ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಿಂದ ಕಬ್ಬು ಸಂಶೋಧನಾ ಕೇಂದ್ರ ಸ್ಥಳಾಂತರ; ಆಕ್ರೋಶ

|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 11: ಸಕ್ಕರೆ ನಾಡು ಮಂಡ್ಯದ ಮೈಶುಗರ್ ಕಾರ್ಖಾನೆ ಸದ್ಯ ಸ್ಥಗಿತಗೊಂಡಿದ್ದು, ಮತ್ತೆ ಕಾರ್ಖಾನೆ ಆರಂಭಿಸಲು ರಾಜ್ಯ ಸರ್ಕಾರ ಮಾತ್ರ ಮೀನಾಮೇಷ ಎಣಿಸುತ್ತಿದೆ. ಇದೀಗ ಮಂಡ್ಯದಿಂದ ಕಬ್ಬು ಸಂಶೋಧನಾ ಕೇಂದ್ರ ಹಾಗೂ ಬೆಂಗಳೂರಿನ ಆಯುಕ್ತರ ಕಚೇರಿಯನ್ನು ಬೇರೆಡೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಡ್ಯ ಕಬ್ಬು ಬೆಳೆಗಾರರ ಜೀವನಾಡಿಯಾಗಿರುವ ಮೈಶುಗರ್ ಕಾರ್ಖಾನೆ ಸ್ಥಗಿತಗೊಂಡು ಹಲವು ವರ್ಷಗಳೇ ಕಳೆದಿವೆ. ಮತ್ತೆ ಕಾರ್ಖಾನೆ ಪುನರಾರಂಭಿಸುವಂತೆ ರೈತರು, ಕಬ್ಬು ಬೆಳೆಗಾರರು ಹಾಗೂ ಜಿಲ್ಲೆಯ ಜನರು ಹೋರಾಟವನ್ನು ಮಾಡುತ್ತಲೇ ಇದ್ದಾರೆ. ಆದರೂ ರಾಜ್ಯ ಸರ್ಕಾರ ಮಾತ್ರ ಕಾರ್ಖಾನೆ ಆರಂಭಿಸುವ ಬಗ್ಗೆ ಚಿಂತನೆ ನಡೆಸದೇ ಮೀನಮೇಷ ಎಣಿಸುತ್ತಿದೆ.

ಈ ಸಂದರ್ಭದಲ್ಲೇ ಮಂಡ್ಯದಲ್ಲಿರುವ ಭಾರತ ರತ್ನ ಸರ್.ಎಂ .ವಿಶ್ವೇಶ್ವರಯ್ಯ ಕಬ್ಬು ಸಂಶೋಧನಾ ಸಂಸ್ಥೆ ಹಾಗೂ ಬೆಂಗಳೂರಿನಲ್ಲಿರುವ ಸಂಸ್ಥೆಯ ಆಯುಕ್ತರ ಕಚೇರಿಯನ್ನು ಕುಂದಾನಗರಿ ಬೆಳಗಾವಿಗೆ ಸ್ಥಳಾಂತರಿಸಲು ಮುಂದಾಗಿದೆ. ಸರ್ಕಾರದ ಈ ತೀರ್ಮಾನ ಇದೀಗ ಮಂಡ್ಯ ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಕಾರಣಕ್ಕೂ ಸಂಶೋಧನಾ ಸಂಸ್ಥೆ ಸ್ಥಳಾಂತರಿಸದೆ ಯಥಾಸ್ಥಿತಿ ಮುಂದುವರಿಸಬೇಕು ಎಂದು ಮಂಡ್ಯ ರೈತ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.

The Relocation Of The Sugarcane Research Center From Mandya; Outrage By Farmers

ಕಬ್ಬು ಸಂಶೋಧನಾ ಸಂಸ್ಥೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಕಲ್ಪನೆಯಂತೆ ಕಳೆದು ಹದಿನೈದು ವರ್ಷದ ಹಿಂದೆ ಪ್ರಾರಂಭಿಸುವ ಮೂಲಕ ಕಬ್ಬಿನ ಹಲವಾರು ತಳಿಗಳನ್ನು ರೈತರಿಗೆ ಪರಿಚಯಿಸಲಾಗಿದೆ. ಈ ಕೇಂದ್ರದಿಂದ ಮಂಡ್ಯವಲ್ಲದೇ ಹಳೆ ಮೈಸೂರು ಭಾಗದ ರೈತರಿಗೆ, ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.

ಇದೀಗ ಕಬ್ಬು ಸಂಶೋಧನಾ ಸಂಸ್ಥೆ ಸ್ಥಳಾಂತರಿಸಿದರೆ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಲಿದ್ದು, ಸಂಶೋಧನಾ ಸಂಸ್ಥೆ ಉಳಿವಿಗಾಗಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ಕೊಟ್ಟಿದ್ದಾರೆ.

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಧ್ವನಿ ಎತ್ತದಿದ್ದರೆ ಅವರಿಗೂ ಜಿಲ್ಲೆಗೆ ಘೇರಾವ್ ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ. ಮೈಶುಗರ್ ಕಾರ್ಖಾನೆ ಸ್ಥಗಿತದಿಂದ ಈಗಾಗಲೇ ಕಂಗಾಲಾಗಿರುವ ಜಿಲ್ಲೆಯ ಕಬ್ಬು ಬೆಳೆಗಾರರಿಗೆ, ಕಬ್ಬು ಸಂಶೋಧನಾ ಸಂಸ್ಥೆ ಸ್ಥಳಾಂತರಗೊಳ್ಳುವ ವಿಚಾರ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.2011ರಲ್ಲಿ

ಕಬ್ಬು ಸಂಶೋಧನಾ ಸಂಸ್ಥೆ ಸ್ಥಾಪನೆ
ಮಂಡ್ಯ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳ ಕಬ್ಬು ಬೆಳೆಗಾರರಿಗೆ ಉತ್ತೇಜನ ನೀಡಲು ಮತ್ತು ಕಬ್ಬು ಬೆಳೆ ಸಂಬಂಧಿತ ಸಂಶೋಧನೆಗೆ ಒತ್ತು ನೀಡಲು ಸರ್. ಎಂ ವಿಶ್ವೇಶ್ವರಯ್ಯ ಕಬ್ಬು ಸಂಶೋಧನಾ ಕೇಂದ್ರವನ್ನು ಅಸ್ತಿತ್ವಕ್ಕೆ ತರಲಾಗಿತ್ತು.

ಮಂಡ್ಯ ತಾಲ್ಲೂಕು ಸಾತನೂರು ಗ್ರಾಮದಲ್ಲಿ ಲಭ್ಯವಿದ್ದ 100 ಎಕರೆ ಜಮೀನಿನಲ್ಲಿ ಕಬ್ಬು ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿತ್ತು. ಇದಕ್ಕಾಗಿ ಅಂದಿನ ಸರ್ಕಾರ 2021-11ನೇ ಸಾಲಿನಲ್ಲಿ 1 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು.

ದಕ್ಷಿಣ ಭಾಗದ ರೈತ ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಿ ಉತ್ತಮ ಇಳುವರಿಯ ಸಕ್ಕರೆ ಅಂಶ ಹೊಂದಿರುವ ಕಬ್ಬು ಬೆಳೆಯುವಂತೆ ಉತ್ತೇಜನ ನೀಡುವುದು ಇದರ ಉದ್ದೇಶವಾಗಿತ್ತು. ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳಿಗೆ ಸ್ವಾಯತ್ತ ಕಬ್ಬು ಸಂಶೋಧನಾ ಸಂಸ್ಥೆ ಸ್ಥಾಪಿಸುವುದು ಅಗತ್ಯ ಎಂಬ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿಯೇ ಸ್ಥಾಪನೆ ಮಾಡಲಾಗಿತ್ತು.

English summary
The state government has come forward to relocate the Mandya sugar cane research center and the Bangaluru Commissioner's office elsewhere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X