ಸೆಲ್ಫಿ ಹುಚ್ಚು : ಹೇಮಾವತಿ ನದಿಯಲ್ಲಿ ಕೊಚ್ಚಿ ಹೋದ ಯುವಕ
ಮಂಡ್ಯ, ಜುಲೈ 17 : ಗೊರೂರು ಹೇಮಾವತಿ ಜಲಾಶಯದಿಂದ ಸುಮಾರು 30ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಉಕ್ಕಿ ಹರಿಯುತ್ತಿರುವ ನದಿ ದಂಡೆಯಲ್ಲಿ ಸೆಲ್ಫಿ ತೆಗೆಯಲು ಹೋದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ.
ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದ ಗಣೇಶ್ ಎಂಬುವವರ ಪುತ್ರ ಶಿವಕುಮಾರ್ (28) ಆಯತಪ್ಪಿ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ಹರಿಹರಪುರ-ಅಕ್ಕಿಹೆಬ್ಬಾಳು ಸಂಪರ್ಕ ಕಲ್ಪಿಸುವ ಸೇತುವೆಯ ಬಳಿ ಈ ದುರ್ಘಟನೆ ನಡೆದಿದೆ.

ಮಂಗಳವಾರ ಸಂಜೆ ಸುಮಾರು 5.30ರ ವೇಳೆಯಲ್ಲಿ ಹೇಮಾವತಿ ನದಿಯಲ್ಲಿ ಸುಮಾರು 25ಸಾವಿರ ಕ್ಯೂಸೆಕ್ ನೀರು ಹರಿಯುತ್ತಿತ್ತು, ಈ ದೃಶ್ಯ ನೋಡಲು ಸುಂದರವಾಗಿ ಕಾಣುತ್ತಿತ್ತು. ಈ ವೇಳೆ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಸಂದರ್ಭದಲ್ಲಿ ಶಿವಕುಮಾರ್ ಆಯತಪ್ಪಿ ಸೇತುವೆಯ ಮೇಲಿದ್ದ ನದಿಗೆ ಉರುಳಿ ಬಿದ್ದಿದ್ದಾನೆ.
ಶಿವಕುಮಾರ್ ಶವಕ್ಕಾಗಿ ಅಗ್ನಿಶಾಮಕ ಅಧಿಕಾರಿಗಳ ತಂಡವು ತೀವ್ರ ಶೋಧ ಕಾರ್ಯ ಕೈಗೊಂಡಿದೆ. ಸ್ಥಳಕ್ಕೆ ತಹಸೀಲ್ದಾರ್ ಶಿವಮೂರ್ತಿ, ರಾಜಸ್ವ ನಿರೀಕ್ಷಕಿ ಚಂದ್ರಕಲಾ ಪ್ರಕಾಶ್, ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಗಿರೀಶ್ ಭೇಟಿ ನೀಡಿದ್ದಾರೆ. ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ.












Click it and Unblock the Notifications