ಮಂಗಳೂರು ವಿಮಾನ ನಿಲ್ದಾಣದ ರನ್‌ವೇಗೆ 4 ಸಾವಿರ ಕೋಟಿ ರು. ಅಗತ್ಯ

Posted By:
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 14 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆನಗುದಿಗೆ ಬಿದ್ದಿರುವ ರನ್‌ವೇ ವಿಸ್ತರಣೆ ಕಾಮಗಾರಿಗೆ ಹೊಸ ಪ್ರಸ್ತಾವನೆ ಮುಂದಿರಿಸಿದ್ದು ಭೂ ಸ್ವಾಧೀನಕ್ಕೆ 4 ಸಾವಿರ ಕೋಟಿ ರೂಪಾಯಿ ಅಗತ್ಯವಿದೆ ಎಂದು ತಿಳಿಸಿದೆ.

ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ

ಮಂಗಳೂರು ವಿಮಾನ ನಿಲ್ದಾಣ ಭೂಸ್ವಾಧೀನಕ್ಕೆ ಬರೋಬರಿ 4 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ. ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ಹಾಗೂ ಬಾಕಿ ಉಳಿದಿರುವ ಕಾಮಗಾರಿಗೆ ಸಂಬಂಧಪಟ್ಟಂತೆ ಸಂಸದ ನಳಿನ್ ಕುಮಾರ್ ಕಟ್ಟಿದ ಅಧ್ಯಕ್ಷತೆಯಲ್ಲಿ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ಇಂದು ನಡೆದ ವಿಶೇಷ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದರು.

4,000 thousand crores needed for runway extension of Mangaluru airport

ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, 'ರನ್ವೇ ವಿಸ್ತರಣೆಗೆ ಅಗತ್ಯ ಭೂಮಿಯನ್ನು ಸ್ವಾಧೀನ ಪಡಿಸಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಈ ಕೆಲಸ ಆದಲ್ಲಿ ರನ್‌ವೇ ವಿಸ್ತರಿಸುವ ಕೆಲಸವನ್ನು ಕೇಂದ್ರ ವಿಮಾನಯಾನ ಸಚಿವಾಲಯ ತಕ್ಷಣ ಕೈಗೆತ್ತಿಕೊಳ್ಳಲಿದೆ' ಎಂದರು..

ಮುಲ್ಕಿ ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್, ಮಂಗಳೂರು ಉಪ ವಿಭಾಗಾಧಿಕಾರಿ ರೇಣುಕಾ ಪ್ರಸಾದ್, ಕೆನರಾ ಚೇಂಬರ್ ಅಧ್ಯಕ್ಷ ಜೀವನ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Airports Authority of India, Mangaluru has come up with new proposal as per which Rs 4 thousand crores would be required for the extension of runway here. The issue of runway extension has been in limbo since many years.
Please Wait while comments are loading...