ಮದ್ದೂರಿನಲ್ಲಿ ಲಾರಿ-ಆಟೋ ಅಪಘಾತ; ಮೂವರು ಸ್ನೇಹಿತರ ಸಾವು

ಮಂಡ್ಯ, ಫೆಬ್ರವರಿ 05: ಪ್ಯಾಸೆಂಜರ್ ಆಟೋಗೆ ಲಾರಿಯೊಂದು ಡಿಕ್ಕಿ ಹೊಡೆದು ಆಟೋದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದುಂಡನಹಳ್ಳಿ ಬಳಿ ನಡೆದಿದೆ.

ಮಂಗಳವಾರ ತಡರಾತ್ರಿ ಮದ್ದೂರು ಮತ್ತು ತುಮಕೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮೂವರು ಸ್ನೇಹಿತರಾದ ಚನ್ನಪಟ್ಟಣ ತಾಲೂಕಿನ ಪ್ರಶಾಂತ್ (25), ಮದ್ದೂರಿನ ಮಲ್ಲನಕುಪ್ಪೆ ಗ್ರಾಮದ ಸೂರ್ಯ (24) ಹಾಗೂ ದುಂಡನಹಳ್ಳಿ ಗ್ರಾಮದ ಅಭಿ (25) ಮೃತಪಟ್ಟವರು.

ಮಂಗಳವಾರ ರಾತ್ರಿ ಸುಮಾರು 11ಕ್ಕೆ ಈ ಮೂವರೂ ದುಂಡನಹಳ್ಳಿಯಿಂದ ಆಟೋದಲ್ಲಿ ಮದ್ದೂರು ಕಡೆಗೆ ಹೋಗುತ್ತಿದ್ದರು. ದುಂಡನಹಳ್ಳಿ ಬಳಿ ಮದ್ದೂರಿನಿಂದ ಕುಣಿಗಲ್ ಕಡೆಗೆ ಹೋಗುತ್ತಿದ್ದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿ ಹೊಡೆದು ಅದರಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Three Friends Died In Lorry Auto Accident Near Maddur

ಅಪಘಾತವಾದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+