ಸುಮಲತಾ ಅಂಬರೀಶ್ ಮತ್ತೆ ಮಂಡ್ಯದಿಂದಲೇ ಸ್ಪರ್ಧೆ: ಬದಲಾವಣೆ ಗಾಳಿ ಬೀಸಬಹುದು ಎಂದ ಆಪ್ತರು
ಮಂಡ್ಯ ಜನವರಿ 09: ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಮತ್ತೆ ಸ್ಪರ್ಧಿಸುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಆಪ್ತ ಹನಕೆರೆ ಶಶಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವ ವಿಶ್ವಾಸವಿದೆ.
ಕಳೆದ ನಾಲ್ಕು ವರ್ಷದಿಂದ ಸುಮಲತಾ ಅಂಬರೀಶ್ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲೂ ಸುಮಲತಾ ಅಭ್ಯರ್ಥಿ ಆಗಿರುತ್ತಾರೆ. ಮೈಶುಗರ್ ಕಾರ್ಖಾನೆ ಪುನಾರಾರಂಭ ಮಾಡಲು ಯಶಸ್ವಿಯಾಗಿದ್ದಾರೆ. ಕೆಆರ್‌ಎಸ್ ಸುತ್ತಮುತ್ತಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಸೇರಿದಂತೆ ಎಲ್ಲಾ ಹೋರಾಟಗಳಲ್ಲೂ ಸುಮಲತಾ ಮುಂಚೂಣಿಯಲ್ಲಿದ್ದಾರೆ ಎಂದರು.

ಇನ್ನು ಅತಿ ಹೆಚ್ಚು ದಿಶಾ ಸಭೆ ನಡೆಸಿದ ಹೆಗ್ಗಳಿಕೆ ಸುಮಲತಾ ಅವರದ್ದು. ಚುನಾವಣೆಯಲ್ಲಿ ಬಿಜೆಪಿಗೆ ಸುಮಲತಾ ಅಂಬರೀಶ ಅವರು ಬಾಹ್ಯ ಬೆಂಬಲ ಕೊಟ್ಟಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಆಗಿದೆ. ಜೆಡಿಎಸ್ಗೆ ಮಂಡ್ಯ ಕ್ಷೇತ್ರ ಬಿಟ್ಟುಕೊಡುತ್ತಾರೆ ಎಂಬ ಚರ್ಚೆ ಆಗುತ್ತಿದೆ. ಸುಮಲತಾ ಈಗಲೂ ಪಕ್ಷೇತರ ಸಂಸದೆ, ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಪಕ್ಷ ಯಾವುದಾದರೂ ಸುಮಲತಾ ಅಂಬರೀಶ್ ಅವರು ಮಂಡ್ಯ ಅಭ್ಯರ್ಥಿ ಆಗಿರಬೇಕು ಎಂದು ಆಗ್ರಹಿಸಿದರು.
ಸುಮಲತಾ ಅಂಬರೀಶ್ ಅವರು ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡಿದರೂ ನಮ್ಮ ಬೆಂಬಲ ಇರುತ್ತದೆ. ಜೆಡಿಎಸ್ಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಟ್ಟರೂ ಸುಮಲತಾ ಅಂಬರೀಶ ಸ್ಪರ್ಧೆ ಖಚಿತವಾಗಿದೆ. ಬಿಜೆಪಿ ಮಂಡ್ಯ ಉಳಿಸಿಕೊಳ್ಳುವ ವಿಶ್ವಾಸವಿದೆ. ಸುಮಲತಾ ಅವರ ಅವಶ್ಯಕತೆ ಇದ್ದರೆ ಮಂಡ್ಯ ಕ್ಷೇತ್ರ ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಇನ್ನು ಬಿಜೆಪಿ ಮಂಡ್ಯವನ್ನ ಜೆಡಿಎ ಬಿಟ್ಟು ಕೊಟ್ಟರೂ ಸಹ ಸುಮಲತಾ ಅವರ ಸ್ಪರ್ಧೆ ಖಚಿತವಾಗಿದೆ. ಆದರೆ ಬಿಜೆಪಿ ಮಂಡ್ಯ ಉಳಿಸಿಕೊಳ್ಳುವ ವಿಶ್ವಾಸ ಇದೆ. ಹಳೇ ಮೈಸೂರು ಭಾಗದಲ್ಲಿ ಬಲಿಷ್ಠ ಬಿಜೆಪಿ ಕಟ್ಟುವ ಆಸೆ ಇದ್ರೆ, ಸುಮಲತಾ ಅವರ ಅವಶ್ಯಕತೆ ಇದ್ರೆ ಮಂಡ್ಯವನ್ನು ಉಳಿಸಿಕೊಳ್ಳುತ್ತಾರೆ.
ಅಂಬರೀಶ್‌ರವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ರಾಜಕೀಯದಲ್ಲಿ ಬದಲಾವಣೆ ಗಾಳಿ ಯಾವಾಗ ಬೇಕಾದರೂ ಬೀಸಬಹುದು. ಏನೇ ಆದರೂ ಸುಮಲತಾರವರು ಕಣದಲ್ಲಿರುತ್ತಾರೆ. ಚರ್ಚೆ ನಡೆಸಿ, ಸುಮಲತಾ ಅಂಬರೀಶ್ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಸಂಸದೆ ಸುಮಲತಾ ಅಂಬರೀಶ್ ಅವರು ಬೆಂಗಳೂರಿಗೆ ಬಂದ ತಕ್ಷಣ ನಮ್ಮ ನಿಯೋಗ ಭೇಟಿ ಮಾಡುತ್ತದೆ ಎಂದು ಹೇಳಿದರು.












Click it and Unblock the Notifications