ನಾವ್ ಕರೆಂಟ್ ಬಿಲ್ ಕಟ್ಟಲ್ಲ, ಸರ್ಕಾರದ ಆದೇಶ ಪಾಲಿಸಿ: ಮಂಡ್ಯದಲ್ಲಿ ಮನೆಗಳ ಮೇಲೆ ನಾಮಫಲಕ
ಮಂಡ್ಯ, ಮೇ, 22: ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ, ಯಾರೂ ಕರೆಂಟ್ ಬಿಲ್ ಕಟ್ಟಬೇಕಾಗಿಲ್ಲ ಎಂದು ಹೇಳಿ ಮತ ಪಡೆದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು. ನಾವು ಬಿಲ್ ಕಟ್ಟುವುದಿಲ್ಲ. ಅಧಿಕಾರಿಗಳೇ ಸರ್ಕಾರದ ಆದೇಶವನ್ನು ಪಾಲಿಸಿ ಎಂದು ನಗರದ ಹೊಸಹಳ್ಳಿ ಬಡಾವಣೆಯಲ್ಲಿ ಜನತೆ ಮೀಟರ್ ಬಳಿ ಬರೆದು ಗೋಡೆಗೆ ಅಂಟಿಸಿರುವ ಪ್ರಸಂಗ ನಡೆದಿದೆ.
ಕಾಂಗ್ರೆಸ್ ಪಕ್ಷ 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ 2 ಸಾವಿರ ರೂಪಾಯಿ, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೋಮಾ ಮಾಡಿರುವವರಿಗೆ 1,500 ಹಾಗೂ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ವಾಗ್ದಾನ ಮಾಡಿತ್ತು.

ಹೀಗೆ ವಾಗ್ದಾನ ನೀಡಿಯೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನಾವು ಯಾರೂ 200 ಯೂನಿಟ್‌ವರೆಗೆ ವಿದ್ಯುತ್ ಬಿಲ್ ಕಟ್ಟುವುದಿಲ್ಲ. ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳೇ ಸರ್ಕಾರದ ಆದೇಶ ಆಗಿದೆ. 200 ಯೂನಿಟ್‌ವರೆಗೆ ನಮಗೆ ಯಾವುದೇ ಬಿಲ್ಲನ್ನು ನೀಡುವಂತಿಲ್ಲ. ದಯಮಾಡಿ ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತೇವೆ. ನೀವೂ ಕೂಡ ಪಾಲಿಸಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕೇಳಿ ಎಂದು ಬರೆದು ಗೋಡೆಗೆ ಅಂಟಿಸಿದ್ದಾರೆ.
ಈಗಾಗಲೇ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದು, ಆದರೆ ಷರತ್ತುಗಳು ಅನ್ವಯವಾಗಲಿವೆ ಎಂದು ಸಂಬಂಧಿಸಿದ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಾರ್ಗಸೂಚಿ ಮಾತ್ರ ಬಿಡುಗಡೆಯಾಗಬೇಕಿದೆ. ನಂತರವಷ್ಟೇ ಇದು ಯಾವ ರೀತಿಯಲ್ಲಿ ಜಾರಿಗೊಳ್ಳುತ್ತದೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ. ಅದಕ್ಕೂ ಮುನ್ನ ಜನತೆ ಕರೆಂಟ್ ಬಿಲ್ ಕಟ್ಟಲ್ಲ ಎಂದು ಹೇಳುತ್ತಿರುವುದರಿಂದ ವಿದ್ಯುತ್ ಇಲಾಖೆಯವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಕರೆಂಟ್ ಬಿಲ್ ಕಟ್ಟಲ್ಲ
ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿತ್ತು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇದೀಗ ಅಧಿಕಾರಕ್ಕೆ ಬಂದಿದೆ. ಇತ್ತ ಬೆಸ್ಕಾಂ ಅಧಿಕಾರಿಗಳು ಕರೆಂಟ್ ಬಿಲ್ ಕಟ್ಟಿ ಎಂದು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಕರೆಂಟ್ ಬಿಲ್ ಕಟ್ಟಲ್ಲ ಎಂದು ಸಿಬ್ಬಂದಿಗಳಿಗೆ ಅವಾಜ್ ಹಾಕಿದ ಘಟನೆ ಕೋಟೆ ನಾಡು ಚಿತ್ರದುರ್ಗದಲ್ಲಿಇತ್ತೀಚೆಗಷ್ಟೇ ನಡೆದಿತ್ತು.
ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜಾಲಿಕಟ್ಟೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಪ್ರತಿ ತಿಂಗಳು ಬರುವಂತೆ ಬೆಸ್ಕಾಂನ ಮೀಟರ್ ರೀಡರ್‌ಗಳು ಈ ಗ್ರಾಮಕ್ಕೆ ಬಂದಿದ್ದರು. ಆಗ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿದ್ದರು. ಇನ್ನು ಸರ್ಕಾರದ ಆದೇಶ ಬರುವವರೆಗೂ ಬಿಲ್ ಕಟ್ಟಿ ಎಂದು ಬೆಸ್ಕಾಂ ಸಿಬ್ಬಂದಿ ಹೇಳಿದ್ದರು.
ಆದರೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮಸ್ಥರು ನೀವು ಕಾಂಗ್ರೆಸ್ ನಾಯಕರನ್ನೇ ಕೇಳಿ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಪಟ್ಟು ಹಿಡಿದಿದ್ದರು. ಅಧಿಕಾರಕ್ಕೆ ಬಂದ ತಕ್ಷಣ ಮೊದಲನೇ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಐದು ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ ಎಂದು ಜನ ಕಾಯುತ್ತಿದ್ದಾರೆ.












Click it and Unblock the Notifications