ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್‌ಎಸ್‌ನಿಂದ 50 ಸಾವಿರ ಕ್ಯುಸೆಕ್ ನೀರು ಹೊರಕ್ಕೆ, ಪ್ರವಾಹ ಭೀತಿ

By Gururaj
|
Google Oneindia Kannada News

ಮಂಡ್ಯ, ಜುಲೈ 15 : ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಾರಂಗಿ, ಹೇಮಾವತಿ ಜಲಾಶಯಗಳಿಂದ ಕೆಆರ್‌ಎಸ್ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಲಾಶಯದಿಂದ ನೀರನ್ನು ಹೊರಬಿಡುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಮೈದುಂಬಿದ ಕಾವೇರಿಗೆ ಜುಲೈ 20ರಂದು ಎಚ್ಡಿಕೆ ದಂಪತಿ ಬಾಗಿನಮೈದುಂಬಿದ ಕಾವೇರಿಗೆ ಜುಲೈ 20ರಂದು ಎಚ್ಡಿಕೆ ದಂಪತಿ ಬಾಗಿನ

ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಮುಂಜಾಗೃತವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಕೃಷ್ಣರಾಜಸಾಗರ ಅಣೆಕಟ್ಟೆಯಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡುತ್ತಿರುವುದರಿಂದ ಪ್ರವಾಹದ ಮುನ್ನೆಚ್ಚರಿಕೆಯನ್ನು ನದಿಪಾತ್ರದ ಗ್ರಾಮಗಳ ಜನರಿಗೆ ತಿಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.

20 ವರ್ಷಗಳ ನಂತರ ಜೂನ್‌ನಲ್ಲಿ 100ರ ಗಡಿ ದಾಟಿದ ಕೆಆರ್‌ಎಸ್‌20 ವರ್ಷಗಳ ನಂತರ ಜೂನ್‌ನಲ್ಲಿ 100ರ ಗಡಿ ದಾಟಿದ ಕೆಆರ್‌ಎಸ್‌

ಜುಲೈ 20 ರಂದು ಮುಖ್ಯಮಂತ್ರಿಗಳು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು....

50 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

50 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

ಕೆಆರ್‌ಎಸ್‌ನಿಂದ 50 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಕಾವೇರಿ ನದಿಯ ಎರಡೂ ದಂಡೆಗಳಲ್ಲಿನ ಸಾರ್ವಜನಿಕರು ತಮ್ಮ ಆಸ್ತಿ ಹಾಗೂ ಜಾನುವಾರುಗಳ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಹೊರಹರಿವು ಹೆಚ್ಚಾಗಿರುವುದರಿಂದ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗಾಗಿ ಪ್ರತಿಯೊಂದು ತಾಲೂಕಿನಲ್ಲೂ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ಪೊಲೀಸ್ ಅಧಿಕಾರಿ ಹಾಗೂ ಇಂಜಿನಿಯರ್ ಸೇರಿದಂತೆ ಸಮಿತಿಯನ್ನು ರಚಿಸಲಾಗಿದೆ ಎಂದರು.

4 ತಂಡಗಳ ರಚನೆ

4 ತಂಡಗಳ ರಚನೆ

ನದಿ ಪಾತ್ರದ ಪ್ರತಿಯೊಂದು ಗ್ರಾಮದಲ್ಲಿ ಟಾಂ ಟಾಂ ಹೊಡೆಸುವುದರ ಮೂಲಕ ಪ್ರಚಾರ ಮಾಡಬೇಕು ಹಾಗೂ ಪ್ರತಿಯೊಂದು ತಾಲೂಕಿನಲ್ಲಿ 4 ತಂಡಗಳು ನದಿ ಪಾತ್ರದಲ್ಲಿ ಇದ್ದು, ಎಚ್ಚರಿಕೆ ನೀಡುವ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಶ್ರೀರಂಗಟಪಟ್ಟಣ ಹಾಗೂ ಪಾಂಡವಪುರ ತಾಲೂಕಿನ ಗ್ರಾಮಗಳ ಜಮೀನಿಗೆ ನೀರು ಬರುವುದರಂದ ಅಲ್ಲಿನ ಗ್ರಾಮಗಳ ಜನರು ಹೊರಹರಿವು ಜಾಸ್ತಿಯಿರುವುದರಿಂದ ತಮ್ಮ ಜಾನುವಾರುಗಳನ್ನು ಮೇಯಿಸುವುದು ಹಾಗೂ ಕೃಷಿ ಚಟುವಟಿಕೆಗಳನ್ನು ಮಾಡುವುದನ್ನು ನಿಲ್ಲಿಸಬೇಕು. ಈಜುವುದು, ಬಟ್ಟೆ ಒಗೆಯುವುದು ಹಾಗೂ ಬೋಟಿಂಗ್ ಹೋಗುವ ಚಟುವಟಿಕೆಗಳನ್ನು ಮಾಡದಂತೆ ನಿಷೇಧಿಸಬೇಕು ಎಂದರು.

ಸೂಚನಾ ಫಲಕ ಅಳವಡಿಕೆ

ಸೂಚನಾ ಫಲಕ ಅಳವಡಿಕೆ

ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಮಾಹಿತಿಗಾಗಿ 4 ಭಾಷೆಗಳನ್ನು ಒಳಗೊಂಡ ಸೂಚನಾ ಫಲಕವನ್ನು ಅಳವಡಿಸಬೇಕು. ಮುನ್ನೆಚ್ಚರಿಕೆಯ ಕ್ರಮವಾಗಿ ನದಿಪಾತ್ರದ ಸ್ಥಳಗಳಲ್ಲಿ ತಂಡವು ಬೋಟಿಂಗ್ ವ್ಯವಸ್ಥೆ, ಲೈಫ್ ಜಾಕೇಟ್, ಹೆಲ್ಮೇಟ್, ಹೆವಿ ಲೈಟ್ ಟಾರ್ಚ್ ಹಾಗೂ ಈಜು ಬರುವವರನ್ನು ಹೊಂದಿರಬೇಕು ಹಾಗೂ ಪ್ರವಾಸಿ ಸ್ಥಳಗಳಲ್ಲಿ ಗಾರ್ಡ್‍ಗಳ ಇದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುವ ಕೆಲಸವನ್ನು ಮಾಡಬೇಕು ಎದು ಸೂಚಿಸಿದರು.

ಜುಲೈ 20 ರಂದು ಮುಖ್ಯಮಂತ್ರಿಗಳು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.

ದಶಕದ ನಂತರ ಜುಲೈನಲ್ಲಿ ಭರ್ತಿ

ದಶಕದ ನಂತರ ಜುಲೈನಲ್ಲಿ ಭರ್ತಿ

ಕೃಷ್ಣರಾಜಸಾಗರ ಜಲಾಶಯ ದಶಕಗಳ ಬಳಿಕ ಜುಲೈನಲ್ಲಿ ಭರ್ತಿಯಾಗಿದೆ. ವಾಡಿಕೆಯಂತೆ ಆಗಸ್ಟ್‌ನಲ್ಲಿ ಜಲಾಶಯ ಭರ್ತಿ ಆಗುತ್ತಿತ್ತು. ಆದರೆ, ಈ ಬಾರಿ ಜುಲೈನಲ್ಲಿ ಕೊಡಗು ಭಾಗದಲ್ಲಿ ಭಾರೀ ಮಳೆ ಆಗಿದ್ದರಿಂದ ಜುಲೈನಲ್ಲಿನೇ ಜಲಾಶಯ ಭರ್ತಿಯಾಗಿದೆ.

2014ರ ಬಳಿಕ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. ಅಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಜಲಾಶಯ ಭರ್ತಿಯಾಗಿತ್ತು. ಅವರು ಬಾಗಿನ ಅರ್ಪಿಸಿದ್ದರು.

English summary
50,000 cusecs of water from Krishnaraja Sagar (KRS) reservoir released. After water level in the dam reaches 123 feet. N. Manjushri Deputy Commissioner of Mandya chaired meeting of officials and directed them to alert people about flood.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X