ದುಷ್ಕರ್ಮಿಗಳ ದಾಳಿಗೆ ಒಳಗಾಗಿದ್ದ ಅಬ್ದುಲ್ ಬಷೀರ್ ನಿಧನ

Posted By:
Subscribe to Oneindia Kannada

ಮಂಗಳೂರು, ಜನವರಿ 7: ಮಂಗಳೂರಿನ ಕೊಟ್ಟಾರ ಚೌಕಿಯ ಬಳಿ ದುಷ್ಕರ್ಮಿಗಳ ದಾಳಿಗೆ ಒಳಗಾಗಿ ನಗರದ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬ್ದುಲ್ ಬಷೀರ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮಂಗಳೂರು ಹೊರ ವಲಯದ ಕಾಟಿಪಳ್ಳ ದಲ್ಲಿ ದೀಪಕ್ ರಾವ್ ಕೊಲೆ ನಡೆದ ಡಿಸೆಂಬರ್ 3ರ ರಾತ್ರಿ ವೇಳೆ ಕೊಟ್ಟಾರ ಚೌಕಿಯಲ್ಲಿರುವ ಫಾಸ್ಟ್ ಫುಡ್ ಅಂಗಡಿಯ ಕೆಲಸ ಮುಗಿಸಿ ಅಬ್ದುಲ್ ಬಷೀರ್ ಮನೆಗೆ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು.

Abdul Basheer, who was assaulted on Dec 3 succumbs to injuries

ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸತತ 17 ಬಾರಿ ಬಶೀರ್ ಅವರ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ರಸ್ತೆಬದಿಯಲ್ಲಿ ಬಿದ್ದಿದ್ದ ಬಷೀರ್ ಅವರನ್ನು ಶೇಖರ್ ಮತ್ತು ರಾಹುಲ್ ಎಂಬ ಯುವಕರು ಆಸ್ಪತ್ರೆಗೆ ಸೇರಿಸಿದ್ದರು.

ಮಂಗಳೂರಲ್ಲಿ ಹಲ್ಲೆಗೊಳಗಾದ ಬಷೀರ್ ಸ್ಥಿತಿ ಅತ್ಯಂತ ಗಂಭೀರ

ಕಳೆದ 4 ದಿನಗಳಿಂದ ನಗರದ ಎ.ಜೆ. ಆಸ್ಪತ್ರೆಯಲ್ಲಿ ಬಷೀರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಬಷೀರ್ ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಿಗ್ಗೆ 8.10ಕ್ಕೆ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Abdul Basheer, who was attacked by four assailants on December 3 in Kottara Chowki, Mangaluru, succumbed to injuries on Sunday, January 7 in AJ Hospital, Mangaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