ಮಂಗಳೂರು : ಅಪಘಾತದ ರಭಸಕ್ಕೆ ಕಮರಿಗೆ ಉರುಳಿದ ಬಸ್

Posted By:
Subscribe to Oneindia Kannada

ಮಂಗಳೂರು, ನವೆಂಬರ್ 18 : ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ಕು ಮಂದಿ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿ ಬಳಿ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ ಖಾಸಗಿ ಬಸ್ ಹಾಗೂ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಉಡುಪಿ ಮೂಲದವರ ಓಮ್ನಿ ಕಾರು ಪರಸ್ಪರ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಸಂದೇಶ್ ಎಂಬುವವರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

Accident between Bus and a Car one died

ಮೃತದೇಹವನ್ನು ನೆಲ್ಯಾಡಿಯ ಆಸ್ಪತ್ರೆಯಲ್ಲಿರಿಸಲಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಬಸ್ ಕಮರಿಗೆ ಉರುಳಿದೆ.

Accident between Bus and a Car one died

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
An accident had early morning in Mangalore between a private Bus and Omni car, one man died and four passengers injured badly.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