ನಕಲಿ ಫೇಸ್‌ಬುಕ್ ಖಾತೆ ಕುರಿತು ಮಾಹಿತಿ ಹಂಚಿಕೊಂಡ ಸುಮಲತಾ ಅಂಬರೀಶ್

Recommended Video

      ನಕಲಿ ಫೇಸ್‌ಬುಕ್ ಖಾತೆ ಕುರಿತು ಮಾಹಿತಿ ಹಂಚಿಕೊಂಡ ಸುಮಲತಾ ಅಂಬರೀಶ್ | Sumalatha Ambarish | Oneindia Kannada

      ಬೆಂಗಳೂರು, ಸೆಪ್ಟೆಂಬರ್ 16: ಸಂಸದೆ ಸುಮಲತಾ ಅವರ ಹೆಸರಲ್ಲಿ ದುಷ್ಕರ್ಮಿಗಳು ನಕಲಿ ಫೇಸ್‌ಬುಕ್ ಅಕೌಂಟ್‌ಗಳನ್ನು ಕ್ರಿಯೇಟ್ ಮಾಡಿ ಅವರ ವಿಡಿಯೋಗಳನ್ನು ಹರಿಬಿಡುತ್ತಿದ್ದು, ಅಂತಹ ಖಾತೆಗಳನ್ನು ಎಂದೂ ಫಾಲೋ ಮಾಡಬೇಡಿ, ಅನ್‌ಫಾಲೋ ಮಾಡಿ ಎಂದು ಸುಮಲತಾ ಮನವಿ ಮಾಡಿದ್ದಾರೆ.

      ದಯಮಾಡಿ ನಕಲಿ ಪುಟವನ್ನು ಅನ್‍ಫಾಲೋ ಮಾಡಿ, ಈ ಪುಟ ಬಳಕೆದಾರ ಇದರಲ್ಲಿ ಹಲವು ಹಾನಿಕಾರಕ ವಿಷಯಗಳನ್ನು, ಸಾಕಷ್ಟು ಎಚ್ಚರಿಕೆಗಳನ್ನು ಪೋಸ್ಟ್ ಮಾಡುತ್ತಿದ್ದಾನೆ.

      ಈಗಾಗಲೇ ಈ ನಕಲಿ ಪುಟಗಳ ಕುರಿತು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ಈ ರೀತಿ ಅಸಂಬದ್ಧಕ್ಕೆ ಯಾವಾಗ ಮುಕ್ತಿ ಸಿಗುತ್ತದೆ ಎಂದು ಕಾಯುತ್ತಿದ್ದೇನೆ ಎಂದು ಬರೆದು, ನಕಲಿ ಪುಟಗಳ ಫೋಟೋ ಜೊತೆಗೆ ಅಪ್ಲೋಡ್ ಮಾಡಿದ್ದಾರೆ.

      Sumalatha Ambarish Shares Information About Her Fake Facebook Account

      ಸಂಸದೆ ಸುಮಲತಾ ಅವರ ಹೆಸರಿನಲ್ಲಿ ಕಳೆದ ಕೆಲ ದಿನಗಳಿಂದ ಅವಹೇಳನಕಾರಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಹೆಸರಲ್ಲಿ ಫೇಸ್‍ಬುಕ್‌ನ ನಕಲಿ ಖಾತೆ ಮೂಲಕ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಲಾಗುತ್ತಿದೆ.

      ಇಂತಹ ನಕಲಿ ಪುಟಗಳ ಹಾವಳಿ ಹೆಚ್ಚಾಗಿದ್ದು, ಇಂತಹ ಪುಟಗಳನ್ನು ಫಾಲೋ ಮಾಡಬೇಡಿ ಎಂದು ಸ್ವತಃ ಸುಮಲತಾ ಅವರೇ ಅಭಿಮಾನಿಗಳಿಗೆ, ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

      ಇದು ನನ್ನ ಅಧಿಕೃತ ಪುಟವಲ್ಲ, ಈ ಪೇಜ್ ನ್ನು ಫಾಲೋ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ನಕಲಿ ಪುಟದ ಸ್ಕ್ರೀನ್‍ಶಾಟ್ ತೆಗೆದು ಅದನ್ನು ಕೂಡ ಶೇರ್ ಮಾಡಿ ನಕಲಿ ಪುಟಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

      ತಮ್ಮ ಅಧಿಕೃತ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ಖಾತೆಯಿಂದ ಸುಮಲತಾ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ನಕಲಿ ಪುಟಗಳ ಹಾವಳಿ ಇನ್ನೂ ಮುಂದುವರಿದಿದೆ. ಇಂತಹ ಫೇಸ್‍ಬುಕ್ ಪುಟಗಳನ್ನು ಫಾಲೋ ಮಾಡಬೇಡಿ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+