ವೀಕೆಂಡ್ ಗೆ ಶಿವನಸಮುದ್ರದ ಗಗನಚುಕ್ಕಿ ಜಲಪಾತೋತ್ಸವದಲ್ಲಿ ಸಾಹಸ ಕ್ರೀಡೆ
ಮಂಡ್ಯ, ಅಕ್ಟೋಬರ್ 26: ಶಿವನಸಮುದ್ರದ ಗಗನಚುಕ್ಕಿಯಲ್ಲಿ ಜಲಪಾತೋತ್ಸವವನ್ನು ನ.9 ಮತ್ತು 10ರಂದು ಆಚರಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಅವರು ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ನಡೆಸಿದ್ದು, ಅಗತ್ಯ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಾರಿ ಕಾವೇರಿ ನದಿ ತುಂಬಿ ಹರಿಯುತ್ತಿದ್ದು ಗಗನಚುಕ್ಕಿ ಜಲಪಾತವು ಭೋರ್ಗರೆಯುತ್ತಾ ಕಣ್ಮನ ಸೆಳೆಯುತ್ತಿದೆ. ಹೀಗಾಗಿ ರಾಜ್ಯದ ಹಾಗೂ ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದ್ದು, ರಾಜ್ಯ ಹಾಗೂ ದೇಶಕ್ಕೆ ಪರಿಚಯ ಮಾಡಿಕೊಡುವ ಸಲುವಾಗಿ ಗಗನಚುಕ್ಕಿ ಜಲಪಾತೋತ್ಸವ ಹಮ್ಮಿಕೊಳ್ಳಲಾಗಿದೆ.
ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಹಾಕಿಕೊಳ್ಳಲಾಗಿದೆ. ಜನರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್, ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ವೀಕ್ಷಿಸಲು ಹೆಚ್ಚು ಜನ ಬರಬೇಕು. ಇದಕ್ಕಾಗಿ ಹೆಚ್ಚು ಪ್ರಚಾರ ಮಾಡಿ ಈ ನೈಸರ್ಗಿಕ ಸ್ಥಳವನ್ನು ದೇಶಕ್ಕೆ ಪರಿಚಯಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಕೇಳಿಕೊಂಡರು.

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಮಿತಿ ರಚಿಸಲಾಗುತ್ತಿದ್ದು, ಜಲಪಾತ ಹಾಗೂ ವೇದಿಕೆಗೆ ವಿದ್ಯುತ್ ಅಲಂಕಾರ ಮಾಡುವಂತೆ ಹಾಗೂ ವಿದ್ಯುತ್ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರಲ್ಲದೆ, ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗುತ್ತಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications