Zika virus: ಸಕ್ಕರೆ ನಾಡಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳಿವು
ಮಂಡ್ಯ, ನವೆಂಬರ್, 07: ಡೆಂಘೀ, ಚಿಕೂನ್ ಗುನ್ಯಾ ನಂತರ ಇದೀಗ ಜಿಲ್ಲೆಯಲ್ಲಿ ಝಿಕಾ ವೈರಸ್ ಭೀತಿ ಶುರುವಾಗಿದೆ. ಡೆಂಘೀ, ಚಿಕೂನ್ ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನೂ ಹರಡುತ್ತಿವೆ. ಹಗಲು ಹೊತ್ತಿನಲ್ಲಿ ಸೊಳ್ಳೆಗಳು ಕಚ್ಚುವುದರಿಂದ ಸೋಂಕು ಹರಡುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಝಿಕಾ ವೈರಸ್‌ನಿಂದ ಪ್ರಾಣಾಪಾಯದ ಭೀತಿ ಇರುವುದಿಲ್ಲ. ಆದರೆ, ಗರ್ಭಿಣಿಯರು ವೈರಸ್ ಬಗ್ಗೆ ಹೆಚ್ಚು ಜಾಗೃತರಾಗಿರಬೇಕು. ಏಕೆಂದರೆ, ಗರ್ಭಾವಸ್ಥೆಯಲ್ಲಿ ಈ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡುಬರುವುದಾಗಿ ವೈದ್ಯರು ಹೇಳಿದ್ದಾರೆ.

ಸೋಂಕಿನ ಲಕ್ಷಣಗಳು
ಝಿಕಾ ವೈರಸ್ ಹರಡಿದ ವ್ಯಕ್ತಿಯಲ್ಲಿ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು, ಕೀಲು-ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಬಹುತೇಕರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಕೆಲವರಲ್ಲಿ ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪದಲ್ಲಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ರೋಗ ಲಕ್ಷಣಗಳು ಕಂಡುಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕನ ಪತ್ತೆ ಹಚ್ಚಬಹುದು.
ಸೋಂಕಿಗೆ ಚಿಕಿತ್ಸೆ, ಲಸಿಕೆ ಇಲ್ಲ
ಈ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಸೋಂಕಿತರು ನೀರಿನಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು, ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ಔಷಧಗಳನ್ನು ಸೇವಿಸಬೇಕು. ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ಸೊಳ್ಳೆ ಪರದೆಯನ್ನು ಬಳಸುವುದು ಉತ್ತಮ ಎಂದು ತಿಳಿಸಲಾಗಿದೆ.
ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು, ಮನೆಯ ಒಳಾಂಗಣ ಮತ್ತು ಹೊರಾಂಗಣವನ್ನು ಸ್ವಚ್ಛವಾಗಿಡುವುದು. ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು. ಸೊಳ್ಳೆ ನಿರೋಧಕಗಳನ್ನು ಬಳಸಿ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.
ಗರ್ಭಿಣಿಯರು ಹೆಚ್ಚು ಜಾಗೃತಿಯಿಂದಿರಬೇಕು
ಗರ್ಭಿಣಿಯರು ಝಿಕಾ ವೈರಸ್ ಸೋಂಕಿನ ಬಗ್ಗೆ ಹೆಚ್ಚು ಜಾಗೃತರಾಗಿರಬೇಕು. ಗರ್ಭಿಣಿಯರಿಗೆ ಸೋಂಕಿನಿಂದ ಅಪಾಯವಿಲ್ಲದಿದ್ದರೂ ಹುಟ್ಟುವ ಮಗುವಿನ ಮೇಲೆ ಪರಿಣಾಮ ಬೀರುವುದರಿಂದ ಎಚ್ಚರ ವಹಿಸುವುದು ಅಗತ್ಯ. ಸೋಂಕಿತ ಗರ್ಭಿಣಿಯರ ಶಿಶುವಿನ ತಲೆ ಗಾತ್ರ ಕಡಿಮೆಯಾಗಿ ಬೆಳವಣಿಗೆಯಲ್ಲಿ ದೋಷ ಕಂಡುಬರುವುದರಿಂದ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು.
ರೋಗ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು. ಸೋಂಕು ಹರಡುವುದಕ್ಕೆ ಅವಕಾಶ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವ ಮೂಲಕ ಸೋಂಕನ್ನು ದೂರವಿಟ್ಟು ಶಿಶುವಿನ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ.
ಸೋಂಕು ಪ್ರಕರಣ ಪತ್ತೆಯಾಗಿಲ್ಲ
ಜಿಲ್ಲೆಯಲ್ಲಿ ಇದುವರೆಗೂ ಒಂದು ಝಿಕಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿಲ್ಲ. ಆದರೂ, ಆರೋಗ್ಯ ಇಲಾಖೆ ಸೋಂಕು ನಿಯಂತ್ರಣ ಕ್ರಮಗಳನ್ನು ಅನುಸರಿಸುತ್ತಾ, ಸ್ವಚ್ಛತೆ ಕುರಿತಂತೆ ಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಿದೆ. ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ಗುರುತಿಸಿ ಲಾರ್ವಾಗಳನ್ನು ನಾಶಪಡಿಸುವ ಕಾರ್ಯದಲ್ಲಿ ತೊಡಗಿದೆ.
ನಗರ, ಪಟ್ಟಣ ಪ್ರದೇಶಗಳಲ್ಲಿ ಸೊಳ್ಳೆ ನಾಶಕ ಸಿಂಪರಣೆ ಮಾಡಲಾಗುತ್ತಿದೆ. ನೀರು ನಿಂತಿರುವ ಚರಂಡಿಗಳು, ನೀರು ಸಂಗ್ರಹಣೆಯಾಗಿರುವ ಸ್ಥಳಗಳನ್ನು ಗುರುತಿಸಿ ಸಿಂಪಡಣೆ ಮಾಡುವ ಕಾರ್ಯದಲ್ಲಿ ನಗರಸಭೆ, ಪುರಸಭೆ, ಪಂಚಾಯಿತಿಗಳು ತೊಡಗಿಸಿಕೊಂಡಿವೆ.
ಇನ್ನು ಜಿಲ್ಲೆಯಲ್ಲಿ ಜಿಕಾ ವೈರಸ್ ಸೋಂಕು ಒಂದು ಪ್ರಕರಣವೂ ಪತ್ತೆಯಾಗಿಲ್ಲ. ಸೋಂಕಿನಿಂದ ಸಾವು ಸಂಭವಿಸುವುದಿಲ್ಲ. ಗರ್ಭಿಣಿಯರು ಎಚ್ಚರದಿಂದ ಇರಬೇಕು. ಸೋಂಕಿತ ಗರ್ಭಿಣಿಯರಿಗೆ ಹುಟ್ಟುವ ಶಿಶುವಿನ ತಲೆಯ ಗಾತ್ರ ಕಡಿಮೆ ಇರುತ್ತದೆ. ಉಳಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೆ ಸೋಂಕು ಹರಡದಂತೆ ತಡೆಯಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ತಿಳಿಸಿದ್ದಾರೆ.
ನಗರ ವ್ಯಾಪ್ತಿಯ ಎಲ್ಲಾ ಬಡಾವಣೆಗಳಲ್ಲೂ ಸೊಳ್ಳೆ ನಾಶಕಗಳನ್ನು ಸಿಂಪಡಣೆ ಮಾಡಲಾಗುತ್ತಿದೆ. ನೀರು ಸಂಗ್ರಹವಾಗದಂತೆ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಸ್ವಚ್ಛತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನಗರದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಪೂರಕ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಮಂಡ್ಯ ನಗರಸಭೆ ಪೌರಾಯುಕ್ತರು ಆರ್.ಮಂಜುನಾಥ್ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications