ಕೆ.ಆರ್.ಪೇಟೆಯಲ್ಲಿ ಕುತೂಹಲ ಹೆಚ್ಚಿಸಿದ ಸಚಿವ ನಾರಾಯಣಗೌಡರ ನಿಗೂಢ ನಡೆ
ಸಚಿವ ನಾರಾಯಣಗೌಡರು ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು. ಇದೀಗ ಚುನಾವಣೆ ಹೊತ್ತಿಗೆ ಅವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿದೆ.
ಮಂಡ್ಯ, ಫೆಬ್ರವರಿ 20: ಜೆಡಿಎಸ್‌ನ ಭದ್ರಕೋಟೆಯನ್ನು ಛಿದ್ರ ಮಾಡಿ ಮೊದಲ ಬಾರಿಗೆ ಕಮಲ ಅರಳುವಂತೆ ಮಾಡಿದ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ರಾಜಕೀಯ ಪರಿಸ್ಥಿತಿ ಹೇಗಿದೆ ಎಂಬ ಕುತೂಹಲ ಎಲ್ಲರನ್ನು ಕಾಡುತ್ತಿದೆ. ಆದರೆ ಅಭ್ಯರ್ಥಿ ವಿಚಾರದಲ್ಲಿ ಮೂರು ಪಕ್ಷಗಳಲ್ಲೂ ಗೊಂದಲ ಮುಂದುವರೆದಿದ್ದು, ಚುನಾವಣೆ ವೇಳೆಗೆ ರಾಜಕೀಯವಾಗಿ ಹತ್ತು ಹಲವು ಬೆಳವಣಿಗೆಗಳು ನಡೆಯುವ ಸಾಧ್ಯತೆ ಕಂಡು ಬಂದಿದೆ.
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಈಗಾಗಲೇ ಜೆಡಿಎಸ್‌ನಿಂದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಟಿ.ಮಂಜು ಅವರನ್ನು ಘೋಷಣೆ ಮಾಡಲಾಗಿದೆ. ಆದರೆ ಅವರ ವಿರುದ್ಧ ಪಕ್ಷದಲ್ಲಿ ಭಿನ್ನಾಭಿಪ್ರಾಯವಿದೆ. ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಇದುವರೆಗೆ ಅಧಿಕೃತ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಿಲ್ಲ. ಸಚಿವ ನಾರಾಯಣಗೌಡರು ಕಳೆದ ಚುನಾವಣೆ(2018)ಯಲ್ಲಿ ಜೆಡಿಎಸ್ ನಿಂದ ಗೆಲುವು ಸಾಧಿಸಿ, ಬಳಿಕ ರಾಜೀನಾಮೆ ನೀಡಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು.
ಸದ್ಯ ಅವರೇ ಮುಂದಿನ ಬಿಜೆಪಿಯ ಅಭ್ಯರ್ಥಿ ಎಂದು ಹೇಳಲಾಗುತ್ತಿದ್ದರೂ ಡಾ.ನಾರಾಯಣಗೌಡರ ಸುತ್ತ ಅನುಮಾನದ ಹುತ್ತವೇ ಬೆಳೆಯುತ್ತಿದೆ. ಕಾರಣ ಅವರು ಚುನಾವಣೆ ಹೊತ್ತಿಗೆ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿದೆ. ಇದು ಎಷ್ಟರ ಮಟ್ಟಿಗೆ ನಿಜವೋ ಗೊತ್ತಿಲ್ಲ. ಆದರೆ ಆ ರೀತಿಯ ಅನುಮಾನಗಳು ಎಲ್ಲಿಂದ ಹುಟ್ಟಿಕೊಂಡಿವೆ ಎಂಬುದೇ ತಿಳಿಯದಾಗಿದೆ.

ಕ್ಷೇತ್ರ ಅಭಿವೃದ್ಧಿಗೆ ಜಾಸ್ತಿ ಅನುದಾನ ನೀಡಿದ್ದ ಸರ್ಕಾರ
ಈ ವದಂತಿಗಳಿಗೆ ತೆರೆ ಎಳೆಯುವ ಕೆಲಸವನ್ನು ಸದ್ಯಕ್ಕೆ ಬಿಜೆಪಿ ಪಕ್ಷದ ನಾಯಕರು ಮಾಡಿದಂತೆ ಕಾಣುತ್ತಿಲ್ಲ. ಇತ್ತೀಚಿಗಿನ ಬೆಳವಣಿಗೆಯನ್ನು ಗಮನಿಸಿದರೆ ಮೊದಲಿನ ಪಕ್ಷ ಸಂಘಟನೆಯ ಹುಮ್ಮಸ್ಸು ನಾರಾಯಣ ಗೌಡ ಅವರಲ್ಲಿ ಕಾಣುತ್ತಿಲ್ಲ. ಬಿಜೆಪಿ ಸೇರ್ಪಡೆಗೊಂಡ ದಿನದಿಂದಲೇ ಕ್ಷೇತ್ರದಲ್ಲಿ ಬಿಜೆಪಿಯನ್ನು ಸಂಘಟಿಸುವಲ್ಲಿ ಅವರು ಮುಂಚೂಣಿಯಲ್ಲಿದ್ದರು. ಜೊತೆಗೆ ಸುಮಾರು 1800 ಕೋಟಿ ರೂಪಾಯಿ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಸಂಕಲ್ಪ ಮಾಡಿದ್ದರು.
