ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಲಂಚ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಪ್ರಾಜೆಕ್ಟ್ ಇಂಜಿನಿಯರ್

|
Google Oneindia Kannada News

ಮಂಗಳೂರು, ಅಕ್ಟೋಬರ್. 04 : ಸರ್ಕಾರದಿಂದ ದೊರೆಯುವ ಬಯೋ ಗ್ಯಾಸ್ ಸಬ್ಸಿಡಿಗೆ ಏಜೆನ್ಸಿ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದ ಪ್ರಾಜೆಕ್ಟ್ ಇಂಜಿನಿಯರ್ ಒಬ್ಬರು ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಮಂಗಳೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿರುವ ಸಮಗ್ರ ಗ್ರಾಮೀಣ ಇಂಧನ ಯೋಜನೆಯ ಪ್ರಾಜೆಕ್ಟ್ ಇಂಜಿನಿಯರ್ ಆಗಿರುವ ಎನ್.ನಾಗೇಶ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದವರು.

A project engineer has been caught in a red hand for ACB trap in Mangaluru

ಎಸಿಬಿ ದಾಳಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳ ಮೇಲೆ ಪ್ರಕರಣಎಸಿಬಿ ದಾಳಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳ ಮೇಲೆ ಪ್ರಕರಣ

ಇವರು ಬಯೋ ಗ್ಯಾಸ್ ಏಜೆನ್ಸಿ ಮಾಲೀಕರಲ್ಲಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಬಯೋ ಗ್ಯಾಸ್ ಎಜೆನ್ಸಿ ಮಾಲೀಕರು 15 ಸಾವಿರ ರೂಪಾಯಿ ನೀಡಿದ್ದು, ಮತ್ತೆ 35 ಸಾವಿರ ರೂಪಾಯಿ ನೀಡದಿದ್ದರೆ ಸಬ್ಸಿಡಿ ಹಣ ಬಿಡುಗಡೆ ಮಾಡುವುದಿಲ್ಲ ಎಂದು ಇಂಜಿನಿಯರ್ ಪೀಡಿಸುತ್ತಿದ್ದ ಎಂದು ದೂರಲಾಗಿದೆ.

A project engineer has been caught in a red hand for ACB trap in Mangaluru

ಬೆಳ್ಳಂಬೆಳಗ್ಗೆ ಹಳೆಯಂಗಡಿ ಪಂಚಾಯತ್ ಕಚೇರಿ ಮೇಲೆ ಎಸಿಬಿ ದಾಳಿಬೆಳ್ಳಂಬೆಳಗ್ಗೆ ಹಳೆಯಂಗಡಿ ಪಂಚಾಯತ್ ಕಚೇರಿ ಮೇಲೆ ಎಸಿಬಿ ದಾಳಿ

ಇದರಿಂದ ನೊಂದ ಬಯೋ ಗ್ಯಾಸ್ ಏಜೆನ್ಸಿ ಮಾಲೀಕರು ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಬುಧವಾರ ಪ್ರಾಜೆಕ್ಟ್ ಇಂಜಿನಿಯರ್ ಎನ್.ನಾಗೇಶ್ ಅವರು 30ಸಾವಿರ ರೂಪಾಯಿ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

English summary
A project engineer has been caught in a red hand for ACB trap in Mangaluru. Acb officers arrested N Nagesh, Project Engineer of Integrated Rural Energy Project at Mangalore District Panchayat Office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X