ಪಿಎಫ್‌ಐ ಬೆದರಿಕೆ:ಮೇಲುಕೋಟೆ ಶ್ರೀನಾರಾಯಣ ರಾಮಾನುಜೀಯರ್‌ಗೆ ವೈ ಮಾದರಿ ಭದ್ರತೆ

ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಎದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತ ಪಿಎಫ್‌ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ ಎನ್ನಲಾಗಿದೆ.

ಮಂಡ್ಯ, ಫೆಬ್ರವರಿ 8: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಎದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತ ಪಿಎಫ್‌ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ ಎನ್ನಲಾಗಿದೆ.

ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿಎಫ್‌ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಖ ಮಠದಲ್ಲಿ ವಾಸವಾಗಿದ್ದು, ಮೇಲುಕೋಟೆ ವೈರಮುಡಿ, ಶ್ರೀರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳನ್ನು ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.

Y Model Security For Melukote Shree Narayana Ramanujar

ಕಾಶ್ಮೀರದಲ್ಲಿ ಶ್ರೀಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.

ಈ ಮಾತಿನಿಂದ ಕೆರಳಿದ ಪಿ.ಎಫ್.ಐ. ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿತ್ತು ಎಂದು ಹೇಳಲಾಗಿದೆ. ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.

ಶ್ರೀಗಳಿಗೆ ಈ ಹಿಂದೆಯೂ ಭದ್ರತೆ ನೀಡಿದ್ದು,ಇತ್ತೀಚೆಗೆ ಅದನ್ನು ವಾಪಸ್ಸು ಪಡೆಯಲಾಗಿತ್ತು. ಪಿಎಫ್‌ಐ ಸಂಘಟನೆಯ ಬೆದರಿಕೆಯ ಹಿನ್ನೆಲೆಯಲ್ಲಿ ಮತ್ತೆ ಅವರಿಗೆ ವೈ ಮಾದರಿ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ. ಸದ್ಯ ಶ್ರೀಗಳು ತಮಿಳುನಾಡಿನಲ್ಲಿರುವ ಶಾಖಾ ಮಠಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ತಮಗೆ ಮಾಹಿತಿ ಇಲ್ಲ, ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯ ಗುಪ್ತಚರ ಇಲಾಖೆಗೆ ಸೂಚನೆ ಬರಲಿದ್ದು, ನಂತರ ನಮಗೆ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+