ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಪ್ರಿಲ್‌ 2ಕ್ಕೆ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ

|
Google Oneindia Kannada News

ಮಂಡ್ಯ, ಮಾರ್ಚ್ 12 : ಮೇಲುಕೋಟೆಯ ಚಲುವನಾರಾಯಣಸ್ವಾಮಿ ದೇವರ ವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮವನ್ನು ಏಪ್ರಿಲ್ 2ರಂದು ನಡೆಯಲಿದೆ. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮೇಲುಕೋಟೆ ಶಾಸಕ ಸಿ. ಎಸ್. ಪುಟ್ಟರಾಜು ಸೂಚನೆ ನೀಡಿದರು.

ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರೀ ಚಲುವನಾರಾಯಣಸ್ವಾಮಿ ವೈರಮುಡಿ ಕಿರೀಟಧಾರಣ ಬ್ರಹ್ಮೋತ್ಸವ 2020ರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ವೈರಮುಡಿ ಬ್ರಹ್ಮೋತ್ಸವ ಪ್ರಯುಕ್ತ ಮೇಲುಕೋಟೆಯಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 9 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮೇಲುಕೋಟೆ ಚಲುವನ ದರ್ಶನ ಪಡೆದ ಯಡಿಯೂರಪ್ಪಮೇಲುಕೋಟೆ ಚಲುವನ ದರ್ಶನ ಪಡೆದ ಯಡಿಯೂರಪ್ಪ

ಏಪ್ರಿಲ್ 2 ರಂದು ಶ್ರೀವೈರಮುಡಿ ಕಿರೀಟಧಾರಣ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಸಾವಿರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಲಾಯಿತು.

ತಿರುಪತಿ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ ತಿರುಪತಿ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ

Vairamudi Brahmotsava At Melkote On April 2

ಕ್ಷೇತ್ರದಲ್ಲಿ ಕುಡಿಯುವ ನೀರು ಸರಬರಾಜು ಮಾಡುವುದು ಹಾಗೂ ಅಗತ್ಯವಾದ ಮೂಲ ಸೌಕರ್ಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಯಿತು. ಉತ್ಸವಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಶುದ್ಧವಾದ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮಾಡುವಂತೆ ನಿರ್ದೇಶ ನೀಡಲಾಯಿತು.

7.30ಕ್ಕೆ ಬಾಗಿಲು ತೆರೆಯಲಿದೆ ಮೇಲುಕೋಟೆ ದೇವಾಲಯ 7.30ಕ್ಕೆ ಬಾಗಿಲು ತೆರೆಯಲಿದೆ ಮೇಲುಕೋಟೆ ದೇವಾಲಯ

ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಶಾಂತಿ ಸುವ್ಯವಸ್ಥೆ ಪಾಲನೆ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳು ಕಾಳಜಿವಹಿಸಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಯಿತು. ದೇವಾಲಯಕ್ಕೆ ವಿಶೇಷ ದೀಪಾಲಂಕಾರ, ವ್ಯವಸ್ಥಿತ ಸಂಚಾರ ಮತ್ತು ವಾಹನ ನಿಲುಗಡೆ ವ್ಯವಸ್ಥೆ, ಉತ್ಸವ ಪೂರ್ತಿ ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆ, ಮುಖ್ಯ ರಸ್ತೆಗಳ ದುರಸ್ತಿಗೆ ನಿರ್ದೇಶನ ನೀಡಲಾಗಿದೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಾಲಕ್ಕಿಗೌಡ, ಅಪರ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

English summary
All set for Vairamudi brahmotsavam at Melkote Cheluvanarayana swamy temple, Mandya. Vairamudi utsava will be held on April 2, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X