ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಲ್ಲಿ ಗೆಲುವಿನ ಬಳಿಕ, ಸುಮಲತಾ ಮೊದಲ ಭೇಟಿ ಎಲ್ಲಿಗೆ?

|
Google Oneindia Kannada News

ಬೆಂಗಳೂರು, ಮೇ 24: ಮಂಡ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಮೊದಲು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಬೆಂಗಳೂರಿನಲ್ಲಿ ಪತಿ, ಮಾಜಿ ಸಚಿವ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.ಇಂದು ಅಂಬರೀಶ್ ಅವರ 6ನೇ ತಿಂಗಳ ಪುಣ್ಯತಿಥಿ ಇರುವ ಕಾರಣ ಬೆಂಗಳೂರಿಗೆ ಆಗಮಿಸಿ ಪೂಜೆ ಸಲ್ಲಿಸಲಿದ್ದಾರೆವೇಳೆ ಸುಮಲತಾ ಜತೆ ಅಭಿಷೇಕ್, ದರ್ಶನ್ ಮತ್ತು ಯಶ್ ಕೂಡ ಭಾಗಿಯಾಗುವ ಸಾಧ್ಯತೆ ಇದೆ. ನಿನ್ನೆ ಮಧ್ಯ ರಾತ್ರಿಯಿಂದಲೇ ಪೂಜೆಗೆ ಪೂರ್ವ ಸಿದ್ಧತೆ ನಡೆಸಲಾಗಿತ್ತು. ಸಮಾಧಿಗೆ ಅಲ್ಲಿನ ಸಿಬ್ಬಂದಿ ಅಲಂಕಾರ ಮಾಡಿದ್ದರು.

ಸುಮಲತಾ: ಪಕ್ಷೇತರವಾಗಿ ಸ್ಪರ್ಧಿಸಿ ಗೆದ್ದ ಕರ್ನಾಟಕದ ಮೊದಲ ಮಹಿಳೆಸುಮಲತಾ: ಪಕ್ಷೇತರವಾಗಿ ಸ್ಪರ್ಧಿಸಿ ಗೆದ್ದ ಕರ್ನಾಟಕದ ಮೊದಲ ಮಹಿಳೆ

ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಮಗ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಸುಮಲತಾ 1.30 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಇದು ಜೆಡಿಎಸ್​ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸುಮಲತಾ ಗೆಲುವಿನಲ್ಲಿ ದರ್ಶನ್​-ಯಶ್​ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಇಂದು ಅವರು ಕೂಡ ಸಮಾಧಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಗೆಲುವಿನ ಬಗ್ಗೆ ದರ್ಶನ್​ ಹಾಗೂ ರಾಕ್​ಲೈನ್​ ವೆಂಕಟೇಶ್​ ಮಾತನಾಡಿದ್ದು, ಮತದಾರರಿಗೆ ಧನ್ಯವಾದ ಹೇಳಿದ್ದಾರೆ.

 Sumalatha to visit Ambareesh memorial in Bengaluru

ನೀವು ತೋರಿಸಿರುವ ಪ್ರೀತಿಗೆ ಪದಗಳೆ ಬರುತ್ತಿಲ್ಲ.ಸಣ್ಣ ಅಳಿಲು ಸೇವೆಗೆ ದೊಡ್ಡ ಮೊತ್ತದ ಜಯ ತಂದುಕೊಟ್ಟಿದ್ದು, ಸಾಯುವವರೆಗೂ ಚಿರಖುಣಿಯಾಗಿರುವುದಾಗಿ ಹೇಳಿದ್ದಾರೆ. ಸುಮಲತಾ ಅಂಬರೀಷ್ ಅವರಿಗೆ ನೀಡಿರುವ ಗೆಲುವನ್ನು ತುಂಬಾ ಜೋಪಾನವಾಗಿ ಕಾಪಾಡಿಕೊಳ್ಳಲಿದ್ದಾರೆ. ತಮ್ಮ ಕೈಲಾದ ಸಹಾಯವನ್ನು ಖಂಡಿತವಾಗಿ ಮಾಡ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ದರ್ಶನ್, ನೀವೆ ನಮ್ಮ ಪಾಲಿನ ದೇವರಾಗಿದ್ದೀರಿ. ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿಯೊಬ್ಬ ಮತದಾರರರ ನೆರವನ್ನು ಸಾಯುವವರೆಗೂ ಮರೆಯುವುದಿಲ್ಲ ಎಂದಿದ್ದಾರೆ ಎಂದಿದ್ದಾರೆ.

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ 5 ಕಾರಣಗಳುಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ 5 ಕಾರಣಗಳು

ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್​ ಅಭ್ಯರ್ಥಿಗಳಾದ ನಿಖಿಲ್​ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್​​​ಡಿ ದೇವೇಗೌಡ ಸ್ಪರ್ಧಿಸಿ ಪರಾಭವಗೊಂಡ ವಿಚಾರಕ್ಕೆ ಸಂಬಂಧಿಸಿ ಸಭೆ ಕರೆದು ಎಚ್​ಡಿಕೆ ಜೆಡಿಎಸ್​ ನಾಯಕರಿಗೆ ಫುಲ್​ ಕ್ಲಾಸ್​ ತೆಗೆದುಕೊಂಡಿದ್ದಾರೆ. ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಮಂಡ್ಯ ಮಾಜಿ ಸಂಸದ ಶಿವರಾಮೇಗೌಡ , ಸಾ.ರಾ.ಮಹೇಶ್ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಆರಂಭವಾದ ಸಭೆ ತಡರಾತ್ರಿಯವರೆಗೂ ನಡೆದಿತ್ತು. ಈ ವೇಳೆ ಎಚ್​ಡಿಕೆ ಹಾಗೂ ಎಚ್​ಡಿಡಿ ಜೆಡಿಎಸ್​​ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Sumalatha to visit Ambareesh's memorial in Bengaluru today after her victory in Mandya LokSabha seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X