ಯುವತಿಯರೊಂದಿಗೆ ಅಸಭ್ಯ ವರ್ತನೆಗೈದ ಕಾಮಿಯ ಬಂಧನ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು,ಫೆಬ್ರವರಿ, 20: ಯುವಕನೋರ್ವ ಬಾಲಕಿಯೊಂದಿಗೆ ಅಸಭ್ಯ ವರ್ತನೆ ತೋರಿದ್ದು, ಮತ್ತೊಬ್ಬ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಸೌಧದ ಬಳಿಯ ಮೂಡಿಜೇರ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ಬಂಧಿತ ಆರೋಪಿಯೇ ಖಲೀಲ್ (21). ಈತ ಮಂಗಳೂರಿನ ಮಲಾರು ಮೊಹಿಯುದ್ದೀನ್ ಮಸೀದಿ ಬಳಿಯ ನಿವಾಸಿ ಎಂದು ತಿಳಿದು ಬಂದಿದೆ. ಈತನ ಅಸಭ್ಯ ವರ್ತೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.[ನಾಯಿಯ ಮೇಲೆ ಅತ್ಯಾಚಾರ ಮಾಡಿದ ವಿಕೃತಕಾಮಿ]

Mangaluru

ಘಟನೆಯ ವಿವರ:

15ರ ಹರೆಯದ ಬಾಲಕಿ ಶುಕ್ರವಾರ ಮಂಗಳೂರಿನ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದಾಳೆ. ಬಳಿಕ ಈಕೆ ಮುಲಾರದಲ್ಲಿರುವ ಬೀಡಿ ಬ್ರಾಂಚಿಗೆ ಬೀಡಿ ನೀಡಿ ಅಲ್ಲಿಂದ ಹಿಂದಿರುಗುವ ವೇಳೆ ಖಲೀಲ್ ಹಿಂಬದಿಯಿಂದ ಬಂದು ಬಾಲಕಿಯನ್ನು ಗಟ್ಟಿಯಾಗಿ ಅಪ್ಪಿಕೊಂಡಿದ್ದಾನೆ. ಗಾಬರಿಗೊಂಡ ಬಾಲಕಿ ಕಿರುಚಾಡಿ ಸ್ಥಳದಿಂದ ಓಡಿ ಪರಾರಿಯಾಗಿದ್ದಳು.[ಮಹಿಳಾ ದೌರ್ಜನ್ಯ ವಿರುದ್ದ ದನಿಯಾದ ವಾಮಾ ಬಲ್ದೋಟ]

ಈ ಘಟನೆಯಾದ ಸ್ವಲ್ಪ ಹೊತ್ತಿನಲ್ಲೇ 21 ರ ಹರೆಯದ ಯುವತಿಯೋರ್ವಳು ಅದೇ ರಸ್ತೆಯಲ್ಲಿ ತೆರಳುತ್ತಿದ್ದಾಗ ಆರೋಪಿ ಖಲೀಲ್ ಆಕೆಯ ಕೈ ಹಿಡಿದು ಮಾನಭಂಗಕ್ಕೆ ಯತ್ನಿಸಿದ್ದಾನೆ. ತಕ್ಷಣ ಆಕೆಯೂ ಕೂಗಿಕೊಂಡು ಓಡುತ್ತಿರುವುದನ್ನು ಕಂಡ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಆರೋಪಿ ಖಲೀಲನನ್ನು ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.[2 ಹೆಂಡತಿ ಅಥವಾ ಜೈಲು, ನಿಮ್ಮ ಆಯ್ಕೆ ಯಾವುದು?]

ಖಲೀಲ್ ಹಳೇ ಟಿವಿ ಮಾರಾಟದ ಕಸುಬು ಮಾಡಿಕೊಂಡಿದ್ದಾನೆ. ಈ ಸಂಬಂಧ ಕೊಣಾಜೆ ಠಾಣೆಯಲ್ಲಿ ಖಲೀಲ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A person Khalil (21) try to rape two girls in Mangaluru on Friday, February, 19th. Konaje police filed complaint under POCSO (Protection of Children from Sexual Offences Act.
Please Wait while comments are loading...