ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಚಿಹ್ನೆ ಯಾವುದು?

ಮಂಡ್ಯ, ಮಾರ್ಚ್ 26 : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಅವರು ಮೂರು ಚಿಹ್ನೆಗಳಲ್ಲಿ ಒಂದನ್ನು ನೀಡುವಂತೆ ಮನವಿ ಮಾಡಿದ್ದಾರೆ. ಏಪ್ರಿಲ್ 18ರಂದು ಮಂಡ್ಯದಲ್ಲಿ ಚುನಾವಣೆ ನಡೆಯಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸುಮಲತಾ ಅಂಬರೀಶ್ ಅವರು ಈಗಾಗಲೇ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾದ ಕಾರಣ ಚುನಾವಣಾ ಚಿಹ್ನೆಯನ್ನು ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ.

ಕಬ್ಬಿನ ಗದ್ದೆ ಮುಂದೆ ರೈತ, ತೆಂಗಿನ ತೋಟ, ಕಹಳೆ ಊದುತ್ತಿರುವ ರೈತ ಇವುಗಳಲ್ಲಿ ಒಂದನ್ನು ನೀಡುವಂತೆ ಸುಮಲತಾ ಅವರು ಮನವಿ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆ ಮಾಡಲು ಮಂಗಳವಾರ ಕೊನೆಯ ದಿನವಾಗಿತ್ತು. ಇನ್ನೆರಡು ದಿನದಲ್ಲಿ ಚಿಹ್ನೆ ಹಂಚಿಕೆಯಾಗುವ ಸಾಧ್ಯತೆ ಇದೆ.

Sumalatha request for 3 election symbols

ಹಲವು ಕಾರಣಗಳಿಗೆ ಮಂಡ್ಯ ಚುನಾವಣೆಯ ಈ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಸುಮಲತಾ ಎದುರಾಳಿಯಾಗಿದ್ದಾರೆ.

4 ಸುಮಲತಾ ಸ್ಪರ್ಧೆ : ಮಂಡ್ಯದಲ್ಲಿ ಸುಮಲತಾ ಹೆಸರಿನ ನಾಲ್ವರು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದ್ದರಿಂದ, ಎಚ್ಚರಿಕೆಯಿಂದ ಚುನಾವಣಾ ಚಿಹ್ನೆಯನ್ನು ಆಯ್ಕೆ ಮಾಡಿಕೊಳ್ಳಬೇಕಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
* ನಿಖಿಲ್ ಕುಮಾರಸ್ವಾಮಿ (ಜೆಡಿಎಸ್-ಕಾಂಗ್ರೆಸ್‌)
* ಸುಮಲತಾ ಅಂಬರೀಶ್ (ಪಕ್ಷೇತರ)
* ಎಂ.ಸುಮಲತಾ (ಪಕ್ಷೇತರ)
* ಪಿ.ಸುಮಲತಾ (ಪಕ್ಷೇತರ)
* ಸುಮಲತಾ (ಪಕ್ಷೇತರ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+