ಸಕ್ಕರೆನಾಡು ಮಂಡ್ಯದಲ್ಲಿ ನಡೆಯುತ್ತಿರುವ ಅಕ್ಷರ ಜಾತ್ರೆಗೆ ನಾಳೆ ತೆರೆ: ಅತಿಥಿಗಳ ವಿವರ ಇಲ್ಲಿದೆ
ಮಂಡ್ಯ, ಡಿಸೆಂಬರ್ 21: ಸಕ್ಕರೆನಾಡು ಮಂಡ್ಯದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ತೆರೆಬೀಳಲಿದೆ. ಸಂಜೆ 4:30 ರಿಂದ 7:30 ಗಂಟೆಯವರೆಗೆ ಸಾಹಿತ್ಯ ಸಮ್ಮೇಳನದ ಸಮರೂಪ ಸಮಾರಂಭ ನಡೆಯಲಿದ್ದು. ಹಲವು ಗಣ್ಯರು ಈ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಸ್ಥಿತಿ ವಹಿಸಲಿದ್ದು, ನವದೆಹಲಿಯ ಭಾರತ ಲೋಕಪಾಲ್‌ನ ನ್ಯಾಯಂಗ ಸದಸ್ಯ ನ್ಯಾಯಮೂರ್ತಿ ಎಲ್ ನಾರಾಯಣಸ್ವಾಮಿ, ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್ ಚಲುವರಾಯಸ್ವಾಮಿ ಅವರುಗಳು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಸಮಾರೋಪ ಭಾಷಣಕಾರರಾಗಿ ಹಿರಿಯ ಸಾಹಿತಿ ಡಾ ಸಿ ಪಿ ಕೃಷ್ಣಕುಮಾರ್ ಹಾಗೂ ಸಮ್ಮೇಳನಾಧ್ಯಕ್ಷರು ನಾಡೋಜ ಡಾ. ಗೊ. ರು. ಚನ್ನಬಸಪ್ಪ ಅವರು ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ ಮಹೇಶ ಜೋಶಿ ಅವರು ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷ ಡಾ. ಹೆಚ್. ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷ ಶಿವರಾಜ ತಂಗಡಗಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ,
ವಿಧಾನ ಪರಿಷತ್ತಿನ ಉಪಸಭಾಪತಿ ಎಂ ಕೆ ಪ್ರಾಣೇಶ್, ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ಎ.ಬಿ. ರಮೇಶ ಬಂಡಿಸಿದ್ದೇಗೌಡ ಅವರುಗಳು ಆಗಮಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ನ ಶಾಸಕರುಗಳಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಕೆ ವಿವೇಕಾನಂದ, ವಿಧಾನಸಭಾ ಶಾಸಕರುಗಳಾದ ಪಿ ಎಂ ನರೇಂದ್ರಸ್ವಾಮಿ, ಪಿ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್ ಟಿ ಮಂಜು, ಕೆ ಎಂ ಉದಯ, ಮಂಡ್ಯ ನಗರಸಭೆ ಅಧ್ಯಕ್ಷ ಎಂವಿ ಪ್ರಕಾಶ್, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿಡಿ ಗಂಗಾಧರ, ಮಂಡ್ಯ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್,
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಅಧ್ಯಕ್ಷ ಕೆ ಸಿ ಜೋಗಿಗೌಡ, ಗೆಜ್ಜಲಗೆರೆಯ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಅಧ್ಯಕ್ಷ ಬಿ ಬೋರೇಗೌಡ, ಬೂದನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಮಾನಸ, ಬೇಲೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಸುವರ್ಣವತಿ, ಉಮ್ಮಡಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಶ್ರೀಕಾಂತ್, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ಅವರು ಆಗಮಿಸಲಿದ್ದಾರೆ.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಡಾ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ ಎಲ್ ಕೆ ಅತೀಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ ಮಂಜುಳಾ ಎನ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬು ಕುಮಾರ್, ಮೈಸೂರು ವಲಯದ ಐ.ಜಿ.ಪಿ ಡಾ ಎಂ ಬಿ ಬೋರಲಿಂಗಯ್ಯ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ರಮೇಶ್ ಡಿ ಎಸ್, ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ನಿರ್ದೇಶಕಿ ಡಾ ಕೆ ಧರಣೀದೇವಿ ಅವರುಗಳು ಆಗಮಿಸಲಿದ್ದಾರೆ. ಸಂಜೆ 7.30ರ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications