ಯೋಧ ಗುರು ಕುಟುಂಬಕ್ಕೆ ಅರ್ಧ ಎಕರೆ ಜಮೀನು ಕೊಟ್ಟ ಸುಮಲತಾ ಅಂಬರೀಶ್
ಮಂಡ್ಯ, ಫೆಬ್ರವರಿ 16: ಊರಿನಲ್ಲಿ ಸ್ವಂತ ಜಮೀನು ಇಲ್ಲದೆ ಹುತಾತ್ಮ ಯೋಧ ಗುರು ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಎಲ್ಲಿ ನಡೆಸುವುದು ಎಂದು ಗೊಂದಲದಲ್ಲಿದ್ದ ಕುಟುಂಬ ಹಾಗೂ ಜಿಲ್ಲಾಡಳಿತಕ್ಕೆ ಸುಮಲತಾ ಅಂಬರೀಶ್ ನೆರವಿನ ಹಸ್ತ ಚಾಚಿದ್ದಾರೆ.
Just heard the news & was pained to hear the confusion regarding place for his last rites . On behalf of Ambreesh , myself & Abishek would humbly like to offer 1/2 acre belonging to us in Doddarisanakere for his last rites and samadhi .
— sumalatha ambareesh 🇮🇳 (@sumalathaA) February 16, 2019
ಅಂತ್ಯ ಸಂಸ್ಕಾರ ಸ್ಥಳಕ್ಕೆಂದು ಒದ್ದಾಡುತ್ತಿದ್ದ ಕುಟುಂಬಕ್ಕೆ ಸುಮಲತಾ ಅಂಬರೀಶ್ ಅವರು ಅರ್ಧ ಎಕರೆ ಜಮೀನನ್ನು ಉಚಿತವಾಗಿ ನೀಡಲು ಮುಂದಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂಬರೀಶ್, ಸುಮಲತಾ ಅಂಬರೀಶ್ ಮತ್ತು ಮಗ ಅಮರ್ ವತಿಯಿಂದ ಈ ನಿರ್ಣಯ ತೆಗೆದುಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಗೊಂದಲದಲ್ಲಿದ್ದಾಗ ಸುಮಲತಾ ಅವರು ಈ ನಿರ್ಣಯ ಪ್ರಕಟಿಸಿದ್ದರು. ಆದರೆ ನಂತರ ಯೋಧ ಗುರು ಅವರ ಅಂತ್ಯಸರ್ಕಾರವನ್ನು ಸರ್ಕಾರಿ ಜಮೀನಿನಲ್ಲಿ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಆದರೂ ತಮ್ಮ ನಿರ್ಣಯದಿಂದ ಹಿಂದೆ ಸರಿಯದ ಸುಮಲತಾ ಅವರು ಆ ಅರ್ಧ ಎಕರೆ ಜಮೀನು ಯೋಧನ ಕುಟುಂಬಕ್ಕೆ ಮೀಸಲು ಎಂದು ಘೋಷಿಸಿದ್ದಾರೆ.

ಅಂಬರೀಶ್ ಅವರ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲಿ ಇರುವ ಜಮೀನಿನಲ್ಲಿ ಅರ್ಧ ಎಕರೆ ಜಮೀನನ್ನು ಯೋಧ ಗುರು ಅವರ ಕುಟುಂಬಕ್ಕೆ ನೀಡಲಾಗುತ್ತಿದೆ. ಮಂಡ್ಯದ ಸೊಸೆಯಾಗಿ ಇದು ನನ್ನ ಕರ್ತವ್ಯ ಎಂದು ಸುಮಲತಾ ಅವರು ನುಡಿದಿದ್ದಾರೆ.
ಪ್ರಸ್ತುತ ಶೂಟಿಂಗ್ ನಿಮಿತ್ತ ಎಂದು ಮಲೇಷ್ಯಾದಲ್ಲಿ ಇದ್ದೇನೆ ಆದಷ್ಟು ಬೇಗ ಮಂಡ್ಯಕ್ಕೆ ವಾಪಸ್ಸಾಗುತ್ತೇನೆ, ಬಂದ ಕೂಡಲೇ ಅರ್ಧ ಎಕರೆ ಜಮೀನನ್ನು ಯೋಧ ಗುರು ಅವರ ಕುಟುಂಬಕ್ಕೆ ರಿಜಿಸ್ಟರ್ ಮಾಡಿಕೊಡುತ್ತೇನೆ ಎಂದು ಸುಮಲತಾ ಅವರು ಹೇಳಿದ್ದಾರೆ.
ಅಂಬರೀಶ್ ಅವರು ಸಹ ಮಂಡ್ಯದ ಕರ್ಣ ಎಂದು ಹೆಸರುವಾಸಿಯಾಗಿದ್ದರು. ಇಂತಹಾ ಸಂದರ್ಭ ಎದುರಾದಾಗ ತಮ್ಮ ವಿಶಾಲ ಹೃದಯದ ಪ್ರದರ್ಶನ ಮಾಡುತ್ತಿದ್ದರು. ಇಂದು ಸುಮಲತಾ ಅವರು ಮಾಡಿದ ಕಾರ್ಯವೂ ಸಹ ಅಂಬರೀಶ್ ಅವರನ್ನೇ ನೆನಪಿಸುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications