Blackmail: ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯೋಗಿ ಮಾಸ್ಟರ್ ಅಂದರ್!
ಮಂಡ್ಯ ಜುಲೈ 10: ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾಮುಕನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ಘಟನೆ ನಡೆದಿದೆ.
ಕಾಮುಕ ವ್ಯಕ್ತಿಯೊಬ್ಬ ತನ್ನ ಬಳಿ ಕಲಿಯಲು ಬರುತ್ತಿದ್ದ ಫ್ರೌಢ ಶಾಲೆಯೊಂದರ ವಿದ್ಯಾರ್ಥಿನಿಯರ ಬೆತ್ತಲೆ ಚಿತ್ರ ಕ್ಲಿಕ್ಕಿಸುತ್ತಿದ್ದನು. ಈ ವಿಕೃತ ಕಾಮುಕನ ಹೆಸರು ಯೋಗಿ. ಈತ ತನ್ನ ಬಳಿ ಕ್ರೀಡೆ ಹಾಗೂ ಚಿತ್ರಕಲೆ ಕಲಿಯಲು ಬರುತ್ತದ್ದ ವಿದ್ಯಾರ್ಥಿನಿಯರ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು.

ಅಲ್ಲದೆ ಕೆಲ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕ ಕಾನೂನು ಪರಿವೀಕ್ಷಣಾಧಿಕಾರಿ ಎಸ್.ಎಂ.ಶೈಲಜಾ ಅವರಿಗೆ ನಾಲ್ವರು ವಿದ್ಯಾರ್ಥಿನಿಯರು ಈ ಬಗ್ಗೆ ಸವಿಸ್ತಾರವಾಗಿ ಹೇಳಿಕೆ ನೀಡಿದ್ದಾರೆ.
ಇದನ್ನು ಆಧರಿಸಿ ದೂರು ದಾಖಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು 15-17 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ. ಆರೋಪಿ ವಿದ್ಯಾರ್ಥಿನಿಯರು ಓದುತ್ತಿದ್ದ ಪ್ರೌಢಶಾಲೆಯಲ್ಲೇ ಹಳೆ ವಿದ್ಯಾರ್ಥಿಯಾಗಿದ್ದ. ಶಾಲೆ ಪಕ್ಕದಲ್ಲೇ ತಾನೂ ಕೂಡ ತರಬೇತಿ ಕೇಂದ್ರವನ್ನು ತೆಗೆದಿದ್ದ.
ಕ್ರೀಡೆ, ಚಿತ್ರಕಲೆಯಲ್ಲಿ ಆಸಕ್ತಿ ಇದ್ದ ವಿದ್ಯಾರ್ಥಿನಿಯರು ತರಬೇತಿ ಪಡೆಯಲು ಈತನ ತರಬೇತಿ ಕೇಂದ್ರಕ್ಕೆ ಸೇರಿಕೊಂಡಿದ್ದರು. ಆರಂಭದಲ್ಲಿ ಈ ಕಾಮುಕ ಅಣ್ಣನಂತೆ ನಟಿಸುತ್ತದ್ದನು. ಬಳಿಕ ತನ್ನ ಕಾಮುಕ ಬುದ್ಧಿ ತೋರಿಸಲು ಆರಂಭಿಸುತ್ತಿದ್ದನು.
ಈತ ತನ್ನ ಪಿಟಿ ರೂಂನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದನು. ಅದನ್ನು ಪೋಷಕರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಿದ್ದನು ಎಂದು ತಿಳಿದು ಬಂದಿದೆ. ಮಾತ್ರವಲ್ಲದೆ ವಿದ್ಯಾರ್ಥಿನಿಯರೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದನು ಎನ್ನಲಾಗುತ್ತಿದೆ.
ಹಿಂದೊಮ್ಮೆ ಗ್ರಾಮದ ವಿದ್ಯಾರ್ಥಿನಿಗೆ ಐಸ್‌ಕ್ರೀಮ್ ನೀಡಿ ಪ್ರಜ್ಞೆ ತಪ್ಪಿಸಿ ಬೆತ್ತಲೆ ಫೋಟೋ ತೆಗೆದು ನನ್ನೊಂದಿಗೆ ಮಲಗಲು ಹೇಳುತ್ತಿದ್ದನು. ಇದೆಲ್ಲವನ್ನೂ ವಿದ್ಯಾರ್ಥಿನಿಯರು ದೂರಿನಲ್ಲಿ ದಾಖಲಿಸಿದ್ದಾರೆ. ಇದರಿಂದಾಗಿ ಜಿಲ್ಲಾ ಮಕ್ಕಳ ರಕ್ಷಾಣಾ ಘಟಕಕ್ಕೆ ವಿದ್ಯಾರ್ಥಿನಿಯರು ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಬಳಿಕ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇಲೆ ಯೋಗಿ ಎಂಬಾತನನ್ನು ಬಂಧಿಸಲಾಗಿದೆ.
ಪೋಕ್ಸೋ ಕೇಸ್ ಜೊತೆಗೆ ಬಿಎನ್‌ಎಸ್(ಭಾರತೀಯ ನ್ಯಾಯ ಸಂಹಿತೆ) ಸೆಕ್ಷನ್ 354 ಎ, 354 ಡಿ, 509 ಅಡಿಯಲ್ಲಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ.












Click it and Unblock the Notifications