ಮೊಮ್ಮಗನ ಬರ್ತ್ ಡೇ ಪಾರ್ಟಿಗೆಂದು ಹೊರಟ್ಟಿದ್ದ ಅಜ್ಜ ಸಾವು

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ, 16 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ತಿಂಗಳ ಹಸುಳೆ ಸಹಿತ ಇಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ ಸಮೀಪದ ಉಕ್ಕುಡ ಚೆಕ್ ಪೋಸ್ಟ್ ಬಳಿ ಸಂಭವಿಸಿದೆ.

ಪುಣಚದಲ್ಲಿರುವ ತಮ್ಮ ಪುತ್ರಿಯ ಮಗುವಿನ ಹುಟ್ಟುಹಬ್ಬದ ಪಾರ್ಟಿಗೆಂದು ಸುಲೈಮಾನ್ ಕುಟುಂಬ, ಕಡಂಬುವಿನಿಂದ ವಿಟ್ಲ ಮಾರ್ಗವಾಗಿ ಮಾರುತಿ ಆಲ್ಟೋ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಉಕ್ಕುಡ ಚೆಕ್ ಪೋಸ್ಟ್ ಬಳಿ ಈ ಅಪಘಾತ ಸಂಭವಿಸಿದೆ.

5 injured One children among two dead in car accident at Ukkuda Check Post near Vital

ಕಡಂಬು ಸಮೀಪದ ಬದಿಯಾರು ನಿವಾಸಿ ಸುಲೈಮಾನ್ ಹಾಜಿ(62) ಮತ್ತು ಅವರ ಮೊಮ್ಮಗ ಶಹಾಝ್ (3 ತಿಂಗಳು)ಎನ್ನುವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಸುಲೈಮಾನ್ ಹಾಜಿರವರ ಪತ್ನಿ ಹಾಗೂ ಕಾರು ಚಲಾಯಿಸುತ್ತಿದ್ದ ಸುಲೈಮಾನ್ ರವರ ಮೈದುನ ಮುಹಮ್ಮದ್ ಮತ್ತು ಪತ್ನಿ, ಮಗು ಸಹಿತ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನೋರ್ವ ಮಹಿಳೆಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ವಿಟ್ಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಸುಲೈಮಾನ್ ಹಾಜಿ ವಾರದ ಹಿಂದಷ್ಟೇ ಊರಿಗೆ ಬಂದಿದ್ದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಸಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
5 injured One children among two dead in car accident at Ukkuda Check Post near Vital Bantwal on Moday, January 16.
Please Wait while comments are loading...