ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಗೆ ಸಮಗ್ರ ಪ್ರಶಸ್ತಿ

Posted By:
Subscribe to Oneindia Kannada

ಮಂಗಳೂರು, ಅಕ್ಟೋಬರ್ 23: : ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಮಟ್ಟದ 17 ವಯೋಮಿತಿ ವಿಭಾಗದ ಪ್ರೌಢ ಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ಆಳ್ವಾಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ದಾಖಲೆ ನಿರ್ಮಿಸಿದ್ದಾರೆ.

ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್

ಒಟ್ಟು 17 ಚಿನ್ನ, 04 ಬೆಳ್ಳಿ ಹಾಗೂ 08 ಕಂಚಿನ ಪದಕಗಳನ್ನು ಪಡೆದು ಒಟ್ಟು 29 ಪದಕಗಳನ್ನು ಗೆದ್ದು 4 ನೂತನ ಕೂಟ ದಾಖಲೆಗಳನ್ನು ನಿರ್ಮಿಸಿ ಸಾಧನೆ ಮೆರೆದಿದ್ದಾರೆ.

Alvas High School students grab 29 medals in Athletics

17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಅಣ್ಣಪ್ಪ ನಾಯಕ್- ಚಕ್ರ ಎಸೆತ, ರಿನ್ಸ್ ಜೋಸೆಫ್ - 400ಮೀ, ಗೋಪಾಲಕೃಷ್ಣ- ಪೋಲ್‍ವಾಲ್ಟ್, ಅಜಿತ್ ಎ.- ಎತ್ತರ ಜಿಗಿತದಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದರು.

ಈ ಕ್ರೀಡಾಕೂಟದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಯನ್ನು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಅಣ್ಣಪ್ಪ ನಾಯಕ್ ಪಡೆದುಕೊಂಡರು.

ಆಳ್ವಾಸ್ ಪ್ರೌಢಶಾಲೆಯಿಂದ 16 ಜನ ಕ್ರೀಡಾಪಟುಗಳು ಮುಂದಿನ ನವೆಂಬರ್ ನಲ್ಲಿ ಭೋಪಾಲ್‍ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕೂಲ್ ಗೇಮ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ ನಲ್ಲಿ ಭಾಗವಹಿಸಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Moodbidre Alvas High School students who represented Dakshina Kannada at the state level 17th age high school at the Belgaum district stadium have won 17 gold, 04 silver and 08 bronze medals.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