ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ : ಪಕ್ಷೇತರ ಅಭ್ಯರ್ಥಿ ಸುಮಲತಾ ನಾಮಪತ್ರ ವಾಪಸ್!

|
Google Oneindia Kannada News

ಮಂಡ್ಯ, ಮಾರ್ಚ್ 27 : ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹಲವು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ನಾಮಪತ್ರವನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಹೆಸರಿನ ನಾಲ್ವರು ಮಹಿಳೆಯರು ಕಣದಲ್ಲಿದ್ದಾರೆ.

ಏಪ್ರಿಲ್ 18ರಂದು ನಡೆಯುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಗೊರವಿ ಗ್ರಾಮದ ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು.

ಮಂಡ್ಯ ಕ್ಷೇತ್ರದ ಪರಿಚಯ

ಬುಧವಾರ ಸುಮಲತಾ ಅವರ ಪತಿ ಮಂಜೇಗೌಡ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, 'ಗುರುವಾರ ಸುಮಲತಾ ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರೆ. ನಾವು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸುತ್ತೇವೆ' ಎಂದು ಹೇಳಿದರು.

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಚಿಹ್ನೆ ಯಾವುದು?ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಚಿಹ್ನೆ ಯಾವುದು?

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿದ್ದು, ಬಿಜೆಪಿ ಸಹ ಅವರಿಗೆ ಬೆಂಬಲವನ್ನು ಘೋಷಣೆ ಮಾಡಿದೆ.

ಸುಮಲತಾ ಹಣಿಯಲು ಹೊಸ ತಂತ್ರ: ಅದೇ ಹೆಸರಿನ ಮೂವರಿಂದ ನಾಮಪತ್ರಸುಮಲತಾ ಹಣಿಯಲು ಹೊಸ ತಂತ್ರ: ಅದೇ ಹೆಸರಿನ ಮೂವರಿಂದ ನಾಮಪತ್ರ

ಸುಮಲತಾ ನಾಮಪತ್ರ ವಾಪಸ್

ಸುಮಲತಾ ನಾಮಪತ್ರ ವಾಪಸ್

ಮಂಗಳವಾರ ಕೆ.ಆರ್.ಪೇಟೆ ತಾಲೂಕಿನ ಗೊರವಿ ಗ್ರಾಮದ ಮಂಜೇಗೌಡ ಅವರ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ಗುರುವಾರ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರೆ.

ನಾಮಪತ್ರ ವಾಪಸ್ ಏಕೆ?

ನಾಮಪತ್ರ ವಾಪಸ್ ಏಕೆ?

'ನಾನು ಅಪ್ಪಟ ದರ್ಶನ್ ಅಭಿಮಾನಿ. ಯಾರದೋ ಮಾತು ಕೇಳಿ ನನ್ನ ಪತ್ನಿ ನಾಮಪತ್ರ ಸಲ್ಲಿಸಿದ್ದಾಳೆ. ನಾಳೆ ನನ್ನ ಪತ್ನಿಯೊಂದಿಗೆ ತೆರಳಿ ನಾಮಪತ್ರ ವಾಪಸ್ ಪಡೆಯುತ್ತೇನೆ. ಬೂಕನಕೆರೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿ ನಾಮಪತ್ರ ವಾಪಸ್ ಪಡೆಯುವುದಾಗಿ ಹೇಳಿದ್ದೇನೆ. ದರ್ಶನ್ ಅಭಿಮಾನಿಯಾದ ಕಾರಣ ಸುಮಲತಾ ಅವರನ್ನು ಬೆಂಬಲಿಸುವೆ' ಎಂದು ಮಂಜೇಗೌಡ ಹೇಳಿದ್ದಾರೆ.

ನನ್ನ ಸ್ಪರ್ಧೆ ಹಿಂದೆ ಕೈವಾಡವಿಲ್ಲ

ನನ್ನ ಸ್ಪರ್ಧೆ ಹಿಂದೆ ಕೈವಾಡವಿಲ್ಲ

ಶ್ರೀರಂಗಪಟ್ಟಣ ತಾಲೂಕಿನ ಸುಮಲತಾ ಸಿದ್ದೇಗೌಡ ಅವರು ಸಹ ಚುನಾವಣಾ ಕಣದಲ್ಲಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಸುಮಲತಾ ಅವರಿಗೆ ಹಿನ್ನಡೆ ಉಂಟು ಮಾಡಲಿ ನಾನು ಚುನಾವಣೆಗೆ ಸ್ಪರ್ಧೆ ಮಾಡಿಲ್ಲ. ನನ್ನ ಸ್ಪರ್ಧೆ ಹಿಂದೆ ಯಾರ ಕೈವಾಡವೂ ಇಲ್ಲ. ಮೊದಲೇ ಸ್ಪರ್ಧೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೆ. ನಾನು ನಾಮಪತ್ರವನ್ನು ವಾಪಸ್ ಪಡೆಯುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ನಾಲ್ವರು ಸುಮಲತಾ ಅವರು ಕಣದಲ್ಲಿ

ನಾಲ್ವರು ಸುಮಲತಾ ಅವರು ಕಣದಲ್ಲಿ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಸೇರಿ ನಾಲ್ವರು ಸುಮಲತಾ ಹೆಸರಿನ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

* ಕನಕಪುರದ ರಂಗನಾಥ ಬಡಾವಣೆಯ ದರ್ಶನ್ ಅವರ ಪತ್ನಿ ಸುಮಲತಾ
* ಕೆ.ಆರ್.ಪೇಟೆ ತಾಲೂಕಿನ ಸುಮಲತಾ ಮಂಜೇಗೌಡ
* ಶ್ರೀರಂಗಪಟ್ಟಣದ ಸುಮಲತಾ ಸಿದ್ದೇಗೌಡ
* ಸುಮಲತಾ ಅಂಬರೀಶ್

English summary
Mandya district K.R. pete taluk Goravi village Sumalatha decided to withdraw nomination from Mandya lok sabha seat. Sumalatha name 4 women field nomination as independent candidate from Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X