ಮಂಡ್ಯ ಗೌಡ್ರು ಸ್ಟೈಲಲ್ಲಿ ಬಿಸಿಬಿಸಿ ಬಾಡೂಟ ಸವಿದ ಕುಮಾರಣ್ಣ
ಒಂದೆಡೆ ರಾಜಕಾರಣದಲ್ಲಿ ಸಖತ್ ಸದ್ದು ಮಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸಂಡೇ ಸ್ಪೆಷಲ್ ಅಂತ ಬಾಡೂಟ ಸವಿದು ಜಾಲಿ ಮೂಡ್‌ಗೆ ತೆರಳಿದ್ದಾರೆ. ಥೇಟ್ ಮಂಡ್ಯ ಗೌಡರ ಸ್ಟೈಲಲ್ಲಿ ರಾಗಿ ಮುದ್ದೆ ನಾಟಿ ಕೋಳಿ ಸಾರು ಸವಿದು ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ.
ಇನ್ನು ಎಚ್.ಡಿ.ಕುಮಾರಸ್ವಾಮಿ ಅವರು ಕಳೆದ ಆಗಸ್ಟ್‌ನಲ್ಲಿ ಮಂಡ್ಯ ಜಿಲ್ಲೆಯ ಲಕ್ಷ್ಮಣ ಎಂಬುವರ ಜಮೀನಿನಲ್ಲಿ ಭತ್ತ ನಾಟಿ ಮಾಡಿದ್ದರು. ತಿಂಗಳುಗಳು ಕಳೆದ ಬಳಿಕ ಇಂದು ಅದೇ ಸ್ಥಳಕ್ಕೆ ಕುಮಾರಸ್ವಾಮಿ ತೆರಳಿದ್ದರು. ಈ ವೇಳೆ ತಾವೇ ನಾಟಿ ಮಾಡಿದ್ದ ಭತ್ತವನ್ನು ಕಣ್ತುಂಬಿಕೊಂಡರು.

ಬಳಿಕ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ಹೊಲದಲ್ಲೇ ಕುಮಾರಸ್ವಾಮಿ ಅವರು ರೈತ ಮಹಿಳೆಯರ ಜೊತೆ ಕುಳಿತು ನಾಟಿ ಕೋಳಿ ಸಾರು, ರಾಗಿ ಮುದ್ದೆ ಸವಿದಿದ್ದಾರೆ. ಕೇಂದ್ರ ಸಚಿವರಾದರೂ ಥೇಟ್ ಮಂಡ್ಯ ಗೌಡರ ಸ್ಟೈಲಲ್ಲೇ ಬಾಡು ತಿಂದು ಎಲ್ಲ ಹುಬ್ಬೇರಿಸಿದ್ದಾರೆ.
ಈ ಬಗ್ಗೆ ಸಂತಸ ಹಂಚಿಕೊಂಡಿರುವ ಎಚ್.ಡಿ.ಕುಮಾರಸ್ವಾಮಿ, ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಕಳೆದ ಆಗಸ್ಟ್ 11ರಂದು ರೈತ ಮಹಿಳೆಯರೊಂದಿಗೆ ಭತ್ತ ನಾಟಿ ಮಾಡಿದ್ದೆ. ಇನ್ನೇನು ಫಸಲು ಕೈಗೆ ಬರುವುದರಲ್ಲಿದೆ ಎಂದಿದ್ದಾರೆ.

ಇಂದು ಮತ್ತೊಮ್ಮೆ ಆ ಗದ್ದೆ ಬಯಲಿಗೆ ಭೇಟಿ ನೀಡಿ ಬೆಳೆ ವೀಕ್ಷಿಸಿದೆ. ಸಮೃದ್ಧವಾದ ಫಸಲು ಕಂಡು ನನ್ನ ಹೃದಯ ತುಂಬಿ ಬಂತು. ನಂತರ ಅಲ್ಲಿಯೇ ರೈತ ಮಾತೆಯರ ಜತೆ ಕುಳಿತು ಊಟ ಸೇವಿಸಿದೆ. ನನ್ನ ಮನಸ್ಸಿಗೆ ಬಹಳ ಸಂತೋಷ ಉಂಟು ಮಾಡಿದ ಕ್ಷಣವದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಶಾಸಕರಾದ ಮಂಜುನಾಥ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಸೇರಿ ಹಲವು ಸ್ಥಳೀಯ ನಾಯಕರು ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದರು.

ಇಂದು ಮಂಡ್ಯ ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಂಚರಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಕೊಪ್ಪಲು ಗ್ರಾಮದ ಶ್ರೀ ಕಾಶೀವಿಶ್ವನಾಥ ದೇವರ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ತೆರಳಿ ದೇವರ ದರ್ಶನ ಪಡೆದುಕೊಂಡರು. ಕ್ಯಾತನಹಳ್ಳಿಯಲ್ಲಿ ರೈತ ನಾಯಕರಾದ ಶ್ರೀ ಪುಟ್ಟಣ್ಣಯ್ಯ ಅವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡಿದರು.
ಪಾಂಡವಪುರ ಪಟ್ಟಣದ ಬಳಿ ಹೆದ್ದಾರಿ ಕಾಮಗಾರಿಗೆ ಸಚಿವ ಕುಮಾರಸ್ವಾಮಿ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್, ಮಂಡ್ಯ ಬಿಜೆಪಿ ಅಧ್ಯಕ್ಷ ಇಂದ್ರೇಶ್ ಕುಮಾರ್ ಸೇರಿ ಅನೇಕ ಮುಖಂಡರು, ಅಧಿಕಾರಿಗಳು ಇದ್ದರು.
ಮೊದಲಿಗೆ ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯದಲ್ಲಿ ಕುಮಾರಸ್ವಾಮಿ ಅವರು ಕಳೆದ ಲೋಕಸಭೆ ಚುನಾವಣೆಗೆ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದ್ದರು. ಆದರೆ, ಸುಮಲತಾ ಅಂಬರೀಷ್ ಅವರ ವಿರುದ್ಧ ಹೀನಾಯ ಸೋಲು ಕಂಡಿದ್ದರು. ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಎಚ್.ಡಿ.ಕುಮಾರಸ್ವಾಮಿ ಅವರೇ ಸ್ಪರ್ಧಿಸಿ, ಗೆಲುವು ಸಾಧಿಸಿ ಕೇಂದ್ರ ಮಂತ್ರಿಯೂ ಆಗಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications