ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವ ಕುಸ್ತಿ ಚಾಂಪಿಯನ್ ಶಿಪ್‌ಗೆ ಆಳ್ವಾಸ್ ವಿದ್ಯಾರ್ಥಿನಿ ಆಯ್ಕೆ

|
Google Oneindia Kannada News

ಮಂಗಳೂರು, ಅ. 19 : ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬಳು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾಳೆ. ಸೆಪ್ಟೆಂಬರ್‌ನಲ್ಲಿ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಡೆಯಲಿದೆ.

ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕುಸ್ತಿಪಟು ಮಮತಾ ಕೆಳೋಜಿ ವಿಶ್ವ ಕುಸ್ತಿ ಚಾಂಪಿಯನ್ ಶಿಪ್‌ಗೆ ಆಯ್ಕೆಯಾದವರು. ಲಖನೌನ ಸಾಯಿ ಟ್ರೇನಿಂಗ್ ಸೆಂಟರ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ಟ್ರಯಲ್ ಸ್ಪರ್ಧೆಯಲ್ಲಿ 38 ಕೆಜಿ ವಿಭಾಗದಲ್ಲಿ ಆಯ್ಕೆಗೊಂಡಿದ್ದಾರೆ.

Alva's student qualifies for World Wrestling Championship

ಗ್ರೀಕ್ ನ ಅಥೆನ್ಸ್ ನಲ್ಲಿ ಸೆಪ್ಟೆಂಬರ್ 1ರಿಂದ 6 ರವರೆಗೆ ವಿಶ್ವ ಚಾಂಪಿಯನ್ ಶಿಪ್ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರು ಮಮತಾ ಕೆಳೋಜಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

'ಕಾವ್ಯ ನಿಗೂಢ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ''ಕಾವ್ಯ ನಿಗೂಢ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ'

ಮಮತಾ ಕೆಳೋಜಿ ಅವರು ಬಾಲ್ಯದಲ್ಲಿಯೇ ಕುಸ್ತಿ ಅಖಾಡಕ್ಕಿಳಿದ್ದರು. ಹಳಿಯಾಳದ ಸ್ಥಳೀಯ ಕುಸ್ತಿ ಅಖಾಡದಲ್ಲಿ ಮೂರು ವರ್ಷ ತರಬೇತಿ ಪಡೆದಿದ್ದಾರೆ. ನಂತರ ಒಂಭತ್ತನೇ ತರಗತಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗೆ ಕ್ರೀಡಾ ಕೋಟಾದಡಿ ಪ್ರವೇಶ ಪಡೆದರು. ಕಳೆದ ನಾಲ್ಕು ವರ್ಷದಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕುಸ್ತಿ ಕೋಚ್ ತುಕಾರಾಮ ಅವರಿಂದ ತರಬೇತಿ ಪಡೆಯುತ್ತಿದ್ದಾರೆ .

ಕಳೆದ ಜೂನ್ ನಲ್ಲಿ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ಗಾಗಿ ನಡೆದ ಆಯ್ಕೆ ಪಂದ್ಯಾವಳಿಯಲ್ಲಿ ಕೇವಲ ಒಂದು ಅಂಕದಿಂದ ಮಮತಾ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಅವಕಾಶದಿಂದ ವಂಚಿತರಾಗಿದ್ದರು.

ಮೋಹನ್ ಆಳ್ವರ ಬೆಂಬಲಕ್ಕೆ ಹರಿದು ಬಂದ ಭಾರೀ ಜನಸ್ತೋಮಮೋಹನ್ ಆಳ್ವರ ಬೆಂಬಲಕ್ಕೆ ಹರಿದು ಬಂದ ಭಾರೀ ಜನಸ್ತೋಮ

ಆದರೆ, ಲಖನೌನ ಸಾಯಿ ಟ್ರೇನಿಂಗ್ ಸೆಂಟರ್ ನಲ್ಲಿ ಸಬ್ ಜೂನಿಯರ್ ಬಾಲಕಿಯರ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ಗಾಗಿ ನಡೆದ ಟ್ರಯಲ್ಸ್ ಸ್ಪರ್ಧೆಯಲ್ಲಿ ಉತ್ತರ ಪ್ರದೇಶದ ಕುಸ್ತಿಪಟು ರಂಜನಾ ಅವರನ್ನು ಕೇವಲ 1.20 ನಿಮಿಷ ದಲ್ಲಿ 10-0 ಅಂತರದಲ್ಲಿ ಪರಾಭವಗೊಳಿಸಿದರು.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರಿಂದ 6 ರವರೆಗೆ ನಡೆಯಲಿರುವ ವಿಶ್ವ ಸಬ್ ಜೂನಿಯರ್ ಬಾಲಕಿಯರ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸುವ ಅವಕಾಶವನ್ನು ಮಮತಾ ಪಡೆದಿದ್ದಾರೆ.

English summary
Moodbidri Alvas student Mamatha Keloji qualifies for World Wrestling Championship to be held in September 1 to 6 at Athens.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X