ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಸುಮಲತಾ ದೂರು

|
Google Oneindia Kannada News

ಮಂಡ್ಯ, ಮಾರ್ಚ್‌ 26: ಕುಮಾರಸ್ವಾಮಿ ಅವರು ನನ್ನ ಕರೆ ಕದ್ದಾಲಿಸುತ್ತಿದ್ದಾರೆ, ನನ್ನ ಮನೆಯ ಸುತ್ತಾ ಗೂಢಾಚಾರಿಗಳನ್ನು ಬಿಟ್ಟಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಿನ್ನೆ ಚುನಾವಣೆ ಆಯೋಗಕ್ಕೆ ದೂರು ನೀಡಿರುವ ಸುಮಲತಾ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಗುಪ್ತಚರ ಇಲಾಖೆ ಪೊಲೀಸರನ್ನು ಮನೆಯ ಸುತ್ತಾ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.

'ಡಿ ಬಾಸ್' ವಿರುದ್ಧ ಸಿಡಿಮಿಡಿಗೊಂಡ ಸಿಎಂ ಕುಮಾರಸ್ವಾಮಿ'ಡಿ ಬಾಸ್' ವಿರುದ್ಧ ಸಿಡಿಮಿಡಿಗೊಂಡ ಸಿಎಂ ಕುಮಾರಸ್ವಾಮಿ

ಒಂದು ತಿಂಗಳಿನಿಂದ ನಮ್ಮ ಮನೆಯ ಸುತ್ತ ಗುಪ್ತಚರ ಇಲಾಖೆಯ ಸಿಬ್ಬಂದಿ ಓಡಾಡುತ್ತಿದ್ದಾರೆ, ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಅವರ ಪಕ್ಷದವರೇ ನನಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅವರು ಸುಮಲತಾ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Sumalatha gave complaint to election commission against CM Kumaraswamy

ಸುಮಲತಾ ಪರ ಪ್ರಚಾರಕ್ಕೆ ಹೋಗುವುದಿಲ್ಲ ಎಂದ ಶಿವರಾಜ್ ಕುಮಾರ್ಸುಮಲತಾ ಪರ ಪ್ರಚಾರಕ್ಕೆ ಹೋಗುವುದಿಲ್ಲ ಎಂದ ಶಿವರಾಜ್ ಕುಮಾರ್

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಅನಿಯಮಿತ ವಿದ್ಯುತ್ ಪೂರೈಕೆ ಮಾಡುವಂತೆ ಬೆಸ್ಕಾಂಗೆ ಬರೆದಿರುವ ಪತ್ರದ ಬಗ್ಗೆಯೂ ಆಯೋಗಕ್ಕೆ ಸುಮಲತಾ ದೂರು ನೀಡಿದ್ದಾರೆ. ಈ ಎಲ್ಲ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸುವ ಬಗ್ಗೆ ಚುನಾವಣಾ ಅಧಿಕಾರಿ ಭರವಸೆ ನೀಡಿದ್ದಾರೆ ಎಂದು ಸುಮಲತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

English summary
Mandya constituency independent candidate Sumalatha Amabreesh accused that CM Kumaraswamy using his power and taping my phone calls and he deployed some intelligence department officers around my home.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X