ಮಂಡ್ಯ: ಜೈಲಿನಲ್ಲೇ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು
ಮಂಡ್ಯ, ಜುಲೈ 21 : ವಿಚಾರಣಾಧೀನ ಕೈದಿಯೊಬ್ಬ ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ಮಧ್ಯರಾತ್ರಿ ಮಂಡ್ಯದ ಜೈಲಿನಲ್ಲಿ ನಡೆದಿದೆ.
ರಾಘವೇಂದ್ರ (33) ಆತ್ಮಹತ್ಯೆಗೆ ಶರಣಾದ ಕೈದಿ. ಸರಗಳ್ಳತನದ ಆರೋಪದಲ್ಲಿ ರಾಘವೇಂದ್ರ ಕಳೆದ ಮೂರುವರೆ ತಿಂಗಳ ಹಿಂದೆಯೇ ಜೈಲು ಸೇರಿದ್ದ. ರಾಘವೇಂದ್ರನಿಗೆ ಜಾಮೀನು ಕೊಡಿಸಲೂ ಹಾಗೂ ನೋಡಲು ಅವರ ಮನೆಯವರು ಯಾರೂ ಬಂದಿರಲಿಲ್ಲ ಪ್ರಯತ್ನಿಸಿರಲಿಲ್ಲ. ಹೀಗಾಗಿ ಮನನೊಂದು ಗುರುವಾರ ಮಧ್ಯರಾತ್ರಿ ಎಲ್ಲರೂ ಮಲಗಿರುವ ವೇಳೆ ಜೈಲಿನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಂಡ್ಯ ಎಸ್ಪಿ ರಾಧಿಕಾ ಜೈಲು ಅಧಿಕಾರಿಯಿಂದ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು. ಈ ಸಂಬಂಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications