ಮಂಡ್ಯ; ಶುಕ್ರವಾರದಿಂದ ಕೋವಿಡ್ ರೋಗಿಗಳಿಗೆ ಪ್ಲಾಸ್ಮಾ ಥೆರಪಿ
ಮಂಡ್ಯ, ಆಗಸ್ಟ್ 27 : " ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ಶುಕ್ರವಾರದಿಂದ ಆರಂಭಿಸುವಂತೆ" ಜಿಲ್ಲಾಧಿಕಾರಿ ಡಾ. ಎಂ. ವಿ. ವೇಂಕಟೇಶ್ ಹೇಳಿದ್ದಾರೆ.
Recommended Video
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ರೋಗಿಗಳಿಗೆ ಪೂರ್ವ ನಿಯೋಜಿತವಾಗಿ ಆಂಬ್ಯುಲೆನ್ಸ್ ವ್ಯವಸ್ಥೆಯಾಗುವಂತೆ ನೋಡಿಕೊಳ್ಳಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕೊವೀಡ್-19 ಸಂಬಂಧ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ನಾಳೆಯಿಂದಲೇ ಪ್ರಾರಂಭಿಸುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯನ್ನು ನಿಯಂತ್ರಿಸುವ ಕುರಿತು ಚರ್ಚೆ ನಡೆಲಾಯಿತು.

ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ನೀಡುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸಾವಿನ ಪ್ರಮಾಣವನ್ನು ನಿಯಂತ್ರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಿಎಚ್‌ಸಿಗೆ ಭೇಟಿ : ಮಂಡ್ಯ ತಾಲೂಕಿನ ಕ್ಯಾತುಂಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. ಪ್ರತಿನಿತ್ಯ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಿಸಬೇಕು ಮತ್ತು ಪ್ರತಿಯೊಬ್ಬ ಸಿಬ್ಬಂದಿ, ಸಾರ್ವಜನಿಕರು ಮತ್ತು ರೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಿದರು.
ಮಂಡ್ಯ ಜಿಲ್ಲೆಯಲ್ಲಿ ಬುಧವಾರ 155 ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು 4534. ಇದುವರೆಗೂ ಜಿಲ್ಲೆಯಲ್ಲಿ 49 ಸೋಂಕಿತರು ಮೃತಪಟ್ಟಿದ್ದಾರೆ.












Click it and Unblock the Notifications