ಕೊಡಗು ಕಾಲೇಜ್ ಪ್ರಿನ್ಸಿಪಾಲ್ ಮಂಗಳೂರಲ್ಲಿ ಆತ್ಮಹತ್ಯೆಗೆ ಶರಣು

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು,ಜನವರಿ, 22: ಕೊಡಗು ಜಿಲ್ಲೆಯ ಖಾಸಗಿ ಪಿ.ಯು. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಶರಣಾದವರನ್ನು ಮೂಲತಃ ಮಂಗಳೂರಿನ ತಲಪಾಡಿ ನಿವಾಸಿ ಸುದೇಶ್ (45) ಎಂದು ಗುರುತಿಸಲಾಗಿದೆ. ಸುದೇಶ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕು ಮಾದಾಪುರ ಬಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ 2001ರಿಂದ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.[ಬರೋಬ್ಬರಿ 3 ಹೆಬ್ಬಾವು ಹಿಡಿದ ಮಂಗಳೂರು ಯುವಕರು!]

Mangaluru

ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಕಳೆದೆರಡು ದಿನಗಳ ಹಿಂದೆ ಕಾಲೇಜಿನಿಂದ ರಜೆಯ ಮೇಲೆ ಮಂಗಳೂರಿಗೆ ಆಗಮಿಸಿ ಬುಧವಾರ ರಾತ್ರಿ ಬಿಜೈ ಕೆಎಸ್ಆರ್ ಟಿಸಿ ಸಮೀಪದ ಲಾಡ್ಜ್ ನಲ್ಲಿ ತಂಗಿದ್ದರು. ಗುರುವಾರ ಸಂಜೆಯ ವೇಳೆಗೆ ವಸತಿ ಗೃಹ ಸಿಬ್ಬಂದಿ ಕೊಠಡಿಗೆ ತೆರಳಿದಾಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.[ಎಲ್ಲೆಂದ್ರಲ್ಲಿ ವಾಹನ ಪಾರ್ಕ್ ಮಾಡಿದ್ರೆ ಮನೆಗೆ ಬರುತ್ತೆ ನೋಟಿಸ್]

ಸದೇಶ್ ಪತ್ನಿ ಸ್ನೇಹಲತಾ ಸುರತ್ಕಲ್ ನ ಐಟಿಐ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಪ್ರಿನ್ಸಿಪಾಲ್‌ ಸದೇಶ್ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಘಟನೆ ಬಗ್ಗೆ ಉರ್ವ ಪೊಲೀಸ್‌‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A principal Sudesh (45) committed suicide in Mangaluru on Thursday, January 21st. He is principal in B Chennamma college, Madapura Somavarapete,Kodagu.
Please Wait while comments are loading...