ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ; ಮೇಲುಕೋಟೆ ಚಲುವನಾರಾಯಣನಿಗೆ ಕಿರೀಟ ಧಾರಣೆ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಮಾರ್ಚ್ 25: ದಕ್ಷಿಣ ಭಾರತದಲ್ಲಿರುವ ಪ್ರಮುಖ ವೈಷ್ಣವ ಕ್ಷೇತ್ರಗಳಾದ ಶ್ರೀರಂಗ, ತಿರುಪತಿ, ಕಾಂಚೀಪುರದೊಂದಿಗೆ ಮೇಲುಕೋಟೆಯೂ ಸೇರಿದೆ. ಮಾ.19 ರಿಂದ ವೈರಮುಡಿ ಉತ್ಸವದ ಸಂಭ್ರಮ ಮನೆ ಮಾಡಿದ್ದು, ಬುಧವಾರ ಚೆಲುವ ನಾರಾಯಣನಿಗೆ ರತ್ನಖಚಿತ ವೈರಮುಡಿಯನ್ನು ಧರಿಸಲಾಗಿದ್ದು, ಸರಳವಾಗಿ ವೈರಮುಡಿ ಬ್ರಹ್ಮೋತ್ಸವ ನಡೆಯಿತು.

ಈ ಉತ್ಸವಕ್ಕೆ ಲಕ್ಷಾಂತರ ಜನರು ಭಾಗಿಯಾಗುತ್ತಿದ್ದರು. ವೈರಮುಡಿ ಧರಿಸಿ ವಿಜ್ರಂಭಿಸುವ ಚೆಲುವನಾರಾಯಣನ ದರ್ಶನ ಮಾಡಿ ಪುನೀತರಾಗುತ್ತಿದ್ದರು. ಕಳೆದ ವರ್ಷ ಕೊರೋನಾದಿಂದಾಗಿ ಸಂಪ್ರದಾಯಿಕವಾಗಿ ನಡೆದಿದ್ದ ವೈರಮುಡಿ ಉತ್ಸವ ಈ ಬಾರಿಯೂ ಸರಳವಾಗಿ ನಡೆಯಿತು. ಸ್ಥಳೀಯರಿಗೆ ಮಾತ್ರ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು.

 ಮೇಲುಕೋಟೆ ದೇಗುಲದ ಅಗ್ನಿಅವಘಡ ತಂದ ಆತಂಕ! ಮೇಲುಕೋಟೆ ದೇಗುಲದ ಅಗ್ನಿಅವಘಡ ತಂದ ಆತಂಕ!

ಪೌರಾಣಿಕ ಮತ್ತು ಐತಿಹಾಸಿಕ ಮಹಿಮೆ ಹೊಂದಿರುವ ಮೇಲುಕೋಟೆಯಲ್ಲಿ ಹಲವು ಉತ್ಸವ, ಕಾರ್ಯಕ್ರಮಗಳು ವರ್ಷಪೂರ್ತಿ ನಡೆಯುತ್ತವೆಯಾದರೂ ಅದರಲ್ಲಿ ಚೆಲುವರಾಯಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಪ್ರಮುಖವಾಗಿದೆ. ಈ ಉತ್ಸವದಲ್ಲಿ ವಜ್ರ ಖಚಿತ ಕಿರೀಟ ಅರ್ಥಾತ್ ವೈರಮುಡಿಯೇ ಪ್ರಮುಖ ಆಕರ್ಷಣೆಯಾಗಿದೆ.

ತಿರುಪತಿ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ ತಿರುಪತಿ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ

ಇದರ ಬಗ್ಗೆ ತಿಳಿಯುತ್ತಾ ಹೋದರೆ ಪೌರಾಣಿಕ ಯುಗದತ್ತ ಇದರ ಇತಿಹಾಸ ಹೊರಳುತ್ತದೆ. ಶ್ರೀಮಾನ್ ನಾರಾಯಣನ ಕಿರೀಟವೆಂದೂ ದ್ವಾಪರಯುಗದಲ್ಲಿ ಕೃಷ್ಣನ ಮೂಲಕ ಚೆಲುವರಾಯನಿಗೆ ಗರುಡನಿಂದ ತೊಡಿಸಿದನೆಂಬುವುದು ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠದಿಂದ ರಾಕ್ಷಸ ವಿರೋಚನ ಕದ್ದಿದ್ದ ನಾರಾಯಣನ ಕಿರೀಟವನ್ನು ಗರುಡ ರಾಕ್ಷಸನೊಂದಿಗೆ ಹೋರಾಡಿ ಮರಳಿ ತಂದು ಚೆಲುವರಾಯನಿಗೆ ಅರ್ಪಿಸಿದನೆಂಬುದು ಜನವಲಯದಲ್ಲಿರುವ ನಂಬಿಕೆಯಾಗಿದೆ.

