ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Posted By:
Subscribe to Oneindia Kannada

ಮಂಗಳೂರು, ಆಗಸ್ಟ್ 9: ನಗರದ ಬಂಟ್ಸ್ ಹಾಸ್ಟೆಲ್‍ನ ಓಂಕಾರ ನಗರದಲ್ಲಿ ಆ.25 ರಿಂದ 27ರ ವರೆಗೆ ನಡೆಯಲಿರುವ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯ ಸಮಾರಂಭವು ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ಆ. 8ರಂದು ಜರುಗಿತು.

ಶ್ರೀ ಸಿದ್ಧಿನಾಯಕ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಮಾಲಾಡಿ ಅಜಿತ್ ಕುಮಾರ್ ರೈ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಸೇವಾ ರಶೀದಿ ಪುಸ್ತಕ ಬಿಡುಗಡೆಗೊಳಿಸಿದರು.

3 days Ganeshotsav to be held from Aug 25 at Bunts hostel

ಪ್ರತಿಷ್ಠಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ, ಮಂಗಳೂರು ತಾಲೂಕು ಬಂಟರ ಸಂಘದ ಸಂಚಾಲಕ ಉಮೇಶ್ ರೈ, ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ, ಮೀನಾ ಆರ್.ಶೆಟ್ಟಿ ವಿವಿಧ ವಿಷಯಗಳ ಬಗ್ಗೆ ವಿವರ ನೀಡಿದರು.

ಟ್ರಸ್ಟಿಗಳಾದ ಶೆಡ್ಯೆ ಮಂಜುನಾಥ ಭಂಡಾರಿ, ರವಿರಾಜ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ರವಿ ಶೆಟ್ಟಿ, ಡಾ. ದೇವದಾಸ ರೈ, ಮಂಗಳೂರು ತಾಲೂಕು ಬಂಟರ ಸಂಘದ ಸಂಚಾಲಕ ಜಯರಾಮ ಸಾಂತ ಹಾಗೂ ವಿವಿಧ ಬಂಟರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಂ.ಸುಂದರ ಶೆಟ್ಟಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಸುಕೇಶ್ ಚೌಟ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಆನಂದ ಶೆಟ್ಟಿ ಅಡ್ಯಾರು ವಂದಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Sarvajanika Sri Ganeshotsav samiti, Bunts hostel to organize 3 days Annual Ganeshotsav at Omkar Nagar, Bunts Hostel from Aug 25 -27. An invitation copy of it was released here on August 8th at S M Shetty Auditoriam at Bunts Hostel.
Please Wait while comments are loading...