ಈಗಾಗಲೇ ಸರ್ಕಾರ ಅವರ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ತುಸು ಜಾಸ್ತಿಯೇ ನೀಡಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕಾರಣ ಮಂಡ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಅದು ಕೆ.ಆರ್.ಪೇಟೆಯಿಂದ ಮತ್ತು ನಾರಾಯಣಗೌಡರ ಮೂಲಕವೇ ಎಂದರೆ ತಪ್ಪಾಗಲಾರದು. ಆದರೆ ನಾರಾಯಣ ಗೌಡರು ಪಕ್ಷದಲ್ಲಿ ಉಳಿಯುತ್ತಾರಾ ಎಂಬ ಪ್ರಶ್ನೆಗಳು ಉದ್ಭವಿಸಿರುವ ಹಿನ್ನಲೆಯಲ್ಲಿ ಅವರ ನಿಗೂಢ ನಡೆ ಕ್ಷೇತ್ರದ ಬಿಜೆಪಿ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಮೌನಕ್ಕೆ ಶರಣಾದ ಸಚಿವ ನಾರಾಯಣ ಗೌಡ
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯನ್ನು ಸೃಷ್ಟಿಸುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಮುಳುಗು ನೀರು ತಂದಿದೆ. ಅದರ ಪರಿಣಾಮಗಳು ಕ್ಷೇತ್ರದ ಮೇಲೆ ಬೀರಿದೆ. ಹೀಗಾಗಿ ಜಾಣ್ಮೆಯ ಹೆಜ್ಜೆಯಿಡಲು ನಾರಾಯಣಗೌಡರು ಚಿಂತನೆ ಮಾಡಿದ್ದಾರಾ..? ಎಂಬ ಪ್ರಶ್ನೆಗಳು ಮೂಡಿವೆ. ಇನ್ನೊಂದೆಡೆ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಹೆಚ್ಚಾಗಿ ಕೇಳಿಬರುತ್ತಿರುವುದು ಕಾಂಗ್ರೆಸ್ ವಲಯದಿಂದಲೇ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರವಾಗಿದೆ.
ಡಾ.ನಾರಾಯಣಗೌಡರಿಂದ ಮಂಡ್ಯ ಉಸ್ತುವಾರಿಯನ್ನು ಕಿತ್ತುಕೊಂಡ ಬಳಿಕ ಈಗ ಉಸ್ತುವಾರಿಯನ್ನು ವಹಿಸಿಕೊಳ್ಳಲು ಯಾರೂ ಮುಂದಾಗದಿರುವುದು, ಮತ್ತೊಂದೆಡೆ ಮಂಡ್ಯದಲ್ಲಿ ಕಮಲ ಅರಳಿಸುತ್ತೇವೆಂದು ಹೊರಟ ನಾಯಕರು ಈಗ ಕ್ಷೇತ್ರಕ್ಕೆ ಬರಲು ಹಿಂದೇಟು ಹಾಕುತ್ತಿರುವುದನ್ನು ನೋಡಿದರೆ ಅಚ್ಚರಿ ಮೂಡುತ್ತಿದೆ. ಈ ಹಿಂದೆ ಮಂಡ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎನ್ನುತ್ತಿದ್ದ ನಾರಾಯಣಗೌಡರು ಮೌನವಾಗಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. j

ಜೆಡಿಎಸ್ ಅಭ್ಯರ್ಥಿ ವಿರುದ್ಧ ಅಪಸ್ವರ
ನಾರಾಯಣಗೌಡರ ಮೌನಕ್ಕೆ ಆಡಳಿತ ವಿರೋಧಿ ಅಲೆ ಕಾರಣವಾಗಿದ್ದು, ಇದೆಲ್ಲದರ ನಡುವೆಯೂ ಅವರು ಈ ಬಾರಿ ಚುನಾವಣೆಗೆ ನಿಲ್ಲಬೇಕೋ ಬೇಡವೋ ಎಂಬ ಗೊಂದಲದಲ್ಲಿದ್ದಾರೆ ಎಂಬಂತಹ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ. ಒಟ್ಟಾರೆ ಅವರ ನಿಗೂಢ ನಡೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ.
