ಗ್ರಾ.ಪಂ ಚುನಾವಣಾ ಕಣದಲ್ಲಿ ಟೆಕ್ಕಿಗಳು, ಎಂಬಿಎ, ಬಿ.ಇ ಪದವೀಧರರು!
ಮಂಡ್ಯ, ಡಿಸೆಂಬರ್ 21: ಗ್ರಾಮ ಪಂಚಾಯತಿ ಚುನಾವಣೆ ಎಂದರೆ ನಮಗೆ ಈಗಲೂ ಕಣ್ಮುಂದೆ ಬರುವ ದೃಶ್ಯ ಊರ ಹಿರಿಯ ಅಭ್ಯರ್ಥಿಗಳು, ವಿದ್ಯಾಭ್ಯಾಸ ಕಡಿಮೆ ಇರುವವರು ಮತ್ತು ಹಳ್ಳಿಗಾಡಿನ ಜನರದ್ದು. ಆದರೆ ರಾಜ್ಯದ ಗ್ರಾಮೀಣ ಭಾಗದಲ್ಲಿ ಈಗ ಅಮೂಲಾಗ್ರ ಬದಲಾವಣೆ ಆಗುತ್ತಿದೆ. ವಿದ್ಯಾವಂತ ಯುವಕರು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ.
ಮತಗಟ್ಟೆಗೆ ಬಾರದ ಎಲೈಟ್ ಕ್ಲಾಸ್ ಜನರೂ ಈಗ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾಗಿದ್ದಾರೆ. ಹಳ್ಳಿಗಳಿಗೆ ಬಾರದ ಎಂಎ, ಬಿಇ, ಎಂಬಿಎ ಪದವೀಧರರೂ ಚುನಾವಣೆ ಕಣಕ್ಕೆ ಇಳಿಯುತ್ತಿದ್ದಾರೆ. ಅಷ್ಟೇ ಅಲ್ಲ ಟೆಕ್ಕಿಗಳು ಉತ್ತಮ ಉದ್ಯೋಗವನ್ನು ಬಿಟ್ಟು ಸ್ಪರ್ಧೆಗೆ ಧುಮುಕಿದ್ದಾರೆ.

ಕ್ಯಾಂಪಸ್ ಸೆಲೆಕ್ಷನ್ನಲ್ಲಿಯೇ ಇನ್ಫೋಸಿಸ್ ಗೆ ಆಯ್ಕೆ
ಈ ವಿದ್ಯಮಾನ ಮಂಡ್ಯ ಜಿಲ್ಲೆಯ ಗ್ರಾ.ಪಂ ಚುನಾವಣೆಯಲ್ಲಿ ಕಂಡು ಬಂದಿದ್ದು, ಮೈಸೂರಿನ ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿಖರನಹಳ್ಳಿ ಗ್ರಾಮದ ಯುವಕ ಎಸ್.ಜೆ. ಪ್ರಮೋದ್ ಇದೀಗ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಪ್ರಮೋದ್, ಎಂಬಿಎ ಮುಗಿಸಿ ಕ್ಯಾಂಪಸ್ ಸೆಲೆಕ್ಷನ್ನಲ್ಲಿಯೇ ಇನ್ಫೋಸಿಸ್ ಗೆ ಆಯ್ಕೆಯಾಗಿದ್ದರು. ಅಲ್ಲಿ ಎರಡು ವರ್ಷ ಕೆಲಸ ಮಾಡಿದ ಪ್ರಮೋದ್, ಇದೀಗ ಕದಬಹಳ್ಳಿ ಪಂಚಾಯತಿಯಿಂದ ಸ್ಪರ್ಧಿಸಲು ಉದ್ಯೋಗ ತೊರೆದಿದ್ದಾರೆ. ಅಷ್ಟೊಳ್ಳೆ ಉದ್ಯೋಗವನ್ನು ಬಿಟ್ಟು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಲು ಕಾರಣವೇನೆಂದು ಕೇಳಿದರೆ, ಗ್ರಾಮಾಭಿವೃದ್ಧಿ ಕನಸು ಎನ್ನುತ್ತಾರೆ.

ಕಾಳಿಂಗನಹಳ್ಳಿ ಪಂಚಾಯಿತಿಯಿಂದ ಕಣಕ್ಕೆ
ಪ್ರಮೋದ್ ಮಾತ್ರವಲ್ಲ, ಇನ್ನೋರ್ವ ಎಂಬಿಎ ಪದವೀಧರೆ ಸೌಮ್ಯ ಕೂಡ ಇದೇ ದಾರಿ ಹಿಡಿದಿದ್ದಾರೆ. ಇವರು ಬಿಳಗುಂದ ಗ್ರಾಮದವರಾಗಿದ್ದು, ಕಾಳಿಂಗನಹಳ್ಳಿ ಪಂಚಾಯಿತಿಯಿಂದ ಕಣಕ್ಕೆ ಇಳಿದಿದ್ದಾರೆ. ಸೌಮ್ಯ ಎಂಬಿಎ ಪದವಿ ಅಭ್ಯಾಸ ಮಾಡಿದ್ದಾರೆ. ಸದ್ಯ ಪತಿಯೊಂದಿಗೆ ತುಮಕೂರಿನಲ್ಲಿ ನೆಲೆಸಿದ್ದು, ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಗ್ರಾಮದ ಏಳಿಗೆಗಾಗಿ ಸೇವೆ
ವೋಟರ್ ಐಡಿ ಹುಟ್ಟೂರಿನಲ್ಲೇ ಇರುವುದರಿಂದ, ಮಂಡ್ಯದ ಕಾಳಿಂಗನಹಳ್ಳಿ ಪಂಚಾಯಿತಿಯಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ರಾಜಕಾರಣಕ್ಕೆ ವಿದ್ಯಾವಂತರು ಧುಮುಕಬೇಕು. ಇದರಿಂದ ಸುಧಾರಣೆಯೂ ಆಗುತ್ತದೆ. ನಾನೂ ಅಷ್ಟೇ ಗ್ರಾಮದ ಏಳಿಗೆಗಾಗಿ ಸೇವೆ ಸಲ್ಲಿಸುವುದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಸಕ್ತಿ
ಇನ್ನು ಮಳವಳ್ಳಿ ತಾಲೂಕಿನ ಹಲಗೂರು ಗ್ರಾ.ಪಂ ಚುನಾವಣಾ ಕಣದಲ್ಲಿ ಬಿ.ಇ ಪದವೀಧರೆಯೊಬ್ಬರು ಸ್ಪರ್ಧಿಸಿದ್ದಾರೆ. ಹಲಗೂರು ಗ್ರಾಮದವರೇ ಆಗಿರುವ ಶೃತಿ, ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ಮಾಡಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಹೆರಿಗೆಗಾಗಿ ತವರು ಹಲಗೂರಿಗೆ ಬಂದಿದ್ದು, ಇಲ್ಲಿಯೇ ಚುನಾವಣಾ ಕಣಕ್ಕಿಳಿದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications