ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷದ ದಿನ ಮುತ್ತತ್ತಿಗೆ ಪ್ರವಾಸಿಗರ ಭೇಟಿ ನೀಷೇಧ

|
Google Oneindia Kannada News

ಮಂಡ್ಯ, ಡಿಸೆಂಬರ್ 29 : ಹೊಸ ವರ್ಷದ ಹಿನ್ನಲೆಯಲ್ಲಿ ಮುತ್ತತ್ತಿ ಪ್ರವಾಸಿ ತಾಣಕ್ಕೆ ಒಂದು ದಿನ ಜನರ ಭೇಟಿ ನಿಷೇಧಿಸಲಾಗಿದೆ. ನಿಸರ್ಗದ ಮಡಿಲಿನಲ್ಲಿ ಹೊಸ ವರ್ಷಾಚರಣೆ ಮಾಡುವ ಜನರಿಗೆ ಇದರಿಂದ ನಿರಾಸೆಯಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಮುತ್ತತ್ತಿ ಪ್ರವಾಸಿ ತಾಣಕ್ಕೆ ಭೇಟಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಮತ್ತತ್ತಿಯಲ್ಲಿ ಕಾವೇರಿ ನದಿ ನೀರು ಹರಿಯುವುದರಿಂದ ಬೆಂಗಳೂರು, ಕನಕಪುರ ಸೇರಿದಂತೆ ವಿವಿಧ ಪ್ರದೇಶಗಳಿಂದ ಜನರು ಆಗಮಿಸುತ್ತಾರೆ.

ಮಂಡ್ಯದ ಪ್ರವಾಸಿ ತಾಣಗಳಲ್ಲಿ ಪುಂಡರ ಹಾವಳಿ, ಹದ್ದಿನ ಕಣ್ಣಿಟ್ಟ ಪೊಲೀಸ್ಮಂಡ್ಯದ ಪ್ರವಾಸಿ ತಾಣಗಳಲ್ಲಿ ಪುಂಡರ ಹಾವಳಿ, ಹದ್ದಿನ ಕಣ್ಣಿಟ್ಟ ಪೊಲೀಸ್

ನಿಸರ್ಗದ ಮಡಿಲಿನಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಆಚರಣೆ ಮಾಡುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡಾ ಈ ಹಿಂದೆ ನಡೆದಿವೆ. ಆದ್ದರಿಂದ ಜನರ ಪ್ರವೇಶ ನಿಷೇಧಿಸಲಾಗಿದೆ.

ಪ್ರವಾಸಿ ತಾಣ ಮುತ್ತತ್ತಿಯಲ್ಲಿ ಮದ್ಯಪಾನ ನಿಷೇಧಪ್ರವಾಸಿ ತಾಣ ಮುತ್ತತ್ತಿಯಲ್ಲಿ ಮದ್ಯಪಾನ ನಿಷೇಧ

This New Year no entry for Muthathi

ಡಿಸೆಂಬರ್ 31ರ ಬೆಳಗ್ಗೆ 6 ಗಂಟೆಯಿಂದ 2019ರ ಜನವರಿ 1ರ ಮಧ್ಯರಾತ್ರಿ ತನಕ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ. ಪೊಲೀಸರು ಸಹ ಅರಣ್ಯ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತರಕ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ, ಪ್ರವಾಸಿಗರ ಹಿತದೃಷ್ಟಿಯಿಂದ ಮುತ್ತತ್ತಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್ ಹೇಳಿದ್ದಾರೆ.

English summary
Mandya district Malavalli tahsildar banned the entry to tourist spot Muthathi on December 31 in a view of New Year celebration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X