ಮಂಡ್ಯದಲ್ಲಿ ಕಚೇರಿ ತೆರೆದ ಸುಮಲತಾ, ಕಚೇರಿ ವಿಶೇಷತೆ ಏನು?

ಮಂಡ್ಯ, ಸೆಪ್ಟೆಂಬರ್ 11: ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಲ್ಲಿ ಕಚೇರಿ ತೆರೆದಿದ್ದಾರೆ. ಆ ಕಚೇರಿಯ ವಿಶೇಷವೇನೆಂದರೆ ಮೊದಲು ಅಂಬರೀಶ್ ಅವರು ಇದ್ದ ಕಚೇರಿ ಅದಾಗಿತ್ತು.

ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಗೆ ಮೊದಲು ಪೂಜೆ ಮಾಡಿ ನಂತರ ಕಚೇರಿಯನ್ನು ಉದ್ಘಾಟಿಸಿದ್ದಾರೆ. ಈ ಮೂಲಕ ಇನ್ನು ಮುಂದೆ ಸುಮಲತಾ ಅವರು ತಮ್ಮ ಅಧಿಕೃತ ಕಚೇರಿಯಲ್ಲೇ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಇದು ಅಂಬರೀಶ್ ಅವರು ಇದ್ದ ಕಚೇರಿಯಾಗಿದೆ. ಹೀಗಾಗಿ ಅಂಬರೀಶ್ ಅವರ ಆಫೀಸಿನಲ್ಲಿ ಕೂರುವುದು ನನ್ನ ಭಾಗ್ಯವಾಗಿದೆ ಇಂದು ಒಳ್ಳೆಯ ದಿನ, ಹೀಗಾಗಿ ಕಚೇರಿ ಉದ್ಘಾಟಿಸಿದ್ದೇನೆ ಎಂದು ಹೇಳಿದ್ದಾರೆ.

Sumalatha Ambareesh Started New Office At Mandya

ಫೇಕ್ ಅಕೌಂಟ್ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ರಾಜಕೀಯ ಭವಿಷ್ಯವನ್ನು ಡ್ಯಾಮೇಜ್ ಮಾಡಲು ಈ ರೀತಿ ಮಾಡುತ್ತಿದ್ದಾರೆ, ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತರಿಗೆ ನರವು ಕುರಿತು ಮಾತನಾಡಿದ ಅವರು, ಇದು ರಾಜ್ಯ ಮತ್ತು ಕೇಂದ್ರಕ್ಕೆ ಸಂಬಂಧಿಸಿದ್ದಾಗಿದ್ದರಿಂದ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರಕ್ಕೆ ಪೂರ್ಣ ಪ್ರಮಾಣದ ಬಹುಮತ ಬಂದರೆ ಆದಷ್ಟು ಬೇಗ ರಾಜ್ಯದಲ್ಲಿ ಉಸ್ತುವಾರಿ ಸಚಿವರ ನೇಮಕ ಮಾಡುತ್ತಾರೆ. ಈಗ ಸ್ಪಲ್ಪ ತಡ ಆಗಿದೆ ಎಂದು ಮಾಹಿತಿ ನೀಡಿದರು.

ಡಿಕೆ ಶಿವಕುಮಾರ್ ಅವರ ಪರ ಒಕ್ಕಲಿಗರು ಪ್ರತಿಭಟನೆ ಮಾಡುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+