ಇನ್ನು ಜೆಡಿಎಸ್‌ನಿಂದ ಅಧಿಕೃತ ಅಭ್ಯರ್ಥಿ ಎಂದು ಘೋಷಣೆಯಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಟಿ.ಮಂಜು ಅವರು ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ತಾಲೂಕಿನಾದ್ಯಂತ ಸಂಚರಿಸಿ ಬಿರುಸಿನ ಪ್ರಚಾರವನ್ನು ನಡೆಸಿ ಮತದಾರರ ಮನಸ್ಸನ್ನು ಗೆಲ್ಲುವ ಪ್ರಯತ್ನದಲ್ಲಿದ್ದಾರೆ. ಅವರಿಗೆ ಭಿನ್ನಮತದ ಬಿಸಿಯೂ ತಟ್ಟಿದೆ. ಜೊತೆಗೆ ಬಿಫಾರಂ ಅವರ ಕೈಗೆ ತಲುಪುವ ತನಕ ಏನನ್ನೂ ಹೇಳಲಾಗದ ಪರಿಸ್ಥಿತಿ ಕ್ಷೇತ್ರದ ಜೆಡಿಎಸ್‌ನಲ್ಲಿದೆ. y

ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಗರಿಗೆದರಿದ ರಾಜಕೀಯ ಬೆಳವಣಿಗೆ
ಇದೆಲ್ಲದರ ನಡುವೆ ಕಳೆದ ಮೂರು ಚುನಾವಣೆಯಲ್ಲಿಯೂ ಸೋಲಿನ ಕಹಿಯನ್ನು ಕಂಡಿರುವ ಕಾಂಗ್ರೆಸ್ ನಾಯಕ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅಭ್ಯರ್ಥಿಯಾಗಿ ಈ ಬಾರಿ ಗೆಲ್ಲಲೇಬೇಕೆಂದು ಸಂಕಲ್ಪ ಮಾಡಿ ಒಳಗೊಳಗೆ ಭಾರೀ ಸಿದ್ಧತೆ ಮಾಡಿಕೊಳ್ಳುತ್ತಿದ್ದರೂ, ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಜಾಸ್ತಿಯಿದೆ.
ಟಿಕೆಟ್‌ಗಾಗಿ ವಿಜಯ್ ರಾಮೇಗೌಡ, ಕಿಕ್ಕೇರಿ ಸುರೇಶ್, ಮಾಜಿ ಶಾಸಕ ಬಿ.ಪ್ರಕಾಶ್ ಪ್ರಯತ್ನ ಮಾಡುತ್ತಿದ್ದಾರೆ. ಇವರ ಪೈಕಿ ಭಾರತ್ ಜೋಡೋ ಯಾತ್ರೆಯ ರೂವಾರಿಯಾಗಿ ಮಂಡ್ಯ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಆಗಮಿಸಿದ ವೇಳೆ ಯಾತ್ರೆಯಲ್ಲಿ ಭಾಗವಹಿಸಿ ಗಮನ ಸೆಳೆದ ವಿಜಯ್ ರಾಮೇಗೌಡ ಅವರಿಗೆ ಕಾಂಗ್ರೆಸ್ ಟಕೆಟ್ ನೀಡಲೇಬೇಕೆಂಬ ಆಗ್ರಹಗಳಿವೆ.
ಪಕ್ಷದ ಅಭ್ಯರ್ಥಿಯ ಅಧಿಕೃತ ಘೋಷಣೆಯಾಗುವ ತನಕ ಕಾಂಗ್ರೆಸ್‌ನ ಸ್ಥಳೀಯ ನಾಯಕರಾಗಲೀ, ಕಾರ್ಯಕರ್ತರಾಗಲೀ ಅಖಾಡಕ್ಕೆ ಇಳಿದು ಪಕ್ಷ ಸಂಘಟನೆ ಮಾಡುವಂತೆ ಕಾಣುತ್ತಿಲ್ಲ. ಸದ್ಯಕ್ಕೆ ಎಲ್ಲರೂ ಕಾದುನೋಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ.
ಮೇಲ್ನೋಟಕ್ಕೆ ಬಿಜೆಪಿಯಿಂದ ನಾರಾಯಣಗೌಡ, ಜೆಡಿಎಸ್ ನಿಂದ ಹೆಚ್.ಟಿ.ಮಂಜು ಹಾಗೂ ಕಾಂಗ್ರೆಸ್‌ನಿಂದ ವಿಜಯ್ ರಾಮೇಗೌಡ ಅಭ್ಯರ್ಥಿಗಳು ಎಂದು ಈಗ ಹೇಳಲಾಗುತ್ತಿದೆಯಾದರೂ ಚುನಾವಣೆ ದಿನಾಂಕ ನಿಗದಿಯಾಗಿ ಮೂರು ಪಕ್ಷಗಳು ಅಧಿಕೃತ ಅಭ್ಯರ್ಥಿಗಳಿಗೆ ಬಿಫಾರಂ ನೀಡುವ ತನಕ ಯಾವುದನ್ನೂ ಹೇಳಲಾಗದು ಹೀಗಾಗಿ ಮುಂದಿನ ಬೆಳವಣಿಗೆ ತನಕ ಕಾಯುವುದು ಅನಿವಾರ್ಯವಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications