ಅಥ್ಲೆಟಿಕ್ಸ್ ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ. 17 : ಕೊಯಮತ್ತೂರಿನಲ್ಲಿ ನಡೆದ 77ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ ನಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ 3 ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಚೆನ್ನೈನ ಅಣ್ಣಾ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆ ಈ ಕ್ರೀಡಾಕೂಟದಲ್ಲಿ ಆಳ್ವಾಸ್ ನ ಕ್ರೀಡಾಪಟುಗಳಾದ ಧಾರುಣ್ - 400 ಮೀಟರ್ ಹರ್ಡಲ್ಸ್, ಶ್ರೀಜೀತ್ -ತ್ರಿಪಲ್ ಜಂಪ್, ಹರಿಭಕ್ಷ್ -3,000 ಮೀ ಸ್ಟೀಪಲ್ ಚೇಸ್ ನಲ್ಲಿ ದಾಖಲೆಯನ್ನು ಬರೆದಿದ್ದಾರೆ.[ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ: ಆಳ್ವಾಸ್ ಗೆ ಪ್ರಶಸ್ತಿ]

Alvas athletes shine at 77th Akhila Bharath Inter-university Atheltics Championship

ಹಾಗೆಯೇ ಧಾರುಣ್ ಶ್ರೇಷ್ಠ ಅಥ್ಲೀಟ್ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ 64 ಕ್ರೀಡಾಪಟುಗಳಲ್ಲಿ ಆಳ್ವಾಸ್ ನ 55 ಮಂದಿ ಕ್ರೀಡಾಪಟುಗಳಿದ್ದರು.[ಆಳ್ವಾಸ್ ವಿದ್ಯಾರ್ಥಿಗಳಿಂದ ವೈಜ್ಞಾನಿಕ ವಿಜ್ಞಾನ ಪ್ರದರ್ಶನ]

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ದೊರೆತ 12 ಚಿನ್ನ, 8 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು ಆಳ್ವಾಸ್ ಕ್ರೀಡಾಪಟುಗಳೇ ಪಡೆದಿದ್ದಾರೆ. ಹೀಗಾಗಿ ವಿಶ್ವವಿದ್ಯಾನಿಲಯ ದಾಖಲೆಯ 178 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ ಶಿಪ್ ಗೆದ್ದುಕೊಂಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The outstanding performance by Alvas college students enabled Mangaluru University to bag the overall championship in the 77th Akhila Bharath Inter-university Atheltics Championship held at Coimbatore. The championship was organised by Anna University in Chennai.
Please Wait while comments are loading...