7.30ಕ್ಕೆ ಬಾಗಿಲು ತೆರೆಯಲಿದೆ ಮೇಲುಕೋಟೆ ದೇವಾಲಯ 7.30ಕ್ಕೆ ಬಾಗಿಲು ತೆರೆಯಲಿದೆ ಮೇಲುಕೋಟೆ ದೇವಾಲಯ

ವೈರಮುಡಿ ಬ್ರಹ್ಮೋತ್ಸವ

ವೈರಮುಡಿ ಬ್ರಹ್ಮೋತ್ಸವ

ಇದು ಹೇಗೆ ಆಚರಣೆಗೆ ಬಂತೆಂಬುವುದರ ಬಗ್ಗೆ ಪುರಾಣದ ಕಥೆಯೊಂದು ಪ್ರಚಲಿತದಲ್ಲಿದೆ. ಅಯೋಧ್ಯೆಯಲ್ಲಿ ದಶರಥ ಮಹಾರಾಜ ಪುತ್ರ ಶ್ರೀರಾಮಚಂದ್ರನಿಗೆ ಪಟ್ಟಾಭಿಷೇಕ ಮಾಡಲು ನಿರ್ಧರಿಸಿ, ಪಾಲ್ಗುಣ ಮಾಸದ ಪುಷ್ಯ ನಕ್ಷತ್ರದ ಶುಭದಿನವನ್ನು ಗೊತ್ತು ಮಾಡಿ ಅರಮನೆಯಲ್ಲಿ ಪಟ್ಟಾಭಿಷೇಕಕ್ಕೆ ಬೇಕಾದ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿದ್ದನು. ಇನ್ನೇನು ಪಟ್ಟಾಭಿಷೇಕ ನಡೆಯಬೇಕೆನ್ನುವಷ್ಟರಲ್ಲಿ ಕೈಕೇಯಿಯ ಕುತಂತ್ರದಿಂದಾಗಿ ಶ್ರೀರಾಮ ವನವಾಸಕ್ಕೆ ತೆರಳಬೇಕಾಯಿತು. ಆದರೆ ತನ್ನ ಅಣ್ಣ ಶ್ರೀರಾಮನ ಪಟ್ಟಾಭಿಷೇಕವನ್ನು ಕಣ್ಣಾರೆ ನೋಡಬೇಕೆನ್ನುವ ಬಯಕೆಯಲ್ಲಿದ್ದ ಸೋದರ ಲಕ್ಷ್ಮಣನಿಗೆ ತನ್ನ ಆಸೆ ಈಡೇರಲಿಲ್ಲವಲ್ಲ ಎಂಬ ಕೊರಗು ಸದಾ ಕಾಡುತ್ತಿತ್ತು.

ಕಿರೀಟ ಧರಿಸುವ ಉತ್ಸವ

ಕಿರೀಟ ಧರಿಸುವ ಉತ್ಸವ

ಈ ಬಯಕೆಯನ್ನು ಈಡೇರಿಸಿಕೊಳ್ಳುವ ಸಲುವಾಗಿ ಆದಿಶೇಷನ ಅವತಾರವಾಗಿದ್ದ ಲಕ್ಷ್ಮಣ ಮುಂದೆ ಕಲಿಯುಗದಲ್ಲಿ ರಾಮಾನುಜರಾಗಿ ಜನಿಸಿ, ಶ್ರೀರಾಮನ ಆರಾಧ್ಯದೈವ ಚೆಲುವರಾಯಸ್ವಾಮಿ ನೆಲೆಸಿದ ಮೇಲುಕೋಟೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕಕ್ಕೆ ನಿಗದಿಪಡಿಸಿದ ಫಾಲ್ಗುಣ ಮಾಸದ ಪುಷ್ಯ ನಕ್ಷತ್ರದ ಶುಭದಿನದಂದೇ ಚೆಲುವರಾಯಸ್ವಾಮಿಗೆ ವೈರಮುಡಿ ಕಿರೀಟ ಧರಿಸುವ ಮೂಲಕ ತನ್ನ ಮನದ ಇಚ್ಛೆಯನ್ನು ನೆರವೇರಿಸಿಕೊಂಡನಂತೆ. ಈ ಸುದಿನವನ್ನು ಪ್ರತಿವರ್ಷವೂ ವೈರಮುಡಿ ಬ್ರಹ್ಮೋತ್ಸವವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಲಾಗಿದೆ.

ಸರ್ಕಾರಕ್ಕೆ ಹಸ್ತಾಂತರವಾಯಿತು

ಸರ್ಕಾರಕ್ಕೆ ಹಸ್ತಾಂತರವಾಯಿತು

ಮೈಸೂರು ರಾಜರ ಆಡಳಿತದಲ್ಲಿ ವೈರಮುಡಿ ಕಿರೀಟ ರಾಜಾಶ್ರಯದಲ್ಲಿತ್ತಾದರೂ ಸ್ವಾತಂತ್ರ್ಯದ ಬಳಿಕ ಸರ್ಕಾರದ ವಶಕ್ಕೆ ಹಸ್ತಾಂತರಿಸಲಾಯಿತು. ಈಗ ಮಂಡ್ಯದ ಸರ್ಕಾರಿ ಖಜಾನೆಯಲ್ಲಿದ್ದು, ಉತ್ಸವದ ಸಂದರ್ಭ ವೈರಮುಡಿ, ರಾಜಮುಡಿ ಕಿರೀಟವನ್ನು ಬಿಗಿ ಭದ್ರತೆಯಲ್ಲಿ ಮೇಲುಕೋಟೆಗೆ ತರಲಾಗುತ್ತದೆಯಲ್ಲದೆ, ಬಳಿಕ ದ್ವಾರದ ಹನುಮಂತನ ಗುಡಿಯ ಬಳಿಯಿಂದ ಬೆಳ್ಳಿ ಪಲ್ಲಕಿಯಲ್ಲಿರಿಸಿ ಪೂಜಿಸಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ.

Recommended Video

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೊಬೈಲ್‌ ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವ ಎಸ್‌ಐಟಿ | Oneindia Kannada
14 ಆಭರಣ ಧರಿಸಲಾಗುತ್ತದೆ

14 ಆಭರಣ ಧರಿಸಲಾಗುತ್ತದೆ

ವೈರಮುಡಿ ಬ್ರಹ್ಮೋತ್ಸವ ಸಂದರ್ಭ ಚೆಲುವರಾಯಸ್ವಾಮಿಗೆ ವೈರಮುಡಿ ಕಿರೀಟ ಮಾತ್ರವಲ್ಲದೆ, ಮೈಸೂರು ಅರಸರಾದ ರಾಜ ಒಡೆಯರ್ ಅರ್ಪಿಸಿದ ರಾಜಮುಡಿಯಲ್ಲದೆ, ಗಂಡಭೇರುಂಡ ಪದಕ, ಶಂಖ, ಚಕ್ರ, ಗಧೆ, ಪದ್ಮಪೀಠ, ಕರ್ಣಕುಂಡಲ ಸೇರಿದಂತೆ 14 ಆಭರಣಗಳನ್ನು ಧರಿಸಲಾಗುತ್ತದೆ.

ಚೆಲುವನಾರಾಯಣಸ್ವಾಮಿಗೆ ಕಿರೀಟ ಧಾರಣೆ ಮಾಡಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಈ ಕ್ಷಣವನ್ನು ಸಾಕ್ಷೀಕರಿಸಲು ಭಕ್ತರು ಕಾತರದಿಂದ ಕಾಯುತ್ತಾರೆ. ಈ ಬಾರಿ ಸರಳ ಮತ್ತು ಸಂಪ್ರದಾಯಿಕವಾಗಿ ವೈರಮುಡಿ ಬ್ರಹ್ಮೋತ್ಸವ ನಡೆದಿದೆ.

English summary
Vairamudi Brahmotsava at Melkote in Mandya district held on March 24 in simple manner due to Covid 19 situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X