ಮಂಗಳೂರು: ಸಿಡಿಮದ್ದು ತಯಾರಿ ವೇಳೆ ಸ್ಫೋಟ, ಇಬ್ಬರು ಸಾವು

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಮಾರ್ಚ್ 20: ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಸೋಮವಾರ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಂಬಳಬೆಟ್ಟು ಶಾಂತಿನಗರ ನಿವಾಸಿ ಉಮರ್ ಎಂಬುವವರ ಪುತ್ರ ಹಾಶಿಮ್ (25) ಮತ್ತು ಕಂಬಳಬೆಟ್ಟು ನೂಜಿ ನಿವಾಸಿ ಸುಂದರ್ ಪೂಜಾರಿ (39) ಎಂದು ಗುರುತಿಸಲಾಗಿದೆ.

2 dead in crackers factory explosion at Kambalabettu Mangaluru

ರಫೀಕ್ ಎಂಬುವವರಿಗೆ ಸೇರಿದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸಿಡಿಮದ್ದು ತಯಾರಿಸುತ್ತಿದ್ದ ಸಂದರ್ಭದಲ್ಲಿ ಈ
ದುರ್ಘಟನೆ ಘಟನೆ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಘಟಕಕ್ಕೂ ಭಾಗಶಃ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Two killed in a crackers factory explosion on March 20, at Kambalabettu, Mangaluru.
Please Wait while comments are loading...