ಹೇಮಾವತಿ ನದಿಯಲ್ಲಿ ಜಲ ಸಾಹಸ ಕ್ರೀಡೆ: ಸರ್ಕಾರದಿಂದ ರಿಯಾಯಿತಿ ದರ
ಹೇಮಗಿರಿಯ ಶ್ರೀಕಲ್ಯಾಣ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಹೇಮಾವತಿ ನದಿಯಲ್ಲಿ ಜಲ ಸಾಹಸ ಕ್ರೀಡೆ ಆಯೋಜಿಸಲಾಗಿದ್ದು, ಜಲಸಾಹಸಿಗರಿಗೆ ಸರ್ಕಾರದಿಂದ ರಿಯಾಯಿತಿ ದರ ನೀಡಲಾಗಿದೆ.
ಮಂಡ್ಯ, ಫೆಬ್ರವರಿ 2: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೇಮಗಿರಿಯ ಬೆಟ್ಟದ ತಪ್ಪಲಿನ ಹೇಮಾವತಿ ನದಿಯಲ್ಲಿ ಜಲಕ್ರೀಡೆಗಳನ್ನು ಆರಂಭಿಸುವ ಮೂಲಕ ಜಲಸಾಹಸ ಮಾಡಬೇಕೆಂದುಕೊಂಡಿದ್ದ ಜಲಸಾಹಸಿಗರಿಗೆ ಅವಕಾಶ ಮಾಡಿಕೊಟ್ಟಂತಾಗಿದೆ.
ಸಾಮಾನ್ಯವಾಗಿ ಹೇಮಗಿರಿ ಜಾತ್ರೆ ಸಮಯದಲ್ಲಿ ಸಾಂಪ್ರದಾಯಿಕ ದೇವರ ಕೈಂಕರ್ಯಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಇದೇ ಸಮಯದಲ್ಲಿ ಜಾತ್ರೆಗೆ ಆಗಮಿಸುವ ಯುವ ಜನತೆ ನದಿ ನೀರಲ್ಲಿ ದೋಣಿ ವಿಹಾರದೊಂದಿಗೆ ವಿವಿಧ ಜಲಕ್ರೀಡೆಗಳನ್ನು ಆಡಿ ಖುಷಿಪಡಲು ಈ ಬಾರಿ ಜಲಕ್ರೀಡೆಗಳನ್ನು ಆಯೋಜಿಸಲಾಗಿದ್ದು ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ.
ಹೇಮಗಿರಿಯ ಶ್ರೀಕಲ್ಯಾಣ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ತೆಪ್ಪೋತ್ಸವ ಕಾರ್ಯಕ್ರಮ ನಡೆಯುತ್ತಿರುವ ಸಮಯದಲ್ಲಿಯೇ ಹೇಮಾವತಿ ನದಿಯಲ್ಲಿ ಜನರಲ್ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆರಂಭಿಸಿರುವುದು ಜಾತ್ರೆಗೆ ಮೆರಗು ತಂದಿದೆ.

ಮುಂಜಾಗೃತ ಕ್ರಮಗಳೊಂದಿಗೆ ಜಲಸಾಹಸ ಕ್ರೀಡೆ
ಈಗಾಗಲೇ ಹೇಮಗಿರಿಬೆಟ್ಟ ತಪ್ಪಲಿನ ಹೇಮಾವತಿನದಿ ಹರಿಯುವ ಸ್ಥಳವು ನಿಸರ್ಗರಮಣೀಯವಾಗಿದ್ದು, ಈ ಸುಂದರ ತಾಣವನ್ನು ನೋಡಲೆಂದು ಪ್ರವಾಸಿಗರು ಬರುತ್ತಿದ್ದರು. ಇದೀಗ ಜಾತ್ರೆಯೂ ನಡೆಯುತ್ತಿರುವುದರಿಂದ ಭಕ್ತರು ಮತ್ತು ಪ್ರವಾಸಿಗರು ಆಗಮಿಸಲಿದ್ದು, ಎಲ್ಲರ ಗಮನಸೆಳೆಯುತ್ತಿದೆ. ಈಗಾಗಲೇ ಜಲಸಾಹಸ ಕ್ರೀಡೆಗಳಿಗೆ ಕೆ.ಆರ್.ಪೇಟೆ ತಹಶೀಲ್ದಾರ್ ಎಂ.ವಿ.ರೂಪ ಅವರು ಚಾಲನೆ ನೀಡಿದ್ದು, ಅಗತ್ಯವಾಗಿ ಬೇಕಾದ ಮುಂಜಾಗರೂಕತೆಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಆಯೋಜಿಸಿರುವ ಜಲ ಸಾಹಸ ಕ್ರೀಡೆಗಳು ಯುವಜನರು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದ್ದಾರೆ.

ಎರಡು ದಿನಗಳ ಕಾಲ ಹೇಮಗಿರಿಯ ತಪ್ಪಲಿನಲ್ಲಿ ಜಲ ಸಾಹಸ ಕ್ರೀಡೆ
ಕೆ.ಆರ್.ಪೇಟೆ ಪಟ್ಟಣದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಬಂಡಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೇಮಗಿರಿಯ ಬೆಟ್ಟದ ತಪ್ಪಲಿನಲ್ಲಿ ಹರಿಯುತ್ತಿರುವ ಹೇಮಾವತಿ ನದಿಯಲ್ಲಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯದ ಯುವಸಬಲೀಕರಣ ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಅವರ ವಿಶೇಷ ಆಸಕ್ತಿಯ ಮೇರೆಗೆ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಎರಡು ದಿನಗಳ ಕಾಲ ಹೇಮಗಿರಿಯ ತಪ್ಪಲಿನ ಹೇಮಾವತಿ ನದಿಯಲ್ಲಿ ನಡೆಯುತ್ತಿರುವ ಜಲ ಸಾಹಸ ಕ್ರೀಡೆಗಳಲ್ಲಿ ಯುವಜನರು ಭಾಗವಹಿಸುತ್ತಿದ್ದು ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅದ್ಭುತವಾದ ರೋಮಾಂಚನಕಾರಿ ಅನುಭವವನ್ನು ಪಡೆದುಕೊಳ್ಳುತ್ತಿದ್ದಾರೆ.

ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ
ಬಣ್ಣ ಬಣ್ಣದ ವಿದ್ಯುತ್ ದೀಪಗಳು, ಬಾಣಬಿರುಸುಗಳು, ಹೂಕುಂದಗಳ ಸಿಡಿತದ ನಡುವೆ ಬಂಡಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಹೇಮಗಿರಿಯ ಆರಾಧ್ಯದೈವ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಯವರ ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳುವ ಜೊತೆಗೆ ಭಗವಂತ ಶ್ರೀರಂಗನಾಥನ ಕೃಪೆಗೆ ಪಾತ್ರರಾಗುತ್ತಿರುವುದು ವಿಶೇಷವಾಗಿದೆ.

ಸರ್ಕಾರದಿಂದ ರಿಯಾಯಿತಿ ದರ
ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಜನರಲ್ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಹಸ ಅಕಾಡೆಮಿಯ ವತಿಯಿಂದ ನಡೆಯುತ್ತಿರುವ ಜಲ ಸಾಹಸ ಕ್ರೀಡೆಗಳಿಗೆ ಸರ್ಕಾರವು ರಿಯಾಯಿತಿ ದರವನ್ನು ಪ್ರಕಟಿಸಿದ್ದು ರಾಫ್ಟಿಂಗ್ ಗೆ 50ರೂ, ಜೆಟ್ ಸ್ಕೀ'ಗೆ 250ರೂ, ಸ್ಪೀಡ್ ಬೋಟ್'ಗೆ 150ರೂ ಹಾಗೂ ಕಯಾಕಿಂಗ್ ದೋಣಿ ವಿಹಾರಕ್ಕೆ 100ರೂ ನಂತೆ ದರ ನಿಗದಿ ಮಾಡಿದೆ.
ಕೆ.ಆರ್.ಪೇಟೆ ತಾಲೂಕು ನಿಸರ್ಗ ಸುಂದರ ತಾಣಗಳನ್ನು ಹೊಂದಿದ್ದು, ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ ನದಿ ಸಂಗಮ ಕ್ಷೇತ್ರವೂ ನಿಸರ್ಗರಮಣೀಯ ತಾಣವಾಗಿದೆ. ಈ ಸ್ಥಳಗಳಿಗೆ ಆಗಾಗ ಪ್ರವಾಸಿಗರು ಬರುತ್ತಿರುತ್ತಾರೆ. ಇದೀಗ ಹೇಮಗಿರಿಯ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಜಾತ್ರೆ ನಡೆಯುತ್ತಿರುವುದರಿಂದ ಭಕ್ತರು ಮತ್ತು ಪ್ರವಾಸಿಗರು ಖುಷಿಯಿಂದ ಹೆಜ್ಜೆಹಾಕುತ್ತಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications