆ.
ಮೈಸೂರು-ಮಡಿಕೇರಿ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಸಾರ್ವಜನಿಕರ ಅನುಕೂಲಕ್ಕೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಶ್ರೀರಂಗಪಟ್ಟಣ-ಕುಶಾಲನಗರ ರಸ್ತೆ ಕಾಮಗಾರಿ ಆರಂಭಿಸಲು ಸಿದ್ಧತೆಗಳು ನಡೆದಿದ್ದು, ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ.
ಈ ಹೆದ್ದಾರಿ ಯೋಜನೆಯಲ್ಲಿ ಪಿರಿಯಾಪಟ್ಟಣ ಮತ್ತು ಕುಶಾಲನಗರ ಭಾಗದಲ್ಲಿ 135 ಎಕರೆ ಅರಣ್ಯ ಭೂಮಿ ಇತ್ತು. ಇಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಜನವರಿ 29ರಂದು ಅನುಮತಿಯೂ ಸಿಕ್ಕಿದೆ. ಯೋಜನಾ ವೆಚ್ಚ 4,130 ಕೋಟಿ ರೂ. ಇದರಲ್ಲಿ ಭೂ ಸ್ವಾಧೀನ ಪರಿಹಾರಕ್ಕೆ 1,100 ಕೋಟಿ ರೂ. ನೀಡಲಾಗುತ್ತದೆ.
4 ಲೈನ್ ರಸ್ತೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಾಲಹಳ್ಳಿಯಿಂದ ಆರಂಭಗೊಳ್ಳಲಿದೆ. ಕೊಡಗು ಜಿಲ್ಲೆಯಲ್ಲಿ 2.3 ಕಿ. ಮೀ., ಮೈಸೂರು ಜಿಲ್ಲೆಯಲ್ಲಿ 75.9 ಕಿ. ಮೀ. ಮತ್ತು ಮಂಡ್ಯದಲ್ಲಿ 14 ಕಿ. ಮೀ. ಇರಲಿದೆ.
2023ರ ನವೆಂಬರ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಈ ಯೋಜನೆಯ ಟೆಂಡರ್ ಅಂತಿಮಗೊಳಿಸುವ ಮುನ್ನ ಯೋಜನೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಸರ್ಕಾರಿ ಇಲಾಖೆಗಳ ವತಿಯಿಂದ ವಿದ್ಯುತ್ ಪೂರೈಕೆ, ನೀರು ಸರಬರಾಜು, ಅರಣ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರದ ಅವಶ್ಯಕತೆ ಇರುವುದರಿಂದ ಹಾಗೂ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಲು ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದರು.
2021ರಲ್ಲಿ ಈ 4 ಪಥದ ರಸ್ತೆಯ ಯೋಜನೆ ರೂಪಿಸಲಾಗಿತ್ತು. ಆಗ ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದ ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯು 15 ತಿಂಗಳಲ್ಲಿ ಆರಂಭವಾಗಲಿದೆ ಎಂದು ಅಂದಾಜಿಸಲಾಗಿತ್ತು. ಈಗ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡು ಕಾಮಗಾರಿ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications