ಕಾಂಗ್ರೆಸ್‌ನಿಂದ ಸುಮಲತಾ ಸ್ಪರ್ಧಿಸಿದರೆ ಮಾತ್ರ ಬೆಂಬಲ: ಮಾದೇಗೌಡ
ಮಂಡ್ಯ, ಫೆಬ್ರವರಿ 28: ಕಾಂಗ್ರೆಸ್ ಪಕ್ಷದಿಂದ ಸುಮಲತಾ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದರೆ ನಮ್ಮ ಬೆಂಬಲ ಇದೆ ಎಂದು ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ.ಮಾದೇಗೌಡ ಅವರು ಹೇಳಿದ್ದಾರೆ.
ಸುಮಲತಾ ಅಂಬರೀಶ್ ಅವರು ಮಾದೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ಸುಮಲತಾ ಅವರು ಪಕ್ಷೇತರವಾಗಿ ಸ್ಪರ್ಧಿಸಿದರೆ ನಮ್ಮ ಬೆಂಬಲ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡವನು, ಕೊನೆಯ ವರೆಗೂ ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ ಹಾಗಾಗಿ ಕಾಂಗ್ರೆಸ್ ನಿಂದ ಸುಮಲತಾ ಸ್ಪರ್ಧಿಸಿದರೆ ನನ್ನ ಬೆಂಬಲ ಇದೆ ಎಂದರು.

ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂದು ಒತ್ತಾಯಿಸಿದ ಮಾದೇಗೌಡ ಅವರು, ಶಿವಪುರದಲ್ಲಿ ಧ್ವಜಸತ್ಯಾಗ್ರಹ ಮಾಡಿದ ಪಕ್ಷ ಕಾಂಗ್ರೆಸ್ ಹಾಗಾಗಿಯಾದರೂ ಕಾಂಗ್ರೆಸ್‌ಗೆ ಮಂಡ್ಯ ಸೀಟು ನೀಡಬೇಕು, ಈ ಕುರಿತು ಪಕ್ಷಕ್ಕೆ ಪತ್ರ ಬರೆಯುವುದಾಗಿ ಅವರು ಹೇಳಿದರು.
ಅಂಬರೀಶ್‌ಗೆ ಮಂಡ್ಯದ ಗಂಡು ಬಿರುದು ಕೊಟ್ಟವನು ನಾನು, ಅವರ ಪತ್ನಿ ಸುಮಲತಾ ಅವರು ರಾಜಕೀಯ ಪ್ರವೇಶ ಮಾಡುತ್ತಿರುವುದು ನನಗೆ ಸಂತಸ ತಂದಿದೆ, ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗಬೇಕೆಂಬುದು ನನ್ನ ಹಾರೈಕೆ ಎಂದು ಅವರು ಹೇಳಿದರು.
ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಗೋಡೆಯ ಮೇಲಿನ ದೀಪದಂತಾಗಿದೆ. ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿಯೂ ಅವರು ಈಗಾಗಲೇ ಹೇಳಿದ್ದಾರೆ.











Click it and Unblock the Notifications